Tulu: ಎರಡನೇ ಅಧಿಕೃತ ಭಾಷೆಯಾಗಿ ತುಳು ಸೇರ್ಪಡೆ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ- ಸ್ಪೀಕರ್ ಏನಂದ್ರು ಗೊತ್ತೇ?

Latest news What UT KHADER says about Tulu inclusion as second official language

Tulu: ಕರಾವಳಿ ಭಾಗದ ಜನರಿಗೆ ತುಳು ಭಾಷೆ ಕೇವಲ ಭಾಷೆಯಲ್ಲ. ಅದೊಂದು ಭಾವನಾತ್ಮಕ ಸಂಬಂಧವನ್ನ ಬೆಸೆದುಕೊಂಡಿದೆ. ಕರಾವಳಿ ಭಾಗದ ಜನರಲ್ಲಿ ಹೆಚ್ಚಿನ ಮಂದಿ ಕನ್ನಡಕ್ಕಿಂತ ಹೆಚ್ಚಾಗಿ ತುಳು ಭಾಷೆಯಲ್ಲಿಯೆ ಸಂಭಾಷಣೆ ನಡೆಸುವುದು ಇದಕ್ಕೆ ಸಾಕ್ಷಿ. ಸದ್ಯ, ತುಳು ಭಾಷೆಯನ್ನು (Tulu)ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ದಕ್ಷಿಣ ಕನ್ನಡ (Dakshina Kannada)ಜಿಲ್ಲೆಯ ಪುತ್ತೂರು(Puttur )ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ರೈ (Ashok Kumar Rai)ಮನವಿ ಮಾಡಿದ್ದಾರೆ.

ಮಂಗಳವಾರ ರಾತ್ರಿ ಗಮನ ಸೆಳೆಯುವ ಸೂಚನೆಯ ಸಂದರ್ಭ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಅವರು ತುಳು ಭಾಷೆಯಲ್ಲೇ ಪ್ರಸ್ತಾಪಿಸುವ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ. ಇದಕ್ಕೆ ಸ್ಪೀಕರ್ ಯುಟಿ ಖಾದರ್ ಅವರು ತುಳು ಭಾಷೆಯಲ್ಲೇ ಪ್ರತಿಕ್ರಿಯೆ ನೀಡಿದರು.ಸಭಾಧ್ಯಕ್ಷ ಯು.ಟಿ. ಖಾದರ್ ಕೂಡ ಮಧ್ಯ ಪ್ರವೇಶಿಸಿ, ತುಳು ಭಾಷೆಯ ಬೇಡಿಕೆಯ ಪರ ಮಾತನಾಡಿದರು.

ತುಳು ಭಾಷೆಯ ವಿಷಯ ಪ್ರಸ್ತಾಪ ಮಾಡಿದ ಅಶೋಕ್‌ ಕುಮಾರ್‌ ರೈ ಅವರು, ರಾಜ್ಯದಲ್ಲಿ 1 ಕೋಟಿಗೂ ಅಧಿಕ ಮಂದಿ ತುಳು ಭಾಷೆ ಮಾತನಾಡುವವರಿದ್ದಾರೆ. 1994ರಲ್ಲಿ ಡಾ| ಎಂ. ವೀರಪ್ಪ ಮೊಲಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ತುಳು ಅಕಾಡೆಮಿ ಸ್ಥಾಪಿಸಿದ್ದು, ಕೇರಳದಲ್ಲಿ ಕೂಡ ತುಳು ಭಾಷಾ ಅಕಾಡೆಮಿಯಿದೆ. ಅಮೆರಿಕ ವಿಶ್ವವಿದ್ಯಾಲಯದಲ್ಲಿ ತುಳು ಭಾಷೆಯಲ್ಲಿ ಅರ್ಜಿ ನಮೂನೆ ಭರ್ತಿ ಮಾಡಲು ಅನುವು ಮಾಡಿಕೊಡಲಾಗಿದೆ. ಕರ್ನಾಟಕದಲ್ಲಿ ತುಳು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ಇದೆ ವೇಳೆ ಆಗ್ರಹಿಸಿದ್ದಾರೆ.

ಇದಕ್ಕೆ ವಿಧಾನಸಭೆಯಲ್ಲಿ ಪ್ರತಿಕ್ರಿಯೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರವು ಪೂರಕ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ಕಾಂಗ್ರೆಸ್‌ನ ಅಶೋಕ್‌ ಕುಮಾರ್ ರೈ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ‘ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಕುರಿತು ಅಧ್ಯಯನ ನಡೆಸಲು ಹಿಂದಿನ ಸರ್ಕಾರವು ಡಾ.ಎಂ. ಮೋಹನ ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ನೇಮಿಸಿದ್ದು, ಈ ಸಮಿತಿಯ ವರದಿ ಸಿಕ್ಕಿದೆ. ಕೆಲವು ಇಲಾಖೆಗಳ ಅಭಿಪ್ರಾಯ ಪಡೆದ ಬಳಿಕ ಈ ಕುರಿತು ಮುಂದಿನ ತೀರ್ಮಾನ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ. ಅಗತ್ಯ ಇರುವ ಇಲಾಖೆಗಳಿಂದ ಅಭಿಪ್ರಾಯ ಪಡೆದು ನಿರ್ಣಯ ಕೈಗೊಳ್ಳುವ ಆಶ್ವಾಸನೆಯನ್ನು ಸಚಿವರು ನೀಡಿದ್ದಾರೆ

Leave A Reply

Your email address will not be published.