Balasore train: ಒಡಿಶಾ ಬಾಲಾಸೋರ್ ರೈಲು ದುರಂತ ಪ್ರಕರಣದಲ್ಲಿ CBI ನಿಂದ 3 ರೈಲ್ವೆ ಅಧಿಕಾರಿಗಳ ಬಂಧನ !

CBI arrests 3 railway officers in Balasore train accident case

ನವದೆಹಲಿ: ಭೀಕರ ರೈಲು ದುರಂತ ನಡೆದು ಒಟ್ಟು 292 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೇ ಅಧಿಕಾರಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಒಡಿಶಾದ ಬಾಲಸೋರ್ ರೈಲು ದುರಂತಕ್ಕೆ ಸಂಬಂಧಿಸಿ, ಈಗ 3 ರೈಲ್ವೆ ಅಧಿಕಾರಿಗಳನ್ನ ಸಿಬಿಐ ಬಂಧಿಸಿದ್ದು, ಹಿರಿಯ ಸೆಕ್ಷನ್ ಎಂಜಿನಿಯರ್, ಮೊಹಮ್ಮದ್ ಅಮೀರ್ ಖಾನ್, ಅರುಣ್ ಕುಮಾರ್ ಮಹಾಂತ, ಸೆಕ್ಷನ್ ಎಂಜಿನಿಯರ್ ಮತ್ತು ತಂತ್ರಜ್ಞ ಪಪ್ಪು ಕುಮಾರ್’ನನ್ನ ಸಿಬಿಐ ಬಂಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿಂದೆಯೇ ತನಿಖಾ ವರದಿ ತಯಾರಿಸಿದ್ದ ಅಧಿಕಾರಿಗಳು ದುರಂತದಲ್ಲಿ ಸಿಬ್ಬಂದಿ ಲೋಪ ದೋಷವೇ ದುರಂತಕ್ಕೆ ಕಾರಣ ಎಂದು ಉಲ್ಲೇಖಿಸಿದ್ದರು. ಈ ವರದಿ ಮಾಧ್ಯಮಗಳಲ್ಲಿ ಸೋರಿಕೆ ಕೂಡಾ ಆಗಿತ್ತು. ಆರೋಪಿಗಳ ಮೇಲೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಮೂವರು ಅಧಿಕಾರಿಗಳನ್ನು ಬಂಧಿಸುವ ಮೂಲಕ ಮಾನವ ಲೋಪ ಆದ ಹಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 304ರ ಅಡಿಯಲ್ಲಿ ತಪ್ಪಿತಸ್ಥ ನರಹತ್ಯೆಯ ಪ್ರಕರಣವನ್ನ ದಾಖಲಿಸಲಾಗಿದೆ. ಶಿಕ್ಷೆಯು ಜೀವಾವಧಿ ಶಿಕ್ಷೆ ಮತ್ತು ದಂಡ ಜತೆಗೆ ಕಠಿಣ ಸೆರೆವಾಸವನ್ನು ಒಳಗೊಂಡಿರುತ್ತದೆ.

ಕಳೆದ ಜೂನ್ 2 ರಂದು ಒಡಿಶಾದ ಬಾಲಾಸೋರ್ ರೈಲು ನಿಲ್ದಾಣದ ಬಳಿ ಕೊಲ್ಕತ್ತದಿಂದ ಹೊರಟ ಚೆನ್ನೈಗೆ ಹೊರಟಿದ್ದ ಕೊರೋಮಂಡಲ್ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿತ್ತು. ಇದೇ ವೇಳೆ ಪಕ್ಕದ ಟ್ರ್ಯಾಕ್‌ನಲ್ಲಿ ಸಂಚರಿಸುತ್ತಿದ್ದ ಬೆಂಗಳೂರು – ಹೌರಾ ಎಕ್ಸ್‌ಪ್ರೆಸ್ ರೈಲಿಗೂ ಡಿಕ್ಕಿಯಾಗಿ ತ್ರಿವಳಿ ರೈಲು ಅವಘಡ ಸಂಭವಿಸಿತ್ತು. 291 ಜನರನ್ನು ಬಲಿ ಪಡೆದುಕೊಂಡ ಈ ಘಟನೆಯಾದ ಮೂರು ದಿನಗಳ ನಂತರ ಈ ಪ್ರಕರಣದ ತನಿಖೆಯನ್ನು ರೈಲ್ವೆ ಮಂಡಳಿ ಸಿಬಿಐಗೆ ವಹಿಸಿತ್ತು. ಮಾನವ ಲೋಪವೇ ಈ ಭೀಕರ ದುರಂತಕ್ಕೆ ಕಾರಣ ಎಂದು ಸಿಬಿಐನ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

Leave A Reply

Your email address will not be published.