Rain update: ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: 4 ದಿನ ಯೆಲ್ಲೋ ಅಲರ್ಟ್ ಘೋಷಣೆ!

Latest news Rain update Heavy rain is forecast in coastal areas for 4 days yellow alert

ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದ ಜೋರಾಗಿದ್ದ ಮಳೆ ಕೊಂಚ ತಗ್ಗಿದೆ. ಇದೀಗ, ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನಗಳವರೆಗೆ ಮಳೆಯ ಅಬ್ಬರ ಜೋರಾಗಿರುವ ಕುರಿತು ಮುನ್ಸೂಚನೆ ನೀಡಿದೆ.

ಜುಲೈ 17 ರಿಂದ ಮುಂದಿನ ಐದು ದಿನಗಳು ರಾಜ್ಯದ ಹಲವೆಡೆ ಮುಂಗಾರು ಚುರುಕಾಗಿರಲಿದೆ. ಮುಂದಿನ ನಾಲ್ಕು ದಿನ ಗುಡುಗು ಮಿಂಚು ಸಹಿತ ನಿರಂತರ ಧಾರಾಕಾರವಾಗಿ ಮಳೆ ಬರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೇರಿದಂತೆ ಕೆಲವು ಪ್ರದೇಶಗಳು, ಉಡುಪಿ, ಕುಂದಾಪುರ ಸೇರಿದಂತೆ ಸಮುದ್ರ ತೀರದ ಪ್ರದೇಶಗಳ ಜನರಲ್ಲಿ ವ್ಯಾಪಕ ಮಳೆ ಭೀತಿ, ಸಂಕಷ್ಟ ಎದುರಾಗುವ ಸಂಭವವಿದೆ. ಭಾರತೀಯ ಹವಾಮಾನ ಇಲಾಖೆಯ( IMD) ಮುನ್ಸೂಚನೆಯ ಅನುಸಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜುಲೈ 17ರಿಂದ 20ರ ವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ವೇಳೆ ಬಿರುಸಿನ ಮಳೆಯಾಗಲಿದ್ದು, ಗಾಳಿ, ಸಮುದ್ರದ ಅಬ್ಬರ ಕೂಡ ಹೆಚ್ಚಾಗುವ ನಿರೀಕ್ಷೆಯಿದೆ

Leave A Reply

Your email address will not be published.