BJP: ನಿಮ್ಗೆ ಧಮ್ಮಿದ್ರೆ, ತಾಕತ್ತಿದ್ರೆ ಎಲ್ಲಿಂದಾದ್ರೂ ಸಂಗ್ರಹ ಮಾಡಿBJP :15 ಕೆಜಿ ಅಕ್ಕಿ ಕೊಡಿ: ಬಿಜೆಪಿ ತೀವ್ರ ಪ್ರತಿಭಟನೆ

Latest Karnataka political news BJP leaders have demanded that the Karnataka government should provide 15 kg of rice

BJP: ಸರ್ಕಾರದ 10 ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡಲು ನಿರಾಕರಿಸಿದೆ ಎನ್ನಲಾದ ಕೇಂದ್ರ ಸರ್ಕಾರದ ನಿಲುವಿನ ವಿರುದ್ಧ ಒಂದು ಕಡೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಯಾದಿಯಾಗಿ ಕಾಂಗ್ರೆಸ್ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಭಾರೀ ಮಳೆಯ ಮಧ್ಯೆಯೇ ಪ್ರತಿಭಟನೆ ನಡೆದರೆ, ಕಾಂಗ್ರೆಸ್ ಜನತೆಗೆ ನೀಡಿದ್ದ ಭರವಸೆಯಂತೆ 10 ಕೆ.ಜಿ ಅಕ್ಕಿ ವಿತರಿಸಬೇಕೆಂದು ಆಗ್ರಹಿಸಿ ಬೆಂಗಳೂರು ಸೇರಿ ಒಟ್ಟು 10 ವಿಭಾಗ ಕೇಂದ್ರಗಳಲ್ಲಿ ಬಿಜೆಪಿಯಿಂದ(Bjp)ಪ್ರತಿಭಟನೆ ನಡೆಸಿತು.

ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಬಿಜೆಪಿ ನಾಯಕರು 10 ಕೆಜಿ ಅಲ್ಲ, 15 ಕೆಜಿ ಅಕ್ಕಿ ಕೊಡಿ ಎಂದು ಪ್ರತಿಭಟನೆ ಮಾಡಲು ಆರಂಭಿಸಿದ ತಕ್ಷಣವೇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ ಅಶೋಕ್, ಎನ್ ರವಿಕುಮಾರ್ ಸೇರಿ ಅನೇಕರು ಪ್ರತಿಭಟನೆ ಆರಂಭಿಸಿದರೂ, ಅದಕ್ಕೆ ಪೊಲೀಸರು ಅವಕಾಶ ನೀಡಲು ನಿರಾಕರಿಸಿದ್ದಾರೆ.

“ಕಾಂಗ್ರೆಸ್ ತಾತ್ವಿಕ ಒಪ್ಪಿಗೆ ಕೊಡುವಾಗಲೇ ಅಕ್ಕಿ ಇರಲಿಲ್ಲ. ನಿಮಗೆ ಗ್ಯಾರಂಟಿ ಕೊಡುವಾಗ ಗೊತ್ತಿರಲಿಲ್ಲವಾ? ನಿಮಗೆ ನಿಜವಾಗಿಯೂ ಧಮ್, ತಾಕತ್ ಇದ್ರೆ ಎಲ್ಲ ಕಡೆಯಿಂದ ಅಕ್ಕಿ ಶೇಖರಣೆ ಮಾಡಿ ಒಬ್ಬರಿಗೆ 15 ಕೆಜಿಯಂತೆ ಅಕ್ಕಿ ಕೊಡಿ ” ಎಂದು ಸರ್ಕಾರಕ್ಕೆ ಸಾಮೂಹಿಕವಾಗಿ ಸವಾಲು ಹಾಕಿದ್ದಾರೆ.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ” ಇದೊಂದು ಸುಳ್ಳ-ಮಳ್ಳ ಸರ್ಕಾರ. ಸುಳ್ಳು ಹೇಳುವುದು, ನಂತರ ಮಳ್ಳನ ತರಹ ಮೋಸ ಮಾಡುವುದು. ನಾವು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಇಂದು ಒಂದು ಕೆಜಿ ಕೂಡ ಕೊಡೋಕೆ ಇವರಿಂದ ಆಗುತ್ತಿಲ್ಲ. ಈಗ 5 ಕೆಜಿ ಅಕ್ಕಿ ಕೊಡುತ್ತಿರುವುದು ಕೇಂದ್ರ ಸರ್ಕಾರದಿಂದ. ಸುಳ್ಳು ಹೇಳುವ ಕಾಂಗ್ರೆಸ್ ಸರ್ಕಾರದಿಂದ ನಾವು ಪಾಠ ಕಲಿಯುವ ಅಗತ್ಯವಿಲ್ಲ. ” ಎಂದಿದ್ದಾರೆ ಮಾಜಿ ಸಿಎಂ.

ನಂತರ ಮಾಜಿ ಸಚಿವ ಆರ್. ಅಶೋಕ್ ಮಾತನಾಡಿ, ‘ ನಿಮಗೆ ಮಾನ ಮರ್ಯಾದೆ ಇದೆಯೇ, ನೀವು ಢೋಂಗಿ ರಾಜಕಾರಣ ಮಾಡುತ್ತೀರಾ ? ಅಕ್ಕಿ ಕೊಡುವುದನ್ನು ಮುಂದೆ ಹಾಕಿದರೆ ದುಡ್ಡು ಉಳಿಸಬಹುದು ಎಂದು ಕಾಂಗ್ರೆಸ್ ಲೆಕ್ಕಾಚಾರ. ಇಲ್ಲಿ ಪೊಲೀಸರು ಪ್ರತಿಭಟನೆಗೆ ಮುಂದಾದ ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಇವರದ್ದು ಗೂಂಡಾ ಸರ್ಕಾರ ” ಎಂದು ತೀವ್ರ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: 12ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ! ಸ್ವಯಂ ಘೋಷಿತ ದೇವಮಾನವ ಬಂಧನ!

Leave A Reply

Your email address will not be published.