Mangaluru: ಅನ್ಯಕೋಮಿನ ವಿದ್ಯಾರ್ಥಿಯೊಂದಿಗಿದ್ದ ಮುಸ್ಲಿಂ ಯುವಕನಿಗೆ ಹಲ್ಲೆ ,ಪೊಲೀಸ್ ದೂರು

moral-policing-in-mangalore-another-assault-case

Mangalore: : ನೈತಿಕ ಪೊಲೀಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಬಜರಂಗದಳ ಕಾರ್ಯಕರ್ತರಿಗೆ ಪೊಲೀಸರು ನೋಟೀಸ್ ನೀಡಿದ ಬೆನ್ನಲ್ಲೇ, ಮಂಗಳೂರಿನ (Mangalore) ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿದ ಘಟನೆ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ನಡೆದಿದೆ.

ಮಂಗಳೂರಿನ (Mangalore) ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿದ ಘಟನೆ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದ ಘಟನೆ ನಡೆದಿದೆ ಎನ್ನಲಾಗಿದೆ. ಎ ಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೆಜ್ಮೆಂಟ್ ಕೋರ್ಸ್(AJ Medical College Hospital Management Course) ನ ವಿದ್ಯಾರ್ಥಿಗಳು ಪಣಂಬೂರು ಬೀಚ್ ಗೆ ಜೊತೆಯಾಗಿ ತೆರಳಿದ್ದಾರೆ.

ಈ ವೇಳೆ ತಂಡದಲ್ಲಿ 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿದ್ದರು ಎನ್ನಲಾಗಿದೆ. ಬೀಚ್ಗೆ ತೆರಳಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿಕೊಂಡು ಬಂದ ಕೆಲವರು, ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್ ಗಿರಿಯ ಪರಿಣಾಮ ಒಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಈ ಕುರಿತು ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Leave A Reply

Your email address will not be published.