Kalaburagi: ಸರಕಾರಿ ಬಸ್ ರಷ್; ವಿದ್ಯಾರ್ಥಿನಿ ಅಸ್ವಸ್ಥ, ಜನರ ಆಕ್ರೋಶ

Kalaburagi news latest news student sick due to heavy pushing and rush in ksrtc bus

Kalaburagi: ಕಲಬುರಗಿ: ಸರಕಾರಿ ಬಸ್ಸಿನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾದ ಕಾರಣದಿಂದ ಬಸ್ಸಿನಲ್ಲಿ ನೂಕಾಟ, ತಳ್ಳಾಟಕ್ಕೆ ವಿದ್ಯಾರ್ಥಿನಿಯೋರ್ವಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಮ್ಮನಸಿರಸಗಿ ಗ್ರಾಮದಲ್ಲಿ ನಡೆದಿದೆ.

ಅಸ್ವಸ್ಥ ವಿದ್ಯಾರ್ಥಿನಿಯನ್ನು ವಸ್ತಾರಿ ಗ್ರಾಮದ ಪಿಯುಸಿ ವಿದ್ಯಾರ್ಥಿನಿ ಶರಣಮ್ಮ ಎಂದು ಗುರುತಿಸಲಾಗಿದೆ. ಈ ಘಟನೆಯಿಂದ ಗ್ರಾಮದ ಜನರು ಆಕ್ರೋಶಗೊಂಡಿದ್ದಾರೆ. ಜೊತೆಗೆ ಹೆಚ್ಚಿನ ಬಸ್‌ ಕಲ್ಪಿಸಿ ಕೊಡಬೇಕೆಂದು ಒತ್ತಾಯ ಮಾಡಿ, ಬಸ್‌ ತಡೆದು ಪ್ರತಿಭಟನೆ ಮಾಡಿದ್ದಾರೆ.

Leave A Reply

Your email address will not be published.