Post office Jobs: 8ನೇ ಕ್ಲಾಸ್ ಪಾಸಾದವರಿಗೆ ಭರ್ಜರಿ ಉದ್ಯೋಗಾವಕಾಶ: ಪೋಸ್ಟ್ ಆಫೀಸ್ ನಲ್ಲಿದೆ ಮಾಸಿಕ 63,000 ವೇತನ!

Latest news political news jobs news Post Office recruitement 2023

Post Office Jobs: ಇಂದಿನ ಕಾಲದಲ್ಲಿ ಉದ್ಯೋಗ ಅತ್ಯವಶ್ಯಕವಾಗಿದೆ. ಆದರೆ, ಬಯಸಿದ ಉದ್ಯೋಗ(Job) ಪಡೆಯುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆ ನೆಚ್ಚಿನ ಕೆಲಸ ಗಿಟ್ಟಿಸಿಕೊಳ್ಳೋದು ಯುವಜನತೆಯ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ, ಉದ್ಯೋಗ ಅರಸುತ್ತಿರುವ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ.ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಮಂದಿಗೆ ಸಿಹಿ ಸುದ್ದಿ ಇಲ್ಲಿದೆ. ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಭಾರತೀಯ ಅಂಚೆ ಇಲಾಖೆಯ ಒಟ್ಟು 5 ನುರಿತ ಕುಶಲಕರ್ಮಿ ಹುದ್ದೆಗಳು ಖಾಲಿಯಿದ್ದು, ಆಸಕ್ತರು ಆಗಸ್ಟ್ 5, 2023 ರ ಮೊದಲು ಅರ್ಜಿ ಸಲ್ಲಿಸುವುದು ಉತ್ತಮ. 15/07/2023 ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಅರ್ಜಿ ಸಲ್ಲಿಸಲು ಆಗಸ್ಟ್ 5, 2023 ಕೊನೆಯ ದಿನವಾಗಿದ್ದು, (Last Date) ಆಸಕ್ತರು ಆಫ್ಲೈನ್ ಅಂದರೆ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ವ್ಯವಸ್ಥಾಪಕರು
ಮೇಲ್ ಮೋಟಾರ್ ಸೇವೆ
ನಂ.4
ಬಸವೇಶ್ವರ ರಸ್ತೆ
ವಸಂತ ನಗರ
ಬೆಂಗಳೂರು-560001

ಮೋಟಾರ್ ವೆಹಿಕಲ್ ಮೆಕ್ಯಾನಿಕ್- 2
ಮೋಟಾರ್ ವೆಹಿಕಲ್ ಎಲೆಕ್ಟ್ರಿಷಿಯನ್- 1
ಪೇಂಟರ್- 1
ಟೈಯರ್ ಮ್ಯಾನ್-1

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಅನುಸಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸಾಗಿರಬೇಕು.

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2023ಕ್ಕೆ ಕನಿಷ್ಠ 18 ವರ್ಷ ಮತ್ತು 30 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳು- 3 ವರ್ಷ SC/ST ಅಭ್ಯರ್ಥಿಗಳು- 5 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ. ಇದರ ಜೊತೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ವಾಲಿಫಿಕೇಶನ್, ಡ್ರೈವಿಂಗ್ ಲೈಸೆನ್ ಟೆಸ್ಟ್ ಮಾಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ವೇತನ ನೀಡಲಾಗುತ್ತದೆ. ಆಸಕ್ತರು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.

Leave A Reply

Your email address will not be published.