Annabhagya Scheme: ಅನ್ನ ಭಾಗ್ಯ ಯೋಜನೆಯನ್ನು ಹೊಗಳಿದ ಬಿಜೆಪಿ ಶಾಸಕ, ಬೆಚ್ಚಿ ಬಿದ್ದ ಕರ್ನಾಟಕ ಬಿಜೆಪಿ !

Latest news politcal news BJP MLA praised Anna Bhagya scheme

Annabhagya Scheme: ಬೆಂಗಳೂರು: ವಿಧಾನಸಭೆಯಲ್ಲಿಂದು ಕಾಂಗ್ರೆಸ್ ಸರ್ಕಾರದ (Congress Government) ಬಜೆಟ್ ಮೇಲೆ ಚರ್ಚೆ ನಡೆದ ಸಂದರ್ಭ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯನ್ನು (Annabhagya Scheme) ಬೈಂದೂರಿನ ಬಿಜೆಪಿ ಶಾಸಕ ಗುರುರಾಜ್ ಗಂಟಿಹೋಳಿಯವರು(Gururaj Gantiholi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಂದು ಬಜೆಟ್ ಮೇಲಿನ ಚರ್ಚೆಯ ಸಂದರ್ಭ ಬಿಜೆಪಿ ಶಾಸಕ ಗುರುರಾಜ್ ಗಂಟಿಹೋಳಿ, ಅನ್ನಭಾಗ್ಯ ಯೋಜನೆಯನ್ನು ಸ್ವಾಗತಿಸಿದ್ದಾರೆ. ಅನ್ನ ಭಾಗ್ಯ ಯೋಜನೆಯ ಯೋಚನೆ ಮತ್ತು ಯೋಜನೆ ರೂಪಿಸಿದವರಿಗೆ ಅಭಿನಂದನೆ ಸಲ್ಲಿಸಿದ ಸಚಿವರು ಬಡವರ ಹೊಟ್ಟೆ ತುಂಬಿಸುವ ಯೋಜನೆಯನ್ನು ಯಾವುದೇ ಸರ್ಕಾರ ಈ ಯೋಜನೆ ಜಾರಿ ತಂದಿದ್ದರು ಕೂಡ ನಾನು ಸ್ವಾಗತ ಮಾಡುತ್ತೇನೆ ಎಂದು ನುಡಿಯುವ ಮೂಲಕ ಅನ್ನಭಾಗ್ಯ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬಿಜೆಪಿಯ ಸದಸ್ಯ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್ 5 ಗ್ಯಾರಂಟಿ ಜಾರಿಗೆ ಯಾವ ಮೂಲಗಳಿಂದ ಹಣ ಕ್ರೋಢೀಕರಣದ ಬಗ್ಗೆ ಮಾಹಿತಿ ನೀಡಿಲ್ಲ. ಸಿದ್ದರಾಮಯ್ಯನವರು ಅನುಭವಿ ಸಿಎo ಆಗಿರುವ ಹಿನ್ನೆಲೆ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಯಿತ್ತು. ಆದರೆ, ಸದನವನ್ನ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಲು ಬಳಸಿಕೊಳ್ಳುತ್ತಿದ್ದಾರೆ. ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳದ ಬಗ್ಗೆ ಉಲ್ಲೇಖ ಮಾಡಲಾಗಿದ್ದು, ಇದರ ಪರಿಣಾಮ ಏನಾಗುತ್ತದೆ ಎಂಬುದನ್ನು ಗಮನಿಸಬೇಕು.ಗ್ರಾಮೀಣ ಭಾಗದಲ್ಲಿ ಕಳ್ಳ ಭಟ್ಟಿ ತಯಾರಿಸಲು ಅನುವು ಮಾಡಿಕೊಟ್ಟಂತಾಗುತ್ತದೆ. ಇದರಿಂದ ಬಡವರ ಮೇಲೆ ಪರಿಣಾಮ ಬೀರಲಿದ್ದು, ಈ ವಿಚಾರವನ್ನು ಮುಖ್ಯಮಂತ್ರಿಗಳು ಗಮನಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 5 ಕೆಜಿಯ ಹಾಗೆ ಆಹಾರಧಾನ್ಯಗಳನ್ನು ವಿತರಣೆ ಮಾಡಲಾಗುತ್ತದೆ. ಬಡವರು ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಸರಕಾರದಿಂದ ಪಡಿತರ ಚೀಟಿ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ 5 ಕೆಜಿ ಅಕ್ಕಿಯ ಬದಲಿಗೆ ಕೆಜಿಗೆ 34 ರೂಪಾಯಿಯ ಹಾಗೆ ಕುಟುಂಬದ ಸದಸ್ಯರೊಬ್ಬರಿಗೆ 170 ರೂ. ಯಂತೆ ಸರ್ಕಾರ ಈಗಾಗಲೇ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿದೆ.

Leave A Reply

Your email address will not be published.