Bengaluru-Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ನಲ್ಲಿ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ ಹೊಸ ನಿಯಮ!

Latest news New rule to be implemented soon on Bengaluru-Mysore Expressway

Bengaluru-Mysuru Expressway: ಸರ್ಕಾರ(Government )ಎಷ್ಟೇ ರೂಲ್ಸ್(Rules)ಮಾಡಿದರು ಕೂಡ ಕ್ಯಾರೇ ಎನ್ನದೆ ರೂಲ್ಸ್ ಬ್ರೇಕ್ ಮಾಡಿ.. ನಾವಿರೋದೆ ಹಿಂಗೆ ಅನ್ನೋ ರೀತಿ ಸಂಚಾರಿ ಪೊಲೀಸರನ್ನು ಕಂಡ ಕೂಡಲೇ ಜೂಟ್ ಹೇಳುವವರೇ ಹೆಚ್ಚು. ಈ ರೀತಿ ಸಂಚಾರಿ ನಿಯಮಗಳನ್ನು ಪಾಲಿಸದೆ ಅಪಾಯಗಳಿಗೆ ಆಹ್ವಾನ ಕೊಟ್ಟಂತೆ ಆಗಿರುವ ಅನೇಕ ಪ್ರಸಂಗಗಳು ದಿನಂಪ್ರತಿ ವರದಿಯಾಗುತ್ತಲೇ ಇರುತ್ತವೆ. ಈ ನಡುವೆ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಯಲ್ಲಿ(Bengaluru-Mysuru Expressway) ನಡೆಯುತ್ತಿರುವ ಸರಣಿ ಅಪಘಾತಗಳನ್ನು(Accidents) ತಡೆಯುವ ನಿಟ್ಟಿನಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ಕ್ರಮ ಕೈಗೊಳ್ಳಲು ಮುಂದಾಗಿದೆ.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿಯವರು(PM Narendra Modi)ಮಾರ್ಚ್ ನಲ್ಲಿ ಲೋಕಾರ್ಪಣೆ ಗೊಳಿಸಿದ್ದರು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅತಿವೇಗದ ಚಾಲನೆಯಡಿ ಈವರೆಗೆ ಸುಮಾರು 2 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಈ ಹೆದ್ದಾರಿಯಲ್ಲಿ ಇಲ್ಲಿಯವರೆಗೆ 570ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿರುವ ಕುರಿತು ವರದಿಯಾಗಿದ್ದು, 100ಕ್ಕೂ ಅಧಿಕ ಮಂದಿ ಇಲ್ಲಿ ನಡೆದ ಅವಘಡದ ಪರಿಣಾಮ ಮೃತಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ಅಪಘಾತ ನಿಯಂತ್ರಣ ಮಾಡುವ ಸಲುವಾಗಿ ಹೆದ್ದಾರಿ ಪ್ರಾಧಿಕಾರ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದು, ಈ ಹಿಂದೆ ಹೊರಡಿಸಿದ ಆದೇಶವನ್ನು ಶೀಘ್ರದಲ್ಲಿಯೇ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಾಧಿಕಾರ ಅಣಿಯಾಗಿದೆ.

ಇತ್ತೀಚೆಗೆ ಈ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ NHAI ಸುರಕ್ಷತಾ ಸಮಿತಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಗೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸಿತ್ತು. ದಶಪಥ ಹೆದ್ದಾರಿಯಲ್ಲಿ ನಡೆಯುತ್ತಿರುವ ಅಪಘಾತ ತಡೆಯುವ ಸಲುವಾಗಿ ಹೆದ್ದಾರಿ ಪ್ರಾಧಿಕಾರ ಆಟೋ, ಟ್ರ್ಯಾಕ್ಟರ್, ಮಲ್ಟಿ ಆಕ್ಸೇಲ್ ಹೈಡ್ರಾಲಿಕ್ ವಾಹನ, ದ್ವಿಚಕ್ರ ಸೇರಿದಂತೆ ಲಘು ವಾಹನಗಳಿಗೆ ನಿಷೇಧ ಹೇರಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ವೇಗದ ಮಿತಿಯನ್ನು ಗಂಟೆಗೆ 80 ರಿಂದ 100 ಕಿಲೋಮೀಟರ್ ನಿಗದಿ ಮಾಡಲಾಗಿದೆ. ಈ ಹಿನ್ನೆಲೆ ಲಘು ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗುತ್ತಿದ್ದು, ಜುಲೈ 12ರಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಆದೇಶವನ್ನು ಹೊರಡಿಸಿದೆ. ಇದೀಗ, ಈ ಆದೇಶವನ್ನು ಶೀಘ್ರವೇ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

Leave A Reply

Your email address will not be published.