ವಿಟ್ಲ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!!

Latest news crime Vitla rape case Rape on a minor girl

ವಿಟ್ಲ:ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣವೊಂದು ವಿಟ್ಲದಿಂದ ವರದಿಯಾಗಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿ ಯುವಕನನ್ನು ಅಬ್ದುಲ್ ಸಮೀರ್ ಎಂದು ಗುರುತಿಸಲಾಗಿದ್ದು, ಈತ ಕಳೆದ 2019 ರಲ್ಲಿ ಕನ್ಯಾನ ಮೂಲದ ಬಾಲಕಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

ಬಳಿಕ ಆರೋಪಿ ವಿದೇಶಕ್ಕೆ ತೆರಳಿದ್ದು,ಇತ್ತ ಯುವತಿ ಮದುವೆಯಾಗುವಂತೆ ಒತ್ತಾಯಿಸಿದಾಗ ನಿರಾಕರಿಸಿ ಮೋಸ ಮಾಡಿದ್ದಾನೆ ಎಂದು ದೂರಲಾಗಿದೆ. ಸದ್ಯ ಆರೋಪಿ ವಿರುದ್ಧ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.