BWSSB Recruitment 2023: BWSSB ನಿಂದ ನೇಮಕಾತಿ ಅಧಿಸೂಚನೆ, ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ

Latest news job news BWSSB Recruitment 2023 notificaion

BWSSB Recruitment 2023: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ: ಸರ್ವೇಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಖ್ಯೆ: 01

ವಿದ್ಯಾರ್ಹತೆ: ಸರಕಾರಿ ಕಚೇರಿಯಲ್ಲಿ ಪರವಾನಗಿಯೊಂದಿಗೆ ಸರ್ವೇಯರ್‌ ಆಗಿ ಕಾರ್ಯ ನಿರ್ವಹಿಸಿರೋ, ವಯೋ ನಿವೃತ್ತಿ/ ಸ್ವಯಂ ನಿವೃತ್ತಿ ಹೊಂದಿರಬೇಕು.

ವಯೋಮಿತಿ: 70 ವರ್ಷದೊಳಗಿನ ಆರೋಗ್ಯವಂತ ಸದೃಢ ಪುರುಷರಾಗಿರಬೇಕು.

ಅರ್ಜಿ ಸಲ್ಲಿಸಲು ನಿಗಧಿತ ಕೊನೆ ದಿನಾಂಕ : 31-07-2023 ರ ಸಂಜೆ 05-00 ಗಂಟೆವರೆಗೆ.

ಸರ್ವೇಯರ್‌ ಹುದ್ದೆಯ ಕರ್ತವ್ಯ ಮತ್ತು ಜವಾಬ್ದಾರಿ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಕರ್ತವ್ಯದ ಸಮಯದಲ್ಲಿ ಸಂಪರ್ಕಿಸುವುದು. ಸಮಯ ಬೆಳಗ್ಗೆ 10-00 ಗಂಟೆಯಿಂದ ಸಂಜೆ 5.30 ರವರೆಗೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ : ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1ನೇ ಮಹಡಿ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು- ಇಲ್ಲಿಗೆ ಅರ್ಜಿದಾರರು ಖುದ್ದಾಗಿ ಹೋಗಿ ಅರ್ಜಿಯನ್ನು ಸಲ್ಲಿಸುವುದು

Leave A Reply

Your email address will not be published.