Annabhagya Scheme: ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್!

Latest news political news congress guarantee new update about Annabhagya Scheme

Annabhagya Scheme : ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ(Annabhagya Scheme) ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 5 ಕೆಜಿಯ ಹಾಗೆ ಆಹಾರಧಾನ್ಯಗಳನ್ನು ವಿತರಣೆ ಮಾಡಲಾಗುತ್ತದೆ. ಆದರೆ, ಈ ಪಡಿತರ ವಿತರಣೆಯ(Ration Card)ಪ್ರಯೋಜನ ಪಡೆಯಲು ಚೀಟಿದಾರರು ಕೆಲವೊಂದು ಕೆಲಸಗಳನ್ನು ತುರ್ತಾಗಿ ಮಾಡಲೇಬೇಕಾಗುತ್ತದೆ.

ಈ ನಡುವೆ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ. ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಬದಲಾಗಿ ಹಣ ನೀಡುವ ಯೋಜನೆಗೆ ಚಾಲನೆ ದೊರೆತು ಈಗಾಗಲೇ ವಾರ ಕಳೆಯುತ್ತಾ ಬಂದರು ಕೂಡ ಇನ್ನೂ 12 ಜಿಲ್ಲೆಗಳ ಫಲಾನುಭವಿಗಳಿಗೆ ಈವರೆಗೆ ಹಣ ಲಭ್ಯವಾಗಿಲ್ಲ ಎನ್ನಲಾಗಿದೆ.

ಬಡವರು ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಸರಕಾರದಿಂದ ಪಡಿತರ ಚೀಟಿ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ 5 ಕೆಜಿ ಅಕ್ಕಿಯ ಬದಲಿಗೆ ಕೆಜಿಗೆ 34 ರೂಪಾಯಿಯ ಹಾಗೆ ಕುಟುಂಬದ ಸದಸ್ಯರೊಬ್ಬರಿಗೆ 170 ರೂ. ಯಂತೆ ಸರ್ಕಾರ ಈಗಾಗಲೇ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿದೆ. ಹಣ ನೀಡುವುದು ತಾತ್ಕಾಲಿಕ ಕ್ರಮವಾಗಿದ್ದು, ಅಕ್ಕಿ ಕೊರತೆ ಸಮಸ್ಯೆ ನೀಗಿದ ನಂತರ 10 ಕೆಜಿ ಅಕ್ಕಿ ನೀಡಲಾಗುತ್ತದೆ.

ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿಯ ಬದಲಾಗಿ 170 ರೂಪಾಯಿ ಹಣ ನೀಡುವ ಯೋಜನೆಗೆ ಚಾಲನೆ ದೊರೆತು ಸುಮಾರು ವಾರ ಆಗಿದ್ದರೂ ಕೂಡ ಮಂಡ್ಯ, ತುಮಕೂರು, ಉಡುಪಿ, ಉತ್ತರ ಕನ್ನಡ ಸೇರಿದಂತೆ 12 ಜಿಲ್ಲೆಗಳ ಫಲಾನುಭವಿಗಳಿಗೆ ಈವರೆಗೂ ಹಣ ದೊರೆತಿಲ್ಲ ಎನ್ನಲಾಗಿದೆ. ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ. ವಿಜಯಪುರ, ವಿಜಯನಗರ,ಹಾವೇರಿ ಜಿಲ್ಲೆಗಳ ಫಲಾನುಭವಿಗಳಿಗೆ ಇನ್ನೂ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚವರಿ ಅಕ್ಕಿ ಬದಲಾಗಿ ಹಣ ಜಮೆ ಆಗಿಲ್ಲ ಎನ್ನಲಾಗಿದೆ.

ನೀವು ಪಡಿತರ ಚೀಟಿ ಹೊಂದಿದ್ದರೆ, ಈ ವಿಷಯವನ್ನು ತಿಳಿದಿರಲೇಬೇಕು.ಎಲ್ಲರಿಗೂ ಗೊತ್ತಿರುವ ಹಾಗೆ, ರೇಷನ್ ಕಾರ್ಡ್ ಗೆ (Ration Card Holder)ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹೀಗಿದ್ದರೂ ಇನ್ನೂ ನಿಮ್ಮ ರೇಷನ್ ಕಾರ್ಡ್- ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಎಂದಾದರೆ ಚಿಂತಿಸಬೇಕಾಗಿಲ್ಲ. ರೇಷನ್ ಕಾರ್ಡ್- ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನ ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ ಮಾಡಲಾಗಿದ್ದು, ಗ್ರಾಹಕರಿಗೆ ಅನುಕೂಲವಾಗಿದೆ.

Leave A Reply

Your email address will not be published.