Water Supply: ಗ್ರಾಮೀಣ ಜನರೇ ನಿಮಗಿದೋ ಭರ್ಜರಿ ಗುಡ್‌ನ್ಯೂಸ್‌! ಕುಡಿಯುವ ನೀರಿಗೆ ರಾಜ್ಯಸರಕಾರದಿಂದ ಹಣ ಬಿಡುಗಡೆ

Water Supply:ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದ ಹಿನ್ನೆಲೆ ಹಲವು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದ ಹಾಗೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ(State Government)ಸಾಕಷ್ಟು ಮುನ್ನೆಚ್ಚರಿಕಾ(Precaution Measure)ಕ್ರಮಗಳನ್ನು ಕೈಗೊಂಡಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ರಾಜ್ಯದಲ್ಲಿ ನೀರಿನ ಸಮಸ್ಯೆ ಎದುರಾಗುವ ಮುನ್ನವೇ ಎಲ್ಲಾ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (CE0) ಸಭೆ ಕರೆದು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.

 

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಕಳೆದ ಒಂದು ತಿಂಗಳಲ್ಲಿ ಎಲ್ಲಾ ಜಿಲ್ಲೆಗಳ CEOಗಳ ಜೊತೆಗೆ 2 ಬಾರಿ ವಿಸ್ತ್ರತ ಸಭೆ ನಡೆಸಿ ಕುಡಿಯುವ ನೀರಿಗೆ(Water ) ಸಮಸ್ಯೆ ಎದುರಾಗದಂತೆ ಪೂರ್ವ ನಿಯೋಜಿತ ರೂಪುರೇಷೆಯನ್ನ (ಕಂಟಿನ್ನೆನ್ಸಿ ಪ್ಲಾನ್) ತಯಾರಿಸುವಂತೆ ಸೂಚನೆ ನೀಡಲಾಗಿತ್ತು. ಟ್ಯಾಂಕರ್ ಅಥವಾ ಬಾಡಿಗೆ ಬೋರ್ ವೆಲ್(Borewell )ಮೂಲಕ ಯಾವ ಹಳ್ಳಿಗಳಿಗೆ ಕುಡಿಯುವ ನೀರನ್ನು (Drinking Water Supply)ಪೂರೈಸಬೇಕು ಎಂಬುದನ್ನ ಸಂಪೂರ್ಣವಾಗಿ ಪರಿಶೀಲಿಸಿ ಅಧಿಕಾರಿಗಳಿಂದ ವರದಿ ಸಿದ್ದಪಡಿಸಿ ಹಣ ಬಿಡುಗಡೆ ಮಾಡಲಾಗಿದೆ.

 

ಇದೀಗ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ಕುಡಿಯುವ ನೀರಿನ ಸಮಸ್ಯೆ ಇರುವ ರಾಜ್ಯದ ಕೆಲವು ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ರಾಜ್ಯ ಸರಕಾರವು 6.41 ಕೋಟಿ ರೂ. ಹಣ ಬಿಡುಗಡೆ(Money )ಮಾಡಿರುವ ಕುರಿತು ಮಾಹಿತಿ ನೀಡಿದ್ದಾರೆ.ಒಟ್ಟು ಟ್ಯಾಂಕರ್ ನೀರು ಪೂರೈಕೆ ಮಾಡುವ ಸಲುವಾಗಿ 14.21 ಕೋಟಿ ಹಣವನ್ನು ನೀಡಲಾಗಿದೆ. ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆಯಲು 93 ಲಕ್ಷ ಹಣವನ್ನು ನೀಡಲಾಗಿದೆ.

 

ಎಲ್ಲ ಜಿಲ್ಲೆಗಳ CEO ಗಳು ನೀಡಿರುವ ವರದಿಯಲ್ಲಿ ತಿಳಿಸಿದ ಹಾಗೆ ರಾಜ್ಯಾದ್ಯಂತ ಟ್ಯಾಂಕರ್ ಗಳಲ್ಲಿ ಪ್ರತಿ ದಿನ 103 ಟ್ರಿಪ್ ಗಳ ಮೂಲಕ ಕುಡಿಯುವ ನೀರನ್ನು ಪೂರೈಸುವ ವ್ಯವಸ್ಥೆ ಮಾಡಲಾಗುತ್ತದೆ. ಇದಲ್ಲದೆ, 465 ಖಾಸಗಿ ಬೋರ್ ವೆಲ್ ಗಳನ್ನ ಬಾಡಿಗೆ ಪಡೆದು ಕುಡಿಯುವ ನೀರನ್ನು ಜನರಿಗೆ ಸರಬರಾಜು ಮಾಡುವ ನಿಟ್ಟಿನಲ್ಲಿ ಹಣ ಒದಗಿಸಲಾಗಿದೆ. ಒಟ್ಟು 101 ತಾಲೂಕುಗಳ 366 ಗ್ರಾಮ ಪಂಚಾಯತಿಗಳಲ್ಲಿ 514 ಹಳ್ಳಿಗಳಿಗೆ 254 ಟ್ಯಾಂಕರ್ ಗಳಲ್ಲಿ ನೀರು ಒದಗಿಸುವ ವ್ಯವಸ್ಥೆ ಮಾಡಲಾಗುತ್ತದೆ. ಈ ಮೂಲಕ ರಾಜ್ಯ ಸರ್ಕಾರ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

Leave A Reply

Your email address will not be published.