Karnataka Ration Card Update: ನಿಮ್ಮ ಮನೆಯ ರೇಷನ್ ಕಾರ್ಡ್‌ನಲ್ಲಿ ಪುರುಷರು ಮನೆಯ ಯಜಮಾನರ? ಹಾಗಿದ್ದರೆ ಮಹಿಳಾ ಸದಸ್ಯೆಯನ್ನು ಯಜಮಾನಿ ಎಂದು ಬದಲಾಯಿಸುವುದು ಹೇಗೆ? ಇಲ್ಲಿದೆ ಕಂಪ್ಲೀಟ್‌ ವಿವರ

Latest news Karnataka Ration Card Update How to Mistress a Woman on a Ration Card

Karnataka Ration Card Update: ರಾಜ್ಯ ಕಾಂಗ್ರೆಸ್ ಸರ್ಕಾರದ(Karnataka Government) ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme)ಕರ್ನಾಟಕ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2,000ಗಳನ್ನು ನೀಡುವ ಕುರಿತು 2023-24ನೇ ಸಾಲಿನಲ್ಲಿ ಅನುಷ್ಠಾನವಾಗುವಂತೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000ರೂ.ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು( Gruha Lakshmi Scheme) 2023-24ನೇ ಸಾಲಿನಿಂದ ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಲು, ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಈ ಮಾರ್ಗಸೂಚಿ ( Guidelines ) ಕ್ರಮಗಳನ್ನು ಪಾಲನೆ ಮಾಡುವಂತೆ ಸೂಚಿಸಲಾಗಿದೆ.ಗೃಹಲಕ್ಷ್ಮೀ ಯೋಜನೆಗೆ ರೇಷನ್ ಕಾರ್ಡ್ ಹೊಂದಿರುವ( Karnataka Ration Card Update)ಕುಟುಂಬದ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ದೊರೆಯಲಿದ್ದು, ಹೀಗಾಗಿ, ರೇಷನ್ ಕಾರ್ಡ್ನಲ್ಲಿ ಮಹಿಳಾ ಸದಸ್ಯೆಯನ್ನು ಮನೆಯ ಯಜಮಾನಿ ಎಂದು ಉಲ್ಲೇಖಿಸುವುದು ಅವಶ್ಯಕ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂಪಾಯಿಯ ಹಣವನ್ನು ಮಹಿಳೆಯರ ಖಾತೆಗೆ ನೇರವಾಗಿ ಜಮೆ ಮಾಡುವ ಪ್ರಕ್ರಿಯೆ ನಡೆಯಲಿದೆ. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ನೀಡುವ ಅಂತ್ಯೋದಯ, ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಾಜಮಾನಿ ಎಂದು ಮಹಿಳೆಯನ್ನು ಉಲ್ಲೇಖಿಸಿದ್ದರೆ ಮಾತ್ರ ಮಹಿಳೆಯು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.
ಈ ನಡುವೆ ಹೆಚ್ಚಿನವರಿಗೆ ಈ ಸಮಸ್ಯೆ ಕಾಡುತ್ತಿರಬಹುದು. ರೇಷನ್ ಕಾರ್ಡ್ನಲ್ಲಿ ಪುರುಷರು ಮನೆಯ ಯಜಮಾನರಾಗಿರುವುದರಿಂದ ಮಹಿಳಾ ಸದಸ್ಯೆಯನ್ನು ಮನೆಯ ಯಜಮಾನಿ ಎಂದು ಬದಲಾವಣೆ ಮಾಡಬೇಕಾಗುತ್ತದೆ. ಇಲ್ಲದೆ ಹೋದರೆ ಈ ಯೋಜನೆಯ ಪ್ರಯೋಜನ ಲಭ್ಯವಾಗದು.

ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ?
ರೇಷನ್ ಕಾರ್ಡ್ನಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು ಬದಲಾಯಿಸಲು ಕುಟುಂಬದ ಮುಖ್ಯಸ್ಥರು ಮರಣ ಹೊಂದಿದ್ದರೆ ಅವರ ಮರಣ ಪ್ರಮಾಣಪತ್ರ, ಪಡಿತರ ಚೀಟಿ, ಅರ್ಜಿದಾರರ ವಿಳಾಸದ ಪುರಾವೆಯಾಗಿ ಆಧಾರ್ ಕಾರ್ಡ್ ಪ್ರತಿ ಇಲ್ಲವೇ ಇತರೆ ದಾಖಲೆ, ಅರ್ಜಿದಾರರ ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್ ಪ್ರತಿ ಇಲ್ಲವೇ ಇತರೆ ದಾಖಲೆಗಳು, ಹೊಸ ಕುಟುಂಬ ಸದಸ್ಯರ ಪಾಸ್ಪೋರ್ಟ್ ಅಳತೆಯ ಫೋಟೋ, ಆಧಾರ್ ಕಾರ್ಡ್ ಬೇಕಾಗುತ್ತದೆ.

ರೇಷನ್ ಕಾರ್ಡ್ನಲ್ಲಿ ಯಜಮಾನರ ಹೆಸರು ಬದಲಾವಣೆ ಮಾಡಲು ಏನೆಲ್ಲ ಮಾಡಬೇಕು?
* ಮೊದಲಿಗೆ ಸಮೀಪದ ಪಡಿತರ ಚೀಟಿ ಸೇವಾಕೇಂದ್ರಗಳಿಗೆ ಭೇಟಿ ನೀಡಬೇಕು.
* ಮುಖ್ಯಸ್ಥರ ಹೆಸರು ಬದಲಾಯಿಸಲು ಅರ್ಜಿಯನ್ನು ಭರ್ತಿ ಮಾಡಬೇಕು.
* ಅರ್ಜಿಯ ಜೊತೆಗೆ ಅವಶ್ಯಕ ದಾಖಲೆಗಳನ್ನು ಸಲ್ಲಿಸಬೇಕು.
* ಬಯೋಮೆಟ್ರಿಕ್ ದೃಡೀಕರಣದ ಮೂಲಕ ದಾಖಲೆಗಳನ್ನು ದೃಢೀಕರಿಸಬೇಕು.
* ಪಡಿತರ ಸೇವಾ ಕೇಂದ್ರದಲ್ಲಿ ಎಲ್ಲ ಮಾಹಿತಿಯನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಲಾಗುತ್ತದೆ.
* ಅಲ್ಲಿ ನೀಡಲಾಗುವ ಸ್ವೀಕೃತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಬೇಕು.
* ಆನಂತರ, ಆಹಾರ ಕಚೇರಿಯಲ್ಲಿ ನಿಮಗೆ ಮೆಸೇಜ್ ಬರಲಿದೆ.
* ಮೆಸೇಜ್ ಬಂದ ಬಳಿಕ ನಿಮ್ಮಲ್ಲಿರುವ ಸ್ವೀಕೃತಿ ಪತ್ರ ಬಳಸಿಕೊಂಡು ನಿಮ್ಮ ಪಡಿತರ ಚೀಟಿಯನ್ನು ಪ್ರಿಂಟ್ ತೆಗೆದುಕೊಳ್ಳಬಹುದು.

ಆನ್ಲೈನ್ನಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಹೀಗೆ ಮಾಡಿ:
# ಮೊದಲಿಗೆ https://ahara.kar.nic.in/ಗೆ ಲಾಗ್ ಇನ್ ಆಗಿ
ಮೇನ್ ಪೇಜ್ನಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಬೇಕು.
# ಆನಂತರ, ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆ ಕಾಣಿಸಲಿದ್ದು, ಅದನ್ನು ಕ್ಲಿಕ್ ಮಾಡಬೇಕು.
# ಈಗ ಹೊಸ ಪೇಜ್ ತೆರೆಯಲಿದ್ದು, ನಿಮ್ಮ ಜಿಲ್ಲೆಗೆ ಅನುಗುಣವಾಗಿ ಕಾಣಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
# ಹೊಸ ಸೇರ್ಪಡೆ/ ತಿದ್ದುಪಡಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಬೇಕು.
# ತಿದ್ದುಪಡಿಗೆ ಬೇಕಾದ ಅವಶ್ಯಕ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಬೇಕು.
# ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮಿಟ್ ಮಾಡಬೇಕು. ಆಗ, ಅರ್ಜಿ ಸಲ್ಲಿಕೆಯ ರಿಜಿಸ್ಟರ್ ನಂಬರ್ ದೊರೆಯಲಿದೆ.
# ಈ ನಂಬರ್ ಮೂಲಕ ನಿಮ್ಮ ಅರ್ಜಿಯ ಸ್ಟೇಟಸ್ ಅನ್ನು ಟ್ರ್ಯಾಕ್ ಮಾಡಬಹುದು.

Leave A Reply

Your email address will not be published.