ಗೃಹಜ್ಯೋತಿ ಯೋಜನೆ: ಇಲ್ಲಿ ನೋಂದಣಿ ಮಾಡಬೇಕಾದರೆ ದುಡ್ಡು ಕೊಡಲೇ ಬೇಕು, ಸರಕಾರದಿಂದ ಬಿಗ್‌ ಅಪ್ಡೇಟ್‌ !

Latest news free electricity Griha Jyoti Yojana Update from Govt

ಬೆಂಗಳೂರು: ಕರ್ನಾಟಕದ ಜನತೆಗೆ ಐದು ಗ್ಯಾರಂಟಿಯನ್ನು ಘೋಷಣೆ ಮಾಡುವ ಮೂಲಕ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಹಿಡಿದ್ದ ಕಾಂಗ್ರೆಸ್‌ ಈಗ ಚುನಾವಣಾ ಪೂರ್ವ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳ ಜಾರಿಗೆ ಮುಂದಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಲವು ಕ್ಯಾಂಪೇನ್ ಹಾಗೂ ತಂತ್ರಗಾರಿಕೆಗಳ ಜೊತೆಗೆ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಯುವನಿಧಿ, ಶಕ್ತಿ ಹಾಗೂ ಅನ್ನಭಾಗ್ಯ. ಈ ಐದು ಗ್ಯಾರಂಟಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೈಹಿಡಿದಿದ್ದು ಗೊತ್ತೇ ಇದೆ. ಅದರಲ್ಲಿ ಶಕ್ತಿ ಯೋಜನೆ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು, ಪಂಚ ಗ್ಯಾರೆಂಟಿಗಳನ್ನು ಜಾರಿಗೆ ತರಲು ಕೈ ಪಾಳಯ ಹರಸಾಹಸ ಪಡುತ್ತಿದೆ.

ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಜ್ಯೋತಿ’ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಅರಂಭವಾಗಿದೆ. ಈ ಯೋಜನೆ ಆಗಸ್ಟ್‌ನಲ್ಲಿ ಜಾರಿಗೆ ಬರಲಿದ್ದು, ರಾಜ್ಯದ ಗೃಹಬಳಕೆಯ ಗ್ರಾಹಕರಿಗೆ 200 ಯೂನಿಟ್‌ಗಳ ತನಕ ಉಚಿತ ವಿದ್ಯುತ್ ನೀಡುವ ಈ ಯೋಜನೆಯ ಪ್ರಯೋಜನ ನಿಮಗೆ ಸಿಗಬೇಕು ಎಂದಾದರೆ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ಇದೀಗ, ಸರ್ಕಾರ ಯೋಜನೆ ನೋಂದಣಿಗೆ ಮತ್ತೊಂದು ಅಪ್‌ಡೇಟ್‌ ನೀಡಿದೆ.

ಗೃಹಜ್ಯೋತಿ ಯೋಜನೆಯ ನೋಂದಣಿ ಮಾಡುವ ಸಲುವಾಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಸೇವಾಸಿಂಧು ಪೋರ್ಟ್‌ಲ್‌ ಮೂಲಕ ಲಾಗಿನ್ ಆಗಬಹುದು. ಯಾವುದೇ ರೀತಿಯ ಹೆಚ್ಚುವರಿ ಶುಲ್ಕವನ್ನು ಪಾವತಿಸದೇ ಫಲಾನುಭವಿಗಳು ತಮ್ಮ ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಬಾಪೂಜಿ ಸೇವಾ ಕೇಂದ್ರದಲ್ಲಿ ‘ಗೃಹಜ್ಯೋತಿ’ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಅನುವು ಮಾಡಿಕೊಡಲಾಗಿದೆ.

ಗೃಹಜ್ಯೋತಿ’ ಯೋಜನೆಯ ಫಲಾನುಭವಿಯಾಗಲು ಆನ್‌ಲೈನ್‌ ಮೂಲಕ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಿ https://sevasindhugs.karnataka.gov.in/
ಅರ್ಜಿ ಸಲ್ಲಿಕೆ ಮಾಡುವ ಪ್ರಕ್ರಿಯೆ ಬಗ್ಗೆ ಹೆಚ್ಚಿನವರಿಗೆ ತಿಳಿದಿರಬಹುದು. ಇದರ ಜೊತೆಗೆ ಹತ್ತಿರದ ವಿದ್ಯುತ್ ಕಚೇರಿ, ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರದ ಮೂಲಕ ಕೂಡ ನೀವು ಅರ್ಜಿ ಸಲ್ಲಿಸಬಹುದು. ‘ಗೃಹಜ್ಯೋತಿ’ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆಯ ನೋಂದಣಿಗಾಗಿ ಅರ್ಜಿಗಳನ್ನು ಗ್ರಾಮೀಣ ಪ್ರದೇಶದ ಫಲಾನುಭವಿಗಳು ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಲಾಗಿದ್ದು, ಈ ಕೇಂದ್ರದಲ್ಲಿ ಅರ್ಜಿಗಳನ್ನು ಸಲ್ಲಿಸಲು ನೀವು ಪ್ರತಿ ಅರ್ಜಿಗೆ 20 ರೂ. ಗಳ ಶುಲ್ಕವನ್ನು ನಿಗದಿ ಮಾಡಲಾಗಿದೆ.

 

ಇದನ್ನು ಓದಿ: Puttur: ಸರಕಾರಿ ಸ್ಥಳದಲ್ಲಿರುವ ಪೂಜಾಸ್ಥಳಗಳ ಸಕ್ರಮಕ್ಕೆ ವಿಶೇಷ ಕಾನೂನುಜಾರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ

Leave A Reply

Your email address will not be published.