SSLC Supplementary Result 2023 : ವಿದ್ಯಾರ್ಥಿಗಳೇ ಮರುಮೌಲ್ಯಮಾಪನ ಮತ್ತು ಮರುಎಣಿಕೆಯ ಫಲಿತಾಂಶ ಕುರಿತು ಬಿಗ್ ಮಾಹಿತಿ!!!

Karnataka SSLC Supplementary Result 2023 Revaluation re totaling Revised Result Out news

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಮರುಮೌಲ್ಯಮಾಪನ ಮತ್ತು ಮರುಎಣಿಕೆಯ ಪರಿಷ್ಕೃತ ಫಲಿತಾಂಶವನ್ನು ಬಿಡುಗಡೆ ಮಾಡಿದೆ.

ಜೂನ್ 2023ರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಮರುಮೌಲ್ಯಮಾಪನ ಮತ್ತು ಮರುಎಣಿಕೆಯ ಪರಿಷ್ಕೃತ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಜೂನ್ 12 ರಿಂದ ಜೂನ್ 19 ರ ವರೆಗೆ ನಡೆದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಿದ್ದು, ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಲಾಗಿತ್ತು. ಈಗ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಫಲಿತಾಂಶವನ್ನು ಮಂಡಳಿ ಬಿಡುಗಡೆ ಮಾಡಿದೆ.

ಜೂನ್ 2023ರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಗೆ ಭೇಟಿ ನೀಡಿ ಫಲಿತಾಂಶವನ್ನು ಪರಿಶೀಲನೆ ಮಾಡಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಮರುಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕು.

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ 2023ರ ಮರುಮೌಲ್ಯಮಾಪನ ಮತ್ತು ಮರುಎಣಿಕೆ ಪರಿಷ್ಕೃತ ಫಲಿತಾಂಶ ಚೆಕ್ ಮಾಡುವ ವಿಧಾನ ಹೀಗಿದೆ:
* ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧಿಕೃತ ವೆಬ್‌ಸೈಟ್‌ https://kseab.karnataka.gov.in/ ಗೆ ಭೇಟಿ ನೀಡಬೇಕು.
* ತೆರೆದುಕೊಂಡ ಪೇಜ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಮರುಮೌಲ್ಯಮಾಪನ ಮತ್ತು ಮರುಎಣಿಕೆ ಪರಿಷ್ಕೃತ ಫಲಿತಾಂಶ 2023 ಸಂಬಂಧಿಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಬೇಕು.
* ಈಗ ನಿಮಗೆ ಮತ್ತೊಂದು ಪೇಜ್‌ ತೆರೆದುಕೊಳ್ಳುತ್ತದೆ.ಈ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಮತ್ತು ಜನ್ಮದಿನಾಂಕವನ್ನು ಟೈಪ್‌ ಮಾಡಬೇಕು.

* ಆ ಬಳಿಕ ‘Submit’ ಅನ್ನು ಕ್ಲಿಕ್ ಮಾಡಿದ್ರೆ, ನಿಮಗೆ ಫಲಿತಾಂಶ ಪ್ರದರ್ಶನವಾಗುತ್ತದೆ.

Leave A Reply

Your email address will not be published.