KEA Recruitment 2023: ನಿಗಮ ಮಂಡಳಿಗಳಲ್ಲಿನ 670 ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!!!

Latest news job news KEA Recruitment notification 2023

KEA Recruitment 2023: ಇಂದಿನ ಕಾಲದಲ್ಲಿ ಉದ್ಯೋಗ ಅತ್ಯವಶ್ಯಕವಾಗಿದೆ. ಆದರೆ, ಬಯಸಿದ ಉದ್ಯೋಗ(Job) ಪಡೆಯುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆ ನೆಚ್ಚಿನ ಕೆಲಸ ಗಿಟ್ಟಿಸಿಕೊಳ್ಳೋದು ಯುವಜನತೆಯ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ 670 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದು (KEA Recruitment 2023), ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕ ಪ್ರಕ್ರಿಯೆ ಅನುಸಾರ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದಲ್ಲಿನ ಒಟ್ಟು 386 ‌ಹುದ್ದೆ, ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್‌ನ 72, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 186, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ 26 ಹುದ್ದೆ ಒಟ್ಟು 670 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜುಲೈ 22ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ, ಕೆಇಎ ಅರ್ಜಿ ಸಲ್ಲಿಕೆಗೆ ಕೊನೆಯ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿರುವ ಕುರಿತು ಸೋಮವಾರ ಪ್ರಕಟಣೆ ನೀಡಿದೆ.

ಹುದ್ದೆಯ ವಿವರ:
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ)- ಗ್ರೂಪ್‌ ಬಿ – 4 (ಉಳಿಕೆ ಮೂಲ ವೃಂದ-1, ಕಲ್ಯಾಣ ಕರ್ನಾಟಕ-1, ಬ್ಯಾಕ್ಲಾಗ್-2)
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ)-ಗ್ರೂಪ್‌ ಬಿ – 2 (ಕಲ್ಯಾಣ ಕರ್ನಾಟಕ-1, ಬ್ಯಾಕ್‌ಲಾಗ್‌-1)
ಆಪ್ತ ಕಾರ್ಯದರ್ಶಿ – ಗ್ರೂಪ್ ಸಿ – 1 (ಉಳಿಕೆ ಮೂಲ ವೃಂದ-1)
ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್‌ ಸಿ – 4 (ಉಳಿಕೆ ಮೂಲ ವೃಂದ-1, ಕಲ್ಯಾಣ ಕರ್ನಾಟಕ-1, ಬ್ಯಾಕ್‌ಲಾಗ್‌-2)
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್ ಸಿ – 3 ( ಕಲ್ಯಾಣ ಕರ್ನಾಟಕ-1, ಬ್ಯಾಕ್‌ಲಾಗ್‌-2)
ಸಹಾಯಕರು (ತಾಂತ್ರಿಕ) ಗ್ರೂಪ್‌ ಸಿ- 6 (ಉಳಿಕೆ ಮೂಲ ವೃಂದ-4, ಕಲ್ಯಾಣ ಕರ್ನಾಟಕ-1, ಬ್ಯಾಕ್‌ಲಾಗ್‌-1)
ಸಹಾಯಕರು (ತಾಂತ್ರಕೇತರ) ಗ್ರೂಪ್ ಸಿ -6 (ಉಳಿಕೆ ಮೂಲ ವೃಂದ-4, ಕಲ್ಯಾಣ ಕರ್ನಾಟಕ-1, ಬ್ಯಾಕ್‌ಲಾಗ್‌-1)
ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
ಕಲ್ಯಾಣ ಅಧಿಕಾರಿ (ಗ್ರೂಪ್‌ ಸಿ) -12 (ಉಳಿಕೆ ಮೂಲ ವೃಂದ-9 ಕಲ್ಯಾಣ ಕರ್ನಾಟಕ-3)
ಕ್ಷೇತ್ರ ನಿರೀಕ್ಷಕರು (ಗ್ರೂಪ್‌ ಸಿ) – 60 (ಉಳಿಕೆ ಮೂಲ ವೃಂದ-45 ಕಲ್ಯಾಣ ಕರ್ನಾಟಕ-15)
ಪ್ರಥಮ ದರ್ಜೆ ಸಹಾಯಕರು (ಗ್ರೂಪ್‌ ಸಿ) -12 (ಉಳಿಕೆ ಮೂಲ ವೃಂದ-8 ಕಲ್ಯಾಣ ಕರ್ನಾಟಕ-4)
ಆಪ್ತ ಸಹಾಯಕರು(ಗ್ರೂಪ್‌ ಸಿ)- 02 (ಉಳಿಕೆ ಮೂಲ ವೃಂದ-2)
ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್‌ ಸಿ) -100 (ಉಳಿಕೆ ಮೂಲ ವೃಂದ-64 ಕಲ್ಯಾಣ ಕರ್ನಾಟಕ-36)
ಮೈಸೂರು ಸೇಲ್ಸ್‌ಇಂಟರ್‌ನ್ಯಾಷನಲ್ ಲಿಮಿಟೆಡ್
ಸಹಾಯಕ ವ್ಯವಸ್ಥಾಪಕರು – 23 (ಉಳಿಕೆ ಮೂಲ ವೃಂದ-20, ಕಲ್ಯಾಣ ಕರ್ನಾಟಕ-3)
ಮೇಲ್ವಿಚಾರಕರು – 23 (ಉಳಿಕೆ ಮೂಲ ವೃಂದ-20, ಕಲ್ಯಾಣ ಕರ್ನಾಟಕ-3)
ಪದವೀಧರ ಗುಮಾಸ್ತರು – 6 (ಉಳಿಕೆ ಮೂಲ ವೃಂದ-5, ಕಲ್ಯಾಣ ಕರ್ನಾಟಕ-1)
ಗುಮಾಸ್ತರು – 13 (ಉಳಿಕೆ ಮೂಲ ವೃಂದ-12, ಕಲ್ಯಾಣ ಕರ್ನಾಟಕ-1)
ಮಾರಾಟ ಪ್ರತಿನಿಧಿ / ಪ್ರೋಗ್ರಾಮರ್‌ – 6 (ಕಲ್ಯಾಣ ಕರ್ನಾಟಕ-6)

ಮೇಲೆ ತಿಳಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 31-07-2023 ಕೊನೆಯ ದಿನವಾಗಿದ್ದು,03-08-2023 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ Microsoft edge ಬ್ರೊಸರ್‌ ಬಳಸುವಂತೆ ಕೆಇಎಯು ಸೂಚಿಸಿದೆ. ಈ ಕುರಿತ ಮಾಹಿತಿಗೆbಸಹಾಯವಾಣಿ ಸಂಖ್ಯೆ: 080-23460460 ಕರೆ ಮಾಡಬಹುದು. ಇಲ್ಲವೇಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ https://cetonline.karnataka.gov.in/kea/ ಗೆ ಭೇಟಿ ನೀಡಬಹುದು.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500, ಹಿಂದುಳಿದ ವರ್ಗಗಳು- 2ಎ,2ಬಿ, 3ಎ,3ಬಿ ಅಭ್ಯರ್ಥಿಗಳಿಗೆ 300 ರೂ. ಎಸ್‌ಸಿ, ಎಸ್‌ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 200 ರೂ. ಹಾಗೂ ವಿಕಲಚೇತನರು/ ಮಾಜಿ ಸೈನಿಕರಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. KEA ಅಧಿಸೂಚನೆ ಪ್ರಕಟಿಸಿದ ಬಳಿಕ ಶುಲ್ಕವನ್ನು ಕಡಿತ ಮಾಡಿ, ತಿದ್ದುಪಡಿ ಅಧಿಸೂಚನೆ ಹೊರಡಿಸಿದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಕೆಇಎ ಅರ್ಜಿ ಸಲ್ಲಿಕೆಯ ಅವಿಧಿಯನ್ನು ಮಾತ್ರ. ವಿಸ್ತರಣೆ ಮಾಡಿದ್ದು, ನೇಮಕಾತಿಯಲ್ಲಿ ಯಾವುದೇ ಬದಲಾವಣೆಯನ್ನೂ ಮಾಡಲಾಗಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆಗಸ್ಟ್‌ 03ರ ಮಧ್ಯಾಹ್ನ 3.30ರ ವರೆಗೂ ಪಾವತಿ ಮಾಡಲು ಅನುವು ಮಾಡಿಕೊಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave A Reply

Your email address will not be published.