Madikeri: ನಾಳೆ ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಿ ಆದೇಶ

Latest news Order to enforce liquor ban in this district tomorrow

Madikeri: ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ. ನಾಳೆ ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಮಡಿಕೇರಿ (Madikeri)ಜಿಲ್ಲೆಯಲ್ಲಿ ಅನೇಕ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನಾಳೆ ಜುಲೈ 21 ರಂದು ಕೊಡಗು ಜಿಲ್ಲೆಯಲ್ಲಿ ಮದ್ಯ( Liquor)ಮಾರಾಟ ನಿಷೇಧಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ಉಪ ಚುನಾವಣೆಯನ್ನ ಸುಸೂತ್ರವಾಗಿ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅನುಸಾರ, ಕೊಡಗು ಜಿಲ್ಲೆಯ (Kodagu)ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು, ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಮತ್ತು ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜುಲೈ, 21 ರಂದು ಸಂಜೆ 5 ಗಂಟೆಯಿಂದ ಜುಲೈ 23 ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಮದ್ಯ ತಯಾರಿಕೆ, ಸಾಗಾಣಿಕೆ, ಶೇಖರಣೆಗೆ ನಿಷೇಧ ಹೇರಲಾಗಿದೆ. ಹೀಗಾಗಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಕೊಡಗು ಜಿಲ್ಲೆಯ ಎಲ್ಲಾ ರೀತಿಯ ಅಂಗಡಿಗಳಲ್ಲಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.

Leave A Reply

Your email address will not be published.