ಕರಾವಳಿ ಭದ್ರತಾ ಪಡೆಯಲ್ಲಿ ನಿರುದ್ಯೋಗಿಗಳಿಗೆ ಬಂಪರ್‌ ಉದ್ಯೋಗಾವಕಾಶ! ಈ ಕೂಡಲೇ ಅರ್ಜಿ ಸಲ್ಲಿಸಿ, ಇಲ್ಲಿದೆ ಕಂಪ್ಲೀಟ್‌ ವಿವರ

Indian Coast Guard Recruitment:ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಬಹು ಮುಖ್ಯ ಮಾಹಿತಿ ಇಲ್ಲಿದೆ. ಭಾರತೀಯ ಕರಾವಳಿ ಪಡೆಯಲ್ಲಿನ ಖಾಲಿ ಹುದ್ದೆಗಳ(Indian Coast Guard Recruitment) ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿ ಅನುಸಾರ MTS ಮತ್ತು ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್( Offline)ಮೂಲಕ ಅರ್ಜಿ ಸಲ್ಲಿಸಬಹುದು.

 

ನಾಗರಿಕ ಮೋಟಾರು ಸಾರಿಗೆ ಚಾಲಕ (OG)- 1 ಹುದ್ದೆ

ಮೋಟಾರ್ ಟ್ರಾನ್ಸ್‌ಪೋರ್ಟ್ ಫಿಟ್ಟರ್ (Mech)- 2 ಹುದ್ದೆಗಳು

ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮೋಟಾರ್ ಟ್ರಾನ್ಸ್‌ಪೋರ್ಟ್ ಕ್ಲೀನರ್)- 2 ಹುದ್ದೆಗಳು

ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮಾಲಿ)- 1 ಹುದ್ದೆ

ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಪ್ಯೂನ್)- 2 ಹುದ್ದೆಗಳು

ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಸ್ವೀಪರ್)- 2 ಹುದ್ದೆಗಳು

 

ಇಂಡಿಯನ್ ಕೋಸ್ಟ್ ಗಾರ್ಡ್ ಸಂಸ್ಥೆಯಲ್ಲಿ MTS, ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್ 10 ಹುದ್ದೆಗಳು ಖಾಲಿಯಿದ್ದು,14-08-2023 ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: indiancoastguard.gov.in

 

ಈ ಹುದ್ದೆಗಳಿಗೆ ಅಧಿಕೃತ ವೆಬ್‌ಸೈಟ್: indiancoastguard.gov.inಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳ ಪ್ರತಿ ಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

Director General, {For PD(Rectt)} Coast Guard Headquarters, Directorate of Recruitment, C-1, Phase II, Industrial Area, Sector-62, Noida, U.P. – 201309

 

ಭಾರತೀಯ ಕೋಸ್ಟ್ ಗಾರ್ಡ್ ಅಧಿಕೃತ ಅಧಿಸೂಚನೆಯ ಅನುಸಾರ ಅಭ್ಯರ್ಥಿಯು ಎಸೆಸೆಲ್ಸಿ ಪೂರ್ಣಗೊಳಿಸಿರಬೇಕು. ಇದರ ಜೊತೆಗೆ ,ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ 18 ವರ್ಷದಿಂದ 27 ವರ್ಷಗಳ ಒಳಗಿರಬೇಕು. OBC ಅಭ್ಯರ್ಥಿಗಳಿಗೆ, 03 ವರ್ಷಗಳು ಮತ್ತು SC/ST ಅಭ್ಯರ್ಥಿಗಳಿಗೆ 05 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇರಲಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಪರಿಶೀಲನೆ, ದಾಖಲೆಗಳ ಪರಿಶೀಲನೆಯ ಬಳಿಕ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಲಾಗುತ್ತದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ indiancoastguard.gov.in ಭೇಟಿ ನೀಡಿ ಮಾಹಿತಿ ಪಡೆಯಬಹುದು.

Leave A Reply

Your email address will not be published.