ಮಂಗಳೂರು: ಕೋಮು ಪ್ರಚೋದನಕಾರಿ ಪೋಸ್ಟ್‌ , ಒಂದು ತಿಂಗಳಲ್ಲಿ 21 ಪ್ರಕರಣ ದಾಖಲು!

Latest news Mangalore 21 communally provocative post cases registered in one month

ಮಂಗಳೂರು: ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಮತ್ತು ದ್ವೇಷ ಭಾಷಣ ಮತ್ತು ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಡಲು ಆ್ಯಂಟಿ ಕಮ್ಯುನಲ್ ವಿಂಗ್ ಅನ್ನು ಸ್ಥಾಪಿಸಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕೋಮುವಾದಿ ಸಂದೇಶಗಳನ್ನು ಪೋಸ್ಟ್ ಮಾಡಿದವರ ವಿರುದ್ಧ ಕಳೆದ 30 ದಿನಗಳಲ್ಲಿ 21 ಪ್ರಕರಣಗಳು ದಾಖಲಾಗಿರುವ ಕುರಿತು ಮಂಗಳೂರು ಪೊಲೀಸ್ ಕಮಿಷನರ್ (Mangaluru Police Commissioner) ಕುಲದೀಪ್ ಕುಮಾರ್ ಜೈನ್ (Kuldeep Kumar Jain) ತಿಳಿಸಿದ್ದಾರೆ.

ಮಂಗಳೂರು ನಗರದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಜೊತೆಗೆ ಕಾನೂನು ಸುವ್ಯವಸ್ಥೆಗೆ ತೊಡಕು ಉಂಟಾದಾಗ ಅಶಾಂತಿಯ ವಾತಾವರಣ ಉಂಟಾಗುವುದನ್ನು ತಪ್ಪಿಸಲು ಗೃಹಸಚಿವರ ಸೂಚನೆಯ ಅನುಸಾರ ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ರಚಿಸಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಇದರ ಜೊತೆಗೆ ಪುನರಾವರ್ತಿತ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸೂಚನೆ ನೀಡಿದ್ದಾರೆ.

ಯಾವುದೇ ಧರ್ಮದ ಪರವಾಗಿ ಮತ್ತು ವಿರುದ್ಧವಾಗಿ ಸಂದೇಶಗಳನ್ನು ಪೋಸ್ಟ್ ಮಾಡುವ, ಹಂಚಿಕೊಳ್ಳುವ ಮತ್ತು ಕಾಮೆಂಟ್ ಮಾಡುವ ವ್ಯಕ್ತಿಗಳ ವಿರುದ್ಧ ಎಲ್ಲಾ ಪೊಲೀಸ್ ಠಾಣೆಗಳ ಸಾಮಾಜಿಕ ಮಾಧ್ಯಮ ಸೆಲ್‌ಗಳಲ್ಲಿ ಕಟ್ಟುನಿಟ್ಟಾದ ನಿಗಾ ವಹಿಸುತ್ತಿರುವ ಕುರಿತು ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ವಾಟ್ಸ್ಆ್ಯಪ್, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಮತ್ತು ಇತರ ಅಪ್ಲಿಕೇಶನ್‌ಗಳಲ್ಲಿ ಕೋಮು ಸೂಕ್ಷ್ಮ ಸಂದೇಶಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಕುರಿತು ಜೈನ್ ಹೇಳಿದ್ದಾರೆ.

ಮೇಲಿನ ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿರುವ ಕುರಿತು ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ಹೇಳಿಕೆ ನೀಡಿರುವ ಜೈನ್ ಅವರು, ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಸಂದೇಶಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಮತ್ತು ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ. ಪುನರಾವರ್ತಿತ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

 

ಇದನ್ನು ಓದಿ: Shradha Walker: ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಪ್ರಕರಣ; ಮಹಿಳೆಯ ದೇಹದ ತುಂಡು ಎಲ್ಲೆಂದರಲ್ಲಿ ಪತ್ತೆ!!! 

Leave A Reply

Your email address will not be published.