Gruha Lakshmi: ಗೃಹಲಕ್ಷ್ಮಿ ಯೋಜನೆ ನೋಂದಣಿ; ಜನರಿಗೊಂದು ಮುಖ್ಯವಾದ ಮಾಹಿತಿ ನೀಡಿದ ಸರಕಾರ!!!

Latest news congress guarantee Important Information for Grilahakshmi Yojana Registration

Gruha Lakshmi Registration: ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme)ಕರ್ನಾಟಕ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2,000ಗಳನ್ನು ನೀಡಲಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಮನೆಯ ಯಜಮಾನಿಯರು ಎದುರು ನೋಡುತ್ತಿದ್ದಾರೆ. ಈ ನಡುವೆ ಇವರಿಗೆ ಮಹತ್ವದ ಮಾಹಿತಿ ಹೊರ ಬಿದ್ದಿದೆ.

ಗೃಹಲಕ್ಷ್ಮಿ( Gruha Lakshmi) ನೋಂದಣಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದ್ದು, ನೋಂದಣಿ ಮಾಡಿಸಿ ಪ್ರಿಂಟ್‌ ಔಟ್‌ ನೀಡುವುದಕ್ಕೂ ಸರ್ಕಾರವೇ ಹಣ ನೀಡಲಿದೆ.ಈ ನಿಟ್ಟಿನಲ್ಲಿ 12 ರೂ.ಗಳನ್ನು ಕರ್ನಾಟಕ ಸರ್ಕಾರ ನಿಗದಿಪಡಿಸಿದೆ.ಹೀಗಾಗಿ, ಈ ಯೋಜನೆಯ ಫಲಾನುಭವಿಗಳಿಂದ ನೋಂದಣಿಗೆ ಹಣ ಕೇಳಿದರೆ ಕ್ರಮವನ್ನೂ ಕೈಗೊಳ್ಳಲಾಗುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಎಚ್ಚರಿಕೆ ನೀಡಿದೆ.

ಗೃಹಲಕ್ಷ್ಮಿ ಯೋಜನೆಯಡಿ(Gruha Lakshmi Scheme) ಸರ್ಕಾರದಿಂದ ಮಾಸಿಕ 2 ಸಾವಿರ ರೂ. ಹಣವನ್ನು ಪಡೆಯಲು ನೋಂದಣಿ ಮಾಡಿಸಿಕೊಂಡವರ ಖಾತೆಗೆ ಹಣ ಜಮೆಯಾಗಲಿದೆ. ಇದಲ್ಲದೆ ನೋಂದಣಿ ಮಾಡಿಸುವವರಿಗೆ 12 ರೂ.ಕೂಡ ನೀಡಲಾಗುತ್ತದೆ. ಅಂದರೆ ನೋಂದಣಿಗೆ ಮಾಡುವ ಪ್ರಕ್ರಿಯೆಗೆ 10 ರೂ. ಮತ್ತು ನೋಂದಣಿ ನಂತರ ನೀಡುವ ಪ್ರಿಂಟ್ ಔಟ್‌ಗೆ 2 ರೂ. ಅನ್ನು ಕೂಡ ಸರ್ಕಾರ ನೀಡುತ್ತಿದೆ.

ಕರ್ನಾಟಕದಲ್ಲಿ ಸುಮಾರು 1.70 ಕೋಟಿ ಫಲಾನುಭವಿಗಳನ್ನು ಈ ಯೋಜನೆಯಡಿ ಅರ್ಹರು ಎಂದು ಪರಿಗಣಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ಪಡೆಯಲು ಬ್ಯಾಂಕ್‌ ಖಾತೆ, ಆಧಾರ್‌ ಕಾರ್ಡ್‌ ಹಾಗೂ ಪಡಿತರ ಚೀಟಿ ಕಡ್ಡಾಯವಾಗಿದೆ. ಅದರಲ್ಲೂ ಆಧಾರ್‌ ಕಾರ್ಡ್‌, ಮೊಬೈಲ್‌ ಸಂಖ್ಯೆಯನ್ನು ಜೋಡಣೆಯಾಗಿರಬೇಕು ಎಂಬ ಮಾರ್ಗಸೂಚಿಯನ್ನು ನೀಡಲಾಗಿದೆ.

ರಾಜ್ಯದ ಆಯಾ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಗಳು ಕೂಡ ಪಂಚಾಯಿತಿಗಳಿಗೆ ಅಥವಾ ಒನ್‌ ಸೇವಾ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಪಡೆಯಲು ಅರ್ಹ ಫಲಾನುಭವಿಗಳಿಗೆ ಯಾವುದೇ ಕೇಂದ್ರದಲ್ಲಿ ನೋಂದಣಿ ಪ್ರಕ್ರಿಯೆಗೆ ಹಣ ನೀಡದಂತೆ ಮುನ್ನೆಚ್ಚರಿಕೆ ನೀಡಲಾಗುತ್ತಿದೆ. ಹೆಚ್ಚಿನ ಕೇಂದ್ರಗಳಲ್ಲಿ ಹಣ ನೀಡದಂತೆ ಫಲಕಗಳನ್ನೂ ಕೂಡ ಅಳವಡಿಸಲಾಗಿದೆ. ಹೀಗಿದ್ದರೂ ಕೂಡ ಕೇಂದ್ರಗಳಲ್ಲಿ ಹಣ ಪಡೆಯುವ ದಂಧೆ ಕೂಡ ಜೋರಾಗಿ ನಡೆಯುತ್ತಿದೆ.

ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಣಿ ಮಾಡಿಸುವವರಿಂದ ವಿವರ ಪಡೆದು ಅವರ ಖಾತೆಗೆ ಇ ಗವರ್ನೆನ್ಸ್ ಇಲಾಖೆ ಮೂಲಕ ಹಣವನ್ನು ವರ್ಗಾಯಿಸಲಾಗುತ್ತದೆ.ಹೀಗಾಗಿ, ಗೃಹಲಕ್ಷ್ಮಿ ಯೋಜನೆಗೆ ಎಲ್ಲಾ ಕೇಂದ್ರಗಳವರಿಗೆ ನೋಂದಣಿ ಹಣ ಪಡೆಯದಂತೆ ಸೂಚನೆ ನೀಡಲಾಗಿದೆ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಪ್ರತಿ ನೋಂದಣಿಗೆ 12 ರೂ. ನೀಡುವ ಮಾಹಿತಿಯನ್ನೂ ನೀಡಲಾಗಿದೆ. ಆದರೂ ಕೂಡ ಈ ನೋಂದಣಿ ಪ್ರಕ್ರಿಯೆಗೆ ಹಣ ಪಡೆದರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

Leave A Reply

Your email address will not be published.