ಬೆಂಗಳೂರಿನಲ್ಲಿ ಡಬಲ್ ಮರ್ಡರ್; ದಂಪತಿಗಳ ಬರ್ಬರ ಹತ್ಯೆ!!!!

Latest news death news Double murder in Bangalore

Bengaluru Murder Case: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾರದ ಹಿಂದಷ್ಟೇ ಕಂಪನಿಯೊಂದರ ಎಂಡಿ ಮತ್ತು ಸಿಇಒ ಹತ್ಯೆ ಪ್ರಕರಣ ಮಾಸುವ ಮುನ್ನವೇ ದಂಪತಿಯ ಹತ್ಯೆ ಪ್ರಕರಣವೊಂದು ಜನರನ್ನು ಬೆಚ್ಚಿ ಬೀಳಿಸಿದೆ.

ಬೆಂಗಳೂರು ಮಹಾನಗರದ ಏರ್‌ಪೋರ್ಟ್‌ ರಸ್ತೆಯ ಬ್ಯಾಟರಾಯನಪುರದಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ವರದಿಯಾಗಿದೆ.(Bengaluru Double Murder) ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಕುಡಿತದ ಚಟ ಹೊಂದಿದ್ದ ಶರತ್ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದನಂತೆ. ನಿನ್ನೆ ಸೋಮವಾರ ಸಂಜೆ ಶರತ್‌ ತಂದೆ, ತಾಯಿ ಮೇಲೆ ಎರಗಿ ಏಕಾಏಕಿ ರಾಡ್‌ನಿಂದ ಹೊಡೆದ ಪರಿಣಾಮ ತಂದೆ ತಾಯಿ ಇಬ್ಬರೂ ಗಂಭೀರ ಗಾಯಗೊಂಡು ಇಬ್ಬರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳಕಿಗೆ ಬಂದಿದೆ.

 

ದಂಪತಿಯ ಬರ್ಬರ ಹತ್ಯೆ ಪ್ರಕರಣ ಮಂಗಳವಾರ ಬೆಳಗ್ಗೆ 11 ಗಂಟೆ ವೇಳೆಗೆ ವಿಚಾರ ಬಯಲಾಗಿದೆ.ದಂಪತಿ ಕುರಿತು ಸ್ಥಳೀಯರು ಪೊಲೀಸರಿಗೆ ನೀಡಿದ ಮಾಹಿತಿ ಅನುಸಾರ ಪ್ರಕರಣ ಬೆಳಕಿಗೆ ಬಂದಿದೆ. ಮೃತಪಟ್ಟ ದಂಪತಿಯನ್ನು ಭಾಸ್ಕರ್ ಮತ್ತು ಶಾಂತಾ ಎಂದು ಗುರುತಿಸಲಾಗಿದ್ದು, ಶಾಂತ ಮತ್ತು ಭಾಸ್ಕರ್ ದಂಪತಿ ಮಂಗಳೂರು ಮೂಲದವರಾಗಿದ್ದು, 12 ವರ್ಷಗಳ ಹಿಂದೆ ಬ್ಯಾಟರಾಯನಪುರದಲ್ಲಿ ಸೈಟ್ ಖರೀದಿಸಿ ಮನೆ ಕಟ್ಟಿಕೊಂಡು ನೆಲೆಸಿದ್ದಾರೆ. ಇವರಿಗೆ ಇಬ್ಬರು ಮಕ್ಕಳಿದ್ದು,‍ ದೊಡ್ಡ ಮಗ ತಿಂಡ್ಲು ಗ್ರಾಮದಲ್ಲಿ ನೆಲೆಸಿದ್ದಾರೆ. ಕಿರಿಯ ಮಗ ಅಪ್ಪ- ಅಮ್ಮನ ಜೊತೆಗೆ ನೆಲೆಸಿದ್ದ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

 

ಕುಡಿತದ ಮತ್ತಿನಲ್ಲಿ ಕಿರಿಯ ಮಗ ತನ್ನ ತಂದೆ, ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಬ್ಯಾಟರಾಯನಪುರದಲ್ಲಿ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ ಆಗಿದ್ದ ಶಾಂತ, ಇತ್ತೀಚೆಗಷ್ಟೇ ನಿವೃತ್ತಿ ಹೊಂದಿದ್ದರು. ಮೃತಪಟ್ಟ ಭಾಸ್ಕರ್ ಖಾಸಗಿ ಕ್ಯಾಂಟೀನ್ ಒಂದರಲ್ಲಿ ಕ್ಯಾಶಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದರು.

ಶರತ್ ಕಿರಿಯ ಮಗನಾಗಿದ್ದು, ಕೆಲವೊಮ್ಮೆ ಸೈಕೋ ರೀತಿ ವರ್ತಿಸುತ್ತಿದ್ದ. ನಿನ್ನೆ ಸೋಮವಾರ ಸಂಜೆ ಕುಡಿದು ಮನೆಯಲ್ಲಿ ಗಲಾಟೆ ಮಾಡಿದ್ದಾನೆ ಎನ್ನಲಾಗಿದೆ. ಈ ಹಿಂದೆ ಕೂಡ ಮನೆಯಲ್ಲಿ ಶರತ್ ಗಲಾಟೆ ಮಾಡಿ ಅಪ್ಪ ಅಮ್ಮನಿಗೆ ಹೊಡೆಯುವುದು ಮಾಡುತ್ತಿದ್ದ ಎನ್ನಲಾಗಿದೆ. ಅದೇ ರೀತಿ ನಿನ್ನೆ ಕೂಡ ಕುಡಿದು ಗಲಾಟೆ ಮಾಡಿದ್ದನ್ನು ಪ್ರಶ್ನಿಸಿದ ಅಪ್ಪ-ಅಮ್ಮನಿಗೆ ಶರತ್ ರಾಡ್‌ನಿಂದ ಹೊಡೆದು ಸಾಯಿಸಿದ್ದಾನೆ. ಆ ಬಳಿಕ ಮನೆ ಡೋರ್ ಲಾಕ್ ಮಾಡಿ ಕಾಲ್ಕಿತ್ತಿದ್ದಾನೆ.

ದಂಪತಿಯ ದೊಡ್ಡ ಮಗ ಇಂದು ಬೆಳಗ್ಗೆ ತಂದೆ-ತಾಯಿಗೆ ಕರೆ ಮಾಡಿದಾಗ ಯಾರು ಕರೆ ಸ್ವೀಕರಿಸದ ಹಿನ್ನೆಲೆ ಅನುಮಾನಗೊಂಡು ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾನೆ. ಹೀಗಾಗಿ, ಪಕ್ಕದ ಮನೆಯವರು ಮನೆಗೆ ಬಂದು ನೋಡಿದಾಗ ದಂಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ತಿಳಿದು ಬಂದಿದೆ. ಸ್ಥಳೀಯರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಹತ್ಯೆ ನಡೆದ ಘಟನಾ ಸ್ಥಳಕ್ಕೆ ಆಗಮಿಸಿದ ಈಶಾನ್ಯ ವಿಭಾಗದ ಡಿಸಿಪಿ, ಸ್ಥಳ ಪರಿಶೀಲನೆ ನಡೆಸಿದ್ದು, ದಂಪತಿಯ ಶವವನ್ನು ಶವಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

Leave A Reply

Your email address will not be published.