Teachers Recruitment 2023: 13,350 ಪದವೀಧರ ಶಿಕ್ಷಕರ ಹುದ್ದೆಯ ನೇಮಕಾತಿ ಕುರಿತು ಸರಕಾರದಿಂದ ಬಿಗ್‌ ಸುದ್ದಿ!

Teachers Recruitment 2023 big news from karnataka government about 13,350 graduate teachers post

Teachers Recruitment 2023: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕುರಿತು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಪ್ರಾಥಮಿಕ ಶಾಲೆಗಳಿಗೆ 13,350 ಪದವೀಧರ ಶಿಕ್ಷಕರ ಕುರಿತು ಬಿಗ್‌ ಅಪ್ಡೇಟ್‌ ಕೊಟ್ಟಿದ್ದು, ಈ ಮೂಲಕ ತಿಳಿಸಿದ್ದೇನೆಂದರೆ ನ್ಯಾಯಾಲಯದ ಆದೇಶ ಬಂದ ಕೂಡಲೇ ನೇಮಕಾತಿ ಪ್ರಕ್ರಿಯೆ ಪತ್ರಗಳನ್ನು ನೀಡಲಾಗುವುದು ಎಂದಿದ್ದಾರೆ.

ನೇಮಕಾತಿ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿರುವವರ ಜೊತೆ ಸಮಾಲೋಚನೆ ನಡೆಸಲಾಗಿದ್ದು, ವಕೀಲರ ಜೊತೆ ಸಭೆಗಳನ್ನು ನಡೆಸಿ ಚರ್ಚೆ ಮಾಡಲಾಗಿದೆ ಎಂದು ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಬಿ.ವೈ.ವಿಜಯೇಂದ್ರ ಮತ್ತು ಮಹೇಶ್‌ ಅವರ ಪ್ರಸ್ತಾವನೆಗೆ ಉತ್ತರ ನೀಡಿದ್ದಾರೆ.

ಯಾವುದೇ ರೀತಿಯ ಭಯ ಅಭ್ಯರ್ಥಿಗಳು ಪಡುವ ಅಗತ್ಯವಿಲ್ಲ, ಕಾನೂನಿನ ತೊಡಕಿದ್ದು, ಶೀಘ್ರದಲ್ಲೇ ಎಲ್ಲಾ ಸರಿಯಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Leave A Reply

Your email address will not be published.