Ration card holders: ಪಡಿತರ ಚೀಟಿದಾರರೇ ಗಮನಿಸಿ, ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋ ರೇಶನ್ ಸ್ಟಾಪ್!!!

Attention ration card holders if you do not do this, you will not get ration

Ration card holders: ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯದ ಜನತೆಗೆ. ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಏಳಿಗೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಜನರಿಗೆ ಬೆಂಬಲವಾಗಿ ನಿಂತಿವೆ. ಇವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ.

ಸರ್ಕಾರದ ಆದೇಶ ಅನ್ವಯ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ.ಗೆ 34 ರೂ.ರಂತೆ ಪಡಿತರ ಚೀಟಿಯಲ್ಲಿನ Ration Card Holders)ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುತ್ತದೆ. ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದಲ್ಲಿ 3 ಅಥವಾ 3 ಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು 35 ಕೆ.ಜಿ. ಆಹಾರ ಧಾನ್ಯವನ್ನು ಪಡೆಯುತ್ತಿರುವ ಹಿನ್ನೆಲೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಕುಟುಂಬಗಳಿಗೆ ನಗದು ವರ್ಗಾವಣೆ (Money Transfer )ಸೌಲಭ್ಯ ದೊರೆಯುವುದಿಲ್ಲ ಎಂಬುದನ್ನು ಗಮನಿಸಬೇಕು. ಆದರೆ,ಕಳೆದ 3 ತಿಂಗಳುಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯ ದೊರೆಯಲಿದೆ. ಆದರೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಕುಟುಂಬದಲ್ಲಿ 4 ಸದಸ್ಯರ ಮೇಲ್ಪಟ್ಟವರಿಗೆ ಈ ಸೌಲಭ್ಯ ಅನ್ವಯವಾಗಲಿದೆ.

ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳಲ್ಲಿನ ಮುಖ್ಯಸ್ಥರು ಬ್ಯಾಂಕ್ ಖಾತೆಗಳನ್ನು ತೆರೆಯದೇ ಇರುವ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೇ ಇದ್ದರೆ ಹಾಗೂ ಆಧಾರ್ ಸಂಖ್ಯೆ ತಪ್ಪಾಗಿ ಲಿಂಕ್ ಆಗಿದ್ದರೆ, ನಿಮಗೆ ಯೋಜನೆಯ ಪ್ರಯೋಜನ ಸಿಗದೇ ಪರದಾಡುವ ಸ್ಥಿತಿ ಎದುರಾಗಬಹುದು. ಸರಕಾರದ ಅನ್ನಭಾಗ್ಯ ಯೋಜನೆ(Annabhagya Yojana)ಲಾಭ ಪಡೆಯಲು ಬ್ಯಾಂಕ್ ಖಾತೆ ಸಕ್ರಿಯಗೊಳಿಸಿ ಕಡ್ಡಾಯವಾಗಿ ಆಧಾರ ಕಾರ್ಡ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಬ್ಯಾಂಕ್ ಖಾತೆಗೆ (ಇ-ಕೆವೈಸಿ) ಮಾಡುವುದು ಅನಿವಾರ್ಯವಾಗಿದೆ. ಇದರ ಜೊತೆಗೆ ಬಯೋಮೆಟ್ರಿಕ್ ಪರಿಶೀಲನೆ ಬದಲಿಗೆ ಮೊಬೈಲ್ ಓಟಿಪಿ ಮುಖಾಂತರ ಆಹಾರ ಧಾನ್ಯವನ್ನು ಪಡೆಯುತ್ತಿರುವ ವ್ಯವಸ್ಥೆಯನ್ನು ಮುಂದಿನ 2 ತಿಂಗಳ ಒಳಗಾಗಿ ಸ್ಥಗಿತಗೊಳಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರು ತಮ್ಮ ನ್ಯಾಯಬೆಲೆ ಅಂಗಡಿಯಲ್ಲಿರುವ ಪಟ್ಟಿಯನ್ನು ವೀಕ್ಷಿಸಿ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿದ್ದರೆ, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡದಿದ್ದರೆ, ಬ್ಯಾಂಕ್ ಖಾತೆಯ ಮಾಹಿತಿಯು ಇದುವರೆಗೆ ಲಭ್ಯವಿಲ್ಲದಿದ್ದಲ್ಲಿ, ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿ, ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಪುನರ್ಜೀವನಗೊಳಿಸಿದ ಬಳಿಕವೇ ಆ ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾಗುತ್ತದೆ.

ಇದನ್ನೂ ಓದಿ: ತಾಯಿಯ ಎದೆಹಾಲೇ ವಿಷವಾಯಿತೇ!? ಅಧ್ಯಯನದಿಂದ ಶಾಕಿಂಗ್ ಮಾಹಿತಿ!

Leave A Reply

Your email address will not be published.