Mangaluru Rains: ಎಡೆಬಿಡದೆ ಸುರಿಯುತ್ತಿರುವ ಮಳೆ; ಸುಬ್ರಹ್ಮಣ್ಯದಲ್ಲಿ ಸ್ನಾನಘಟಕ್ಕೆ ತೆರಳದಂತೆ ಭಕ್ತರಿಗೆ ಎಚ್ಚರಿಕೆ ನೀಡಿದ ಕಡಬ ತಹಶೀಲ್ದಾರ್‌!

Latest news Mangaluru Rains Kadaba Tehsildar warned devotees due to heavy rain in Subrahmanya

Mangaluru Rains: ದಕ್ಷಿಣ ಕನ್ನಡ ಜಿಲ್ಲೆ(Dakshina Kannada)ಕರಾವಳಿಯ ಇತರ ಜಿಲ್ಲೆಗಳ ವಿವಿಧೆಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆ ಅವಧಿಯಲ್ಲಿ ಮಂಗಳೂರು(Mangaluru Rains) ಒಳಗೊಂಡಂತೆ ರಾಜ್ಯದ ನಾನಾ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೊಂದು ದಿನದಿಂದ ಸುರಿಯುತ್ತಿರುವ ಭಾರೀ ಮಳೆಮಳೆಯಾಗುತ್ತಿದ್ದು, ಸುಮಾರು 30ಕ್ಕೂ ಹೆಚ್ಚು ಕುಟುಂಬಗಳು ಜಲಧಿಗ್ಭಂಧನದ ಸ್ಥಿತಿಯಲ್ಲಿದ್ದಾರೆ.

ಮಂಗಳೂರು ಸೇರಿದಂತೆ ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇಗುಲ ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subrahmanya temple) ತೆರಳುವ ಭಕ್ತರಿಗೆ ವಿಶೇಷ ಸೂಚನೆ ನೀಡಲಾಗಿದೆ.ಪ್ರವಾಹದ ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯ ಸ್ನಾನಘಟ್ಟಕ್ಕೆ ತೆರಳದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಭಕ್ತರು ಕುಮಾರಧಾರಾ ನದಿಯ ಬಳಿ ತೆರಳದಂತೆ ತಡೆಯುವ ನಿಟ್ಟಿನಲ್ಲಿ ಸಿಬ್ಬಂದಿಯನ್ನು ನಿಯೋಜಿಸುವಂತೆ ಕಡಬ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರ ಧಾರದ ಸ್ನಾನಘಟ್ಟದ ಲಗೇಜ್ ಕೊಠಡಿ, ವಾಶ್ ರೂಂ ಹಾಗೂ ರಸ್ತೆ ಕೂಡ ಮುಳುಗಡೆಯಾಗಿದೆ. ಸುಬ್ರಹ್ಮಣ್ಯದಲ್ಲಿ ಸುರಕ್ಷತಾ ಕ್ರಮವಾಗಿ ಪೊಲೀಸ್ ಮತ್ತು ಗೃಹ ರಕ್ಷಕರ ಜೊತೆಗೆ ಎಸ್‌ಡಿಆರ್‌ಎಫ್ ತಂಡವನ್ನು ನಿಯೋಜನೆ ಮಾಡಲಾಗಿದೆ.

ಕುಕ್ಕೆಸುಬ್ರಹ್ಮಣ್ಯ ಮತ್ತು ಗುತ್ತಿಗಾರು ಸಂಪರ್ಕಿಸುವ ರಸ್ತೆಯಲ್ಲಿ ಪುಚ್ವಪ್ಪಾಡಿ ಬಳಿ ಗಾಳಿ ಮಳೆಗೆ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಇನ್ನು ಹಲವು ಮರಗಳು ರಸ್ತೆಗೆ ಬೀಳುವ ಸಾಧ್ಯತೆಯಿದ್ದು, ಹೀಗಾಗಿ, ಪ್ರಯಾಣಿಕರು ಭಯಭೀತಿಯಿಂದ ಓಡಾಡುವ ಸ್ಥಿತಿ ಎದುರಾಗಿದೆ.

ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದೊಂದು ವಾರದವರೆಗೆ ಎಡೆಬಿಡದೆ ಸುರಿದ ಮಳೆ ವಿರಾಮ ತೆಗೆದುಕೊಂಡ ಬಳಿಕ ಇದೀಗ ಮತ್ತೆ ವರುಣನ ಆರ್ಭಟ ಜೋರಾಗಿದೆ. ಈ ಮಳೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಹಲವೆಡೆ ಕೃಷಿ ಭೂಮಿ, ಆಸ್ತಿ ಮತ್ತು ರಸ್ತೆಗಳಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31 ಮನೆಗಳಿಗೆ ಭಾಗಶಃ ಹಾನಿಯಾಗಿದ್ದರೆ ,ಇದೆ ರೀತಿ,ಉಡುಪಿ ಜಿಲ್ಲೆಯಲ್ಲಿ 41 ಮನೆಗಳಿಗೆ ಹಾನಿಯಾಗಿದೆ.ಕಳೆದೆರಡು ದಿನಗಳಿಂದ ವರುಣನ ಅಬ್ಬರ ಜೋರಾಗಿದ್ದು, ಕೆರೆ, ಹಳ್ಳಗಳು ತುಂಬಿದ್ದು, ಕೆಲವೆಡೆ ರಸ್ತೆಗಳು ಮಳೆಯ ನೀರಿನಿಂದ ಜಲಾವೃತಗೊಂಡಿದೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಅಡಚಣೆ ಕೂಡ ಉಂಟಾಗಿದೆ.

Leave A Reply

Your email address will not be published.