Gruhalakshmi Scheme: ಹೆಣ್ಮಕ್ಕಳೇ ಗಮನಿಸಿ, ಇಂದು ಗೃಹಲಕ್ಷ್ಮಿ ನೋಂದಣಿ ಇಲ್ಲ! ಕಾರಣ ಇಲ್ಲಿದೆ!!!

Latest Karnataka news Congress guarantee gruhalakshmi Scheme latest update

Gruhalakshmi Scheme: ರಾಜ್ಯ ಕಾಂಗ್ರೆಸ್ ಸರ್ಕಾರದ(Karnataka Government) ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme)ಕರ್ನಾಟಕ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2,000ಗಳನ್ನು ನೀಡುವ ಕುರಿತು 2023-24ನೇ ಸಾಲಿನಲ್ಲಿ ಅನುಷ್ಠಾನವಾಗುವಂತೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ಮನೆ ಯಜಮಾನಿಗೆ 2000 ರೂಪಾಯಿ ನೆರವು ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಗುರುವಾರದಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಮಾತ್ರ ಅನ್ವಯವಾಗುತ್ತದೆ. ಇದಲ್ಲದೆ, ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ನವರು ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಯ ಪ್ರಯೋಜನ ಪಡೆಯಲು ಫಲಾನುಭವಿಗಳು ಗ್ರಾಮಒನ್, ನಗರ ಪ್ರದೇಶದಲ್ಲಿ ತೆರೆಯಲಾದ ಕೇಂದ್ರಗಳು ಇಲ್ಲವೇ ಬಾಪೂಜಿ ಸೇವಾ ಕೇಂದ್ರದ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಲು ಅನುವು ಮಾಡಿಕೊಡಲಾಗಿದೆ. ಇದರ ಜೊತೆಗೆ ಫಲಾನುಭವಿಗಳು ಈ ಕೇಂದ್ರಗಳಲ್ಲದೆ ಪ್ರಜಾಪ್ರತಿನಿಧಿ ಮೂಲಕ ಸಹ ಸೇವಾ ಸಿಂಧು ಪೋರ್ಟಲ್‍ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಲಾಗಿದೆ.

ಪ್ರತಿ ದಿನ ಅರ್ಹ ಫಲಾನುಭವಿಗಳಿಗೆ ಬೆಳಗ್ಗೆ 30 ಹಾಗೂ ಮಧ್ಯಾಹ್ನ 30 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸಮಯ ಹಾಗೂ ನೋಂದಣಿ ಕೇಂದ್ರದ ವಿವರಗಳು ಮೊಬೈಲ್ ಸಂದೇಶದ ಮೂಲಕ ಸಿಗಲಿದೆ. ಈ ಸಂದೇಶ ಪಡೆದ ಫಲಾನುಭವಿಗಳು ಮಾತ್ರ ಸಂದೇಶದಲ್ಲಿ ವಿವರಿಸಿದ ಸೇವಾ ಕೇಂದ್ರಕ್ಕೆ ನಿಗದಿಪಡಿಸಿದ ಸಮಯಕ್ಕೆ ಹಾಜರಾಗಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿ ನೋಂದಾಯಿಸುವ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಾದ ಅವಶ್ಯಕತೆ ಇಲ್ಲ. ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು ಯಾವುದೇ ಅಂತಿಮ ಗಡುವು ನೀಡಿಲ್ಲ.

ಪ್ರತಿ ಫಲಾನುಭವಿಯ ನೋಂದಾವಣಿಗೆ ನಿಗದಿ ಮಾಡಿದ ದಿನಾಂಕ, ಸಮಯ ಮತ್ತು ಸ್ಥಳವನ್ನು 8147500500 ನಂಬರ್‍ಗೆ ಎಸ್‍ಎಂಎಸ್ ಮೂಲಕ ಸಂದೇಶ ಕಳುಹಿಸಿ ಇಲ್ಲವೇ 1902 ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಒಂದು ವೇಳೆ, ನಿಗದಿ ಪಡಿಸಿದ ಸಮಯಕ್ಕೆ ಭೇಟಿ ನೀಡಿ ನೋಂದಾವಣಿ ಮಾಡಲು ಸಾಧ್ಯವಾಗದೆ ಹೋದರೆ ಅದೇ ಕೇಂದ್ರಕ್ಕೆ ಮುಂದಿನ ಯಾವುದೇ ದಿನಗಳಲ್ಲಿ ಕಚೇರಿ ಸಮಯದ ಬಳಿಕ ಸಂಜೆ 5 ಗಂಟೆಯ ಬಳಿಕ ತೆರಳಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡಲಾಗುತ್ತದೆ.

ಇದನ್ನೂ ಓದಿ: 108 ಕ್ಕೆ ಕರೆಮಾಡಿ ಕಾಟ ಕೊಡೋ ಪುಂಡರು! ಹುಡುಗಿ ಸ್ವರ ಕೇಳಿದರಂತೂ….

Leave A Reply

Your email address will not be published.