ಮಂಗಳೂರು ವಿವಿಯ ನಾಳೆ ( ಜು.25) ನಡೆಯಲಿರುವ ಎಲ್ಲಾ ಪರೀಕ್ಷೆ ಮುಂದೂಡಿಕೆ!

Mangaluru: ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಂಗಳವಾರ (ಜುಲೈ 25) ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ನಡುವೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ ಜುಲೈ 25ರಂದು ನಡೆಯಬೇಕಾಗಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮಂಗಳೂರು(Mangaluru) ವಿಶ್ವ ವಿದ್ಯಾಲಯದ ಅಡಿಯಲ್ಲಿ ನಾಳೆ ಜುಲೈ 25 ರಂದು ನಡೆಯಬೇಕಾಗಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು( Exams)ಮುಂದೂಡಲಾಗಿದ್ದು, ಮುಂದೂಡಿದ ಪರೀಕ್ಷೆಗಳ(Exam Postponed)ಪರಿಷ್ಕೃತ ದಿನಾಂಕವನ್ನು ಮರು ನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ಮಾಹಿತಿ ನೀಡಲಾಗುತ್ತದೆ.

ಪದವಿ ಕಾಲೇಜುಗಳಲ್ಲಿ ನಾಳಿನ ಪದವಿ ಪರೀಕ್ಷೆಯನ್ನು ಮುಂದಿನ ಆದೇಶದವರಿಗೆ ಮುಂದೂಡಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ರೀತಿಯ ಬದಲಾವಣೆಯಿರುವುದಿಲ್ಲ ಎಂದು ಮಂಗಳೂರಿನ ವಿವಿ ಪ್ರಕಟಣೆ ಹೊರಡಿಸಿದ್ದಾರೆ.

Leave A Reply

Your email address will not be published.