Crime News: ಶಾಲೆಗೆ ಹೋಗುತ್ತಿದ್ದ ಇಬ್ಬರು ಬಾಲಕಿಯರ ಅಪಹರಣ, ಅತ್ಯಾಚಾರ! ಓರ್ವ ಬಾಲಕಿ ಸಾವು

Crime News: ಅಸ್ಸಾಂನ ಹೈಲ್ಕಂಡಿ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿರುವ ಘಟನೆಯೊಂದು ನಡೆದಿದೆ. ಓರ್ವ ಬಾಲಕಿಗೆ ಗಂಭೀರ ಗಾಯವಾಗಿದ್ದು, ಆಕೆಗೆ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾಳೆ ಎಂದು ಪೊಲೀಸ್‌ ಅಧಿಕಾರಿ ಇಂದು ಹೇಳಿದ್ದಾರೆ. ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ಈ ಬಾಲಕಿಯರು ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯರನ್ನು ಅಪಹರಿಸಿ, ನಂತರ ಮೋಹನ್‌ಪುರ ಪ್ರದೇಶದ ದಟ್ಟ ಅರಣ್ಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತಾಗಿ ಸಂತ್ರಸ್ತ ಬಾಲಕಿಯೋರ್ವಳ ತಂದೆ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ.

Leave A Reply

Your email address will not be published.