Gruha Lakshmi Scheme: ‘ಗೃಹಲಕ್ಷ್ಮೀ’ ಯೋಜನೆ: ಮನೆ ಯಜಮಾನಿಯ ಖಾತೆಗೆ 2000 ಹಣ ಜಮೆ ಆಗಿಲ್ಲವೇ? ಈ ರೀತಿ ಚೆಕ್ ಮಾಡಿ!!!

Check like this if 'Gruha Lakshmi' scheme money is not coming

Gruha Lakshmi Scheme: ರಾಜ್ಯ ಕಾಂಗ್ರೆಸ್‌ ಸರ್ಕಾರದ(Karnataka Government) ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಕರ್ನಾಟಕ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2,000ಗಳನ್ನು ನೀಡುವ ಕುರಿತು 2023-24ನೇ ಸಾಲಿನಲ್ಲಿ ಅನುಷ್ಠಾನವಾಗುವಂತೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000ರೂ.ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೆ ತರಲಾಗಿದೆ. ಗೃಹ ಲಕ್ಷ್ಮಿ ಯೋಜನೆಯನ್ನು ( Gruha Lakshmi Scheme ) ಅನುಷ್ಠಾನಗೊಳಿಸಲು, ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಈ ಮಾರ್ಗಸೂಚಿ ( Guidelines ) ಕ್ರಮಗಳನ್ನು ಪಾಲನೆ ಮಾಡುವಂತೆ ಸೂಚಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆ(Gruhalakshmi Scheme)ಗೆ ಜುಲೈ 19 ರಿಂದ ಅರ್ಜಿ ಸ್ವೀಕಾರ ಆರಂಭವಾಗಲಿದ್ದು, ಈ ನಡುವೆ, ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ. ಈ ಮೂಲಕ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಯೋಜನೆಯ ನೋಂದಣಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಇದರ ಜೊತೆಗೆ ಅರ್ಜಿ ಸಲ್ಲಿಸಲು ಡೆಡ್‌ಲೈನ್ ಕೂಡ ನಿಗದಿ ಪಡಿಸಿಲ್ಲ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕ್ಕರ್ ಅವರು ಇತ್ತೀಚೆಗೆ ಮಾಹಿತಿ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಮಾತ್ರ ಅನ್ವಯವಾಗುತ್ತದೆ. ಇದಲ್ಲದೆ, ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ನವರು ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಗೃಹಲಕ್ಷ್ಮೀ ಯೋಜನೆಗೆ ಬೇಕಾಗುವ ಅಗತ್ಯ ದಾಖಲೆಗಳು :
ಆಧಾರ್ ಕಾರ್ಡ್, ರೇಷನ್ ಕಾರ್ಡ್ ,ಬ್ಯಾಂಕ್ ಪಾಸ್ ಪುಸ್ತಕ ಬೇಕಾಗುತ್ತದೆ. ಇದರ ಜೊತೆಗೆ, ಯೋಜನೆಯ ಫಲಾನುಭವಿಗಳು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ, ಫಲಾನುಭವಿ ಇಲ್ಲವೇ ಆಕೆಯ ಪತಿ ತೆರಿಗೆ ಅಥವಾ ಜಿಎಸ್‌ಟಿ ಪಾವತಿದಾರರಾಗಿರಬಾರದು.

ಅರ್ಜಿ ಸಲ್ಲಿಕೆ ಹೇಗೆ?
*ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ನಿಗದಿ ಪಡಿಸಿದ ಗ್ರಾಮ ಒನ್, ಕರ್ನಾಟಕ ಒನ್ ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನಿಮ್ಮ ಹತ್ತಿರದಲ್ಲಿರುವ ಈ ಯಾವುದಾದರೂ ಒಂದು ಕೇಂದ್ರಕ್ಕೆ ತೆರಳಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

* ಫಲಾನುಭವಿಗಳು ಮೇಲ್ಕಾಣಿಸಿದ ಕೇಂದ್ರಗಳಲ್ಲದೆ “ಪುಜಾ ಪ್ರತಿನಿಧಿ” (citizen Volunteers) ಮೂಲಕ ಕೂಡ ಸೇವಾಸಿಂಧು ಪೋರ್ಟಲ್ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಲು ಅನುವು ಮಾಡಿಕೊಡಲಾಗಿದೆ.

* ಅರ್ಜಿ ನೋಂದಾಯಿಸಿಲು ಯಾವುದೇ ಶುಲ್ಕವನ್ನು ನೀಡಬೇಕಾಗಿಲ್ಲ.

*ಪ್ರತಿ ಫಲಾನುಭವಿಗು ಕೂಡ ನೋಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕಾಲ್ ಮಾಡಿ ಅಥವಾ 8147500500 ನಂಬರ್ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

* ಒಂದು ವೇಳೆ ನಿಗದಿ ಪಡಿಸಿದ ಸಮಯಕ್ಕೆ ಭೇಟಿ ನೀಡಲು ಆಗದೆ ನೋಂದಾವಣಿ ಮಾಡಲಾಗದೆ ಇದ್ದರೆ, ಅದೇ ಕೇಂದ್ರಕ್ಕೆ ಮುಂದಿನ ಯಾವುದೇ ದಿನಗಳಲ್ಲಿ ಕಛೇರಿ ಸಮಯದ ನಂತರ (ಸಂಜೆ 5.00 ಗಂಟೆ ನಂತರ) ತೆರಳಿ ನೋಂದಾಯಿಸಿಕೊಳ್ಳಬಹುದು.

* ನೋಂದಣಿ ಪ್ರಕ್ರಿಯೆಗೆ ನಿಗದಿಪಡಿಸಿರುವ ದಿನಾಂಕ, ಸಮಯ ಮತ್ತು ಸ್ಥಳಕ್ಕೆ ಸಂಬಂಧಪಟ್ಟಂತೆ ನೀವು ಸಹಾಯವಾಣಿ ಸಂಖ್ಯೆ 1902 ಕರೆ ಮಾಡಿ ತಿಳಿದುಕೊಳ್ಳಬಹುದು. ಇದಲ್ಲದೆ, 8147500500 ಗೆ ಎಸ್ಎಂಎಸ್ ಅಥವಾ ವಾಟ್ಸ್ ಆಪ್ ಮೂಲಕ ಸಂದೇಶ ಕಳುಹಿಸಿ ವಿವರ ಪಡೆದುಕೊಳ್ಳಬಹುದು.

*ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಾತ್ರವೇ ಮಂಜೂರಾತಿ ಪತ್ರವನ್ನು ನೀಡಲಾಗುತ್ತದೆ

Leave A Reply

Your email address will not be published.