Puttur: ನಡೆದುಕೊಂಡು ಹೋಗುತ್ತಿದ್ದ ಬಾಲಕಿಯರಿಗೆ ಕಿರುಕುಳ ,ಅಸಭ್ಯವಾಗಿ ವರ್ತಿಸಿದ ಯುವಕನ ಮೇಲೆ ಪೋಕ್ಸೋ ದಾಖಲು

Puttur crime news POCSO case faild against man who sexually harassed girls

Puttur: ಪುತ್ತೂರಿನಲ್ಲಿ(Puttur )ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರ (Students)ಜೊತೆಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯೊಬ್ಬನನ್ನು ಪುತ್ತೂರು (Puttur) ನಗರ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ನಿನ್ನೆ ಬೆಳಿಗ್ಗೆ ಎಂದಿನಂತೆ ವಿದ್ಯಾರ್ಥಿನಿಯರಿಬ್ಬರು ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ದಾರಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದು ಇದರಿಂದ ಭಯಭೀತರಾಗಿ ಆತನಿಂದ ತಪ್ಪಿಸಿಕೊಂಡು ಬಂದ ವಿದ್ಯಾರ್ಥಿನಿಯರು ಕಾಲೇಜಿಗೆ (college)ಬಂದು ಘಟನೆಯ ಬಗ್ಗೆ ಕಾಲೇಜಿನ ಉಪನ್ಯಾಸಕಿಗೆ ಮಾಹಿತಿ ನೀಡಿದ್ದಾರೆ.

ಬಾಲಕಿಯರಿಗೆ ಹಲ್ಲೆ ಮಾಡಿದ ವ್ಯಕ್ತಿಯನ್ನು ಕಡಬ ತಾಲೂಕಿನ ಬೆಳಂದೂರು ಮೂಲದವನು ಎಂದು ಗುರುತಿಸಲಾಗಿದೆ.ವ್ಯಕ್ತಿ ಪುತ್ತೂರು ಕಲ್ಲಿಮಾರು ಭಾಗದಲ್ಲಿ ವಿದ್ಯಾರ್ಥಿನಿಯರು ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜಿಗೆ ತೆರಳುತ್ತಿದ್ದ ಸಂದರ್ಭ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ. ಈ ಕುರಿತು ಉಪನ್ಯಾಸಕಿಯವರು ಪೋಲಿಸ್ ಠಾಣೆಯಲ್ಲಿ ನೀಡಿದ ದೂರಿನ ಅನುಸಾರ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 341, 354(ಡಿ) ಐ.ಪಿ.ಸಿ ಕಲಂ: 8,12 ಪೊಕ್ಸ್ ಆಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave A Reply

Your email address will not be published.