Ration card holders: ಪಡಿತರ ಚೀಟಿದಾರರೇ ಈ ಕೆಲಸ ಮಾಡದಿದ್ದರೆ ಆಗಸ್ಟ್ ನಿಂದ ಆಹಾರಧಾನ್ಯ, ನಗದು ಸ್ಟಾಪ್!!!

Latest news political news Ration card holders New update of ration card

Ration card holders: ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 5 ಕೆಜಿಯ ಹಾಗೆ ಆಹಾರಧಾನ್ಯಗಳನ್ನು ವಿತರಣೆ ಮಾಡಲಾಗುತ್ತದೆ. ಆದರೆ, ಈ ಪಡಿತರ ವಿತರಣೆಯ ಪ್ರಯೋಜನ ಪಡೆಯಲು ಚೀಟಿದಾರರು ಕೆಲವೊಂದು ಕೆಲಸಗಳನ್ನು ತುರ್ತಾಗಿ ಮಾಡಲೇಬೇಕಾಗುತ್ತದೆ.

ಬಡವರು ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಸರಕಾರದಿಂದ ಪಡಿತರ ಚೀಟಿ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ 5 ಕೆಜಿ ಅಕ್ಕಿಯ ಬದಲಿಗೆ ಕೆಜಿಗೆ 34 ರೂಪಾಯಿಯ ಹಾಗೆ ಕುಟುಂಬದ ಸದಸ್ಯರೊಬ್ಬರಿಗೆ 170 ರೂ. ಯಂತೆ ಸರ್ಕಾರ ಈಗಾಗಲೇ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿದೆ. ನೀವು ಪಡಿತರ ಚೀಟಿ ಹೊಂದಿದ್ದರೆ, ಈ ವಿಷಯವನ್ನು ತಿಳಿದಿರಲೇಬೇಕು.ಎಲ್ಲರಿಗೂ ಗೊತ್ತಿರುವ ಹಾಗೆ, ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹೀಗಿದ್ದರೂ ಇನ್ನೂ ನಿಮ್ಮ ರೇಷನ್ ಕಾರ್ಡ್- ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಎಂದಾದರೆ ಚಿಂತಿಸಬೇಕಾಗಿಲ್ಲ. ರೇಷನ್ ಕಾರ್ಡ್- ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನ ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ ಮಾಡಲಾಗಿದ್ದು, ಗ್ರಾಹಕರಿಗೆ ಅನುಕೂಲವಾಗಿದೆ.

ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?
ಮೊದಲು ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬೇಕು. ಆ ಬಳಿಕ ‘ಲಿಂಕ್ ಆಧಾರ್ ವಿತ್ ರೇಷನ್ ಕಾರ್ಡ್’ ಆಯ್ಕೆಯನ್ನು ಸೆಲೆಕ್ಟ್ ಮಾಡಬೇಕು. ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿಕೊಂಡು ’ಲಿಂಕ್ ಆಧಾರ್ ಮತ್ತು ಮೊಬೈಲ್ ಸಂಖ್ಯೆ’ ಆಯ್ಕೆಯನ್ನು ಆರಿಸಬೇಕು. ಈಗ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿದರೆ, ನಿಮ್ಮ ಫೋನ್‌ ಗೆ OTP ಬರಲಿದ್ದು,ಅದನ್ನು ನಮೂದಿಸಬೇಕು. ಈ ಮೂಲಕ ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು. ಹೀಗೆ ಮಾಡಿದರೆ, ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಿದ ಕೂಡಲೇ ನೀವು SMS ಪಡೆಯಬಹುದು.

ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದಲ್ಲಿ 3 ಅಥವಾ 3 ಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು 35 ಕೆ.ಜಿ. ಆಹಾರ ಧಾನ್ಯವನ್ನು ಪಡೆಯುತ್ತಿರುವ ಹಿನ್ನೆಲೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಕುಟುಂಬಗಳಿಗೆ ನಗದು ವರ್ಗಾವಣೆ ಸೌಲಭ್ಯ ದೊರೆಯುವುದಿಲ್ಲ ಎಂಬುದನ್ನು ಗಮನಿಸಬೇಕು. ಆದರೆ,ಕಳೆದ 3 ತಿಂಗಳುಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯ ದೊರೆಯಲಿದೆ. ಆದರೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಕುಟುಂಬದಲ್ಲಿ 4 ಸದಸ್ಯರ ಮೇಲ್ಪಟ್ಟವರಿಗೆ ಈ ಸೌಲಭ್ಯ ಅನ್ವಯವಾಗಲಿದೆ.

ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳಲ್ಲಿನ ಮುಖ್ಯಸ್ಥರು ಬ್ಯಾಂಕ್ ಖಾತೆಗಳನ್ನು ತೆರೆಯದೇ ಇರುವ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೇ ಇರುವ ಮತ್ತ ಆಧಾರ್ ಸಂಖ್ಯೆ ತಪ್ಪಾಗಿ ಲಿಂಕ್ ಆಗಿದ್ದರೆ, ನಿಮಗೆ ಯೋಜನೆಯ ಪ್ರಯೋಜನ ಸಿಗದೇ ಪರದಾಡುವ ಸ್ಥಿತಿ ಎದುರಾಗಬಹುದು. ಸರಕಾರದ ಅನ್ನಭಾಗ್ಯ ಯೋಜನೆ ಲಾಭ ಪಡೆಯಲು ಇದೇ ಜುಲೈ 15 ರೊಳಗೆ ಬ್ಯಾಂಕ್ ಖಾತೆ ಸಕ್ರಿಯಗೊಳಿಸಿ ಕಡ್ಡಾಯವಾಗಿ ಆಧಾರ ಕಾರ್ಡ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಬ್ಯಾಂಕ್ ಖಾತೆಗೆ (ಇ-ಕೆವೈಸಿ) ಮಾಡುವುದು ಅನಿವಾರ್ಯವಾಗಿದೆ. ಇದರ ಜೊತೆಗೆ ಬಯೋಮೆಟ್ರಿಕ್ ಪರಿಶೀಲನೆ ಬದಲಿಗೆ ಮೊಬೈಲ್ ಓಟಿಪಿ ಮುಖಾಂತರ ಆಹಾರ ಧಾನ್ಯವನ್ನು ಪಡೆಯುತ್ತಿರುವ ವ್ಯವಸ್ಥೆಯನ್ನು ಮುಂದಿನ 2 ತಿಂಗಳ ಒಳಗಾಗಿ ಸ್ಥಗಿತಗೊಳಿಸಲಾಗುತ್ತದೆ.

ಅಷ್ಟೇ ಅಲ್ಲದೇ, ಪಡಿತರ ಚೀಟಿದಾರರು ಆಗಸ್ಟ್ ತಿಂಗಳಲ್ಲಿ ನಗದು ವರ್ಗಾವಣೆಯ ಲಾಭ ಪಡೆದುಕೊಳ್ಳಲು ಜುಲೈ ತಿಂಗಳ ಜುಲೈ ತಿಂಗಳ 20 ನೇ ತಾರೀಖಿನೊಳಗೆ ತಮ್ಮ ಸಕ್ರಿಯ ಬ್ಯಾಂಕ್ ಖಾತೆಯ ಮಾಹಿತಿಯನ್ನು ಹತ್ತಿರದ ತಹಸೀಲ್ದಾರ್ ಕಚೇರಿ ಅಥವಾ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ನ್ಯಾಯಬೆಲೆ ಅಂಗಡಿಗೆ ನೀಡಬೇಕಾಗುತ್ತದೆ. ಹೀಗೆ ಮಾಡಿದರೆ ಮಾತ್ರವೇ ಪಡಿತರ ಕುಟುಂಬಗಳಿಗೆ ಆಗಸ್ಟ್ ತಿಂಗಳಿನಲ್ಲಿ ನಗದು ವರ್ಗಾವಣೆ ಸೌಲಭ್ಯ ದೊರೆಯಲಿದೆ.

ಈ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರು ತಮ್ಮ ನ್ಯಾಯಬೆಲೆ ಅಂಗಡಿಯಲ್ಲಿರುವ ಪಟ್ಟಿಯನ್ನು ವೀಕ್ಷಿಸಿ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿದ್ದರೆ, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡದಿದ್ದರೆ, ಬ್ಯಾಂಕ್ ಖಾತೆಯ ಮಾಹಿತಿಯು ಇದುವರೆಗೆ ಲಭ್ಯವಿಲ್ಲದಿದ್ದಲ್ಲಿ, ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿ, ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಪುನರ್ಜೀವನಗೊಳಿಸಿದ ಬಳಿಕವೇ ಆ ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾಗುತ್ತದೆ.

 

ಇದನ್ನು ಓದಿ: Doddaballapur: ಮನೆಯಲ್ಲಿದ್ದ ಗೃಹಿಣಿಯ ಬರ್ಬರ ಹತ್ಯೆ, ಮಗು ಅಪಹರಣ! ಪ್ರಿಯಕರನ ಸುತ್ತ ಅನುಮಾನದ ಹುತ್ತ 

Leave A Reply

Your email address will not be published.