Hyderabad: ಪತಿಯ ಅಕ್ರಮ ಸಂಬಂಧ; ಫೇಸ್ ಬುಕ್ ಲೈವ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

Latest news death news suicide Wife commits suicide after knowing about husband illicit relationship

Hyderabad: ಮಹಿಳೆಯೋರ್ವರು ಫೇಸ್ಬುಕ್ ಲೈವ್ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್(Hyderabad) ನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸನಾ (32) ಎಂದು ಗುರುತಿಸಲಾಗಿದೆ. ಗಂಡನ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಮೃತ ಮಹಿಳೆ‌ ಸನಾ ಎಂಬುವವರು ಕಳೆದ 5 ವರ್ಷಗಳ ಹಿಂದೆ ತನ್ನ ಶಾಲಾ ಸಹಪಾಠಿಯಾಗಿದ್ದ ಹೇಮಂತ್ ಎಂಬುವವರನ್ನು ಮದುವೆಯಾಗಿದ್ದರು. ಆ ಸಂದರ್ಭದಲ್ಲಿ ಹೇಮಂತ್ ನಿರುದ್ಯೋಗಿಯಾಗಿದ್ದರು. ಆದರೆ ಸನಾ ದೆಹಲಿಯ ಏರ್‌ಲೈನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಪ್ರಸ್ತುತ ಹೇಮಂತ್‌ ಡಿಜೆ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಅಲ್ಲೇ ಕೆಲಸ ಮಾಡುತ್ತಿದ್ದ ಯುವತಿಯೊಂದಿಗೆ ಹೇಮಂತ್‌ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದಾರೆ. ಈ ಅಕ್ರಮ ಸಂಬಂಧದ ಕಾರಣದಿಂದಾಗಿ ಹೇಮಂತ್‌ ಸನಾ ಅವರಿಗೆ ಕಿರುಕುಳ ನೀಡುತ್ತಿದ್ದರು. ಎಂದು ಮೃತ ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ.

ವರದಿ ಪ್ರಕಾರ, ಹೇಮಂತ್‌ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡ ವಿಚಾರ ಸನಾಗೆ ತಿಳಿದಿದ್ದು, ಇದರಿಂದ ಬೇಸತ್ತು ಹೋಗಿದ್ದ ಸನಾ ಫೇಸ್‌ ಬುಕ್‌ ಲೈವ್‌ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರು ಗಂಡನ ವಿರುದ್ಧ ಕಿರುಕುಳದ ಆರೋಪವನ್ನು ಮಾಡಿದ್ದಾರೆ. ಎಂದು ತಿಳಿದುಬಂದಿದೆ.

ನಾಚಾರಂ ಪೊಲೀಸರು ಹೇಮಂತ್ ಹಾಗೂ ಆತನ ಪೋಷಕರ ವಿರುದ್ಧ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave A Reply

Your email address will not be published.