Accident: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯರಿಗೆ ಗುದ್ದಿದ ಜಾಗ್ವಾರ್‌ ಕಾರು! 15 ಅಡಿ ಮೇಲೆ ಹಾರಿ ಬಿದ್ದ ವಿದ್ಯಾರ್ಥಿನಿ, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Latest news Car accident Raichur Jaguar car Accident Video

ಜಾಗ್ವಾರ್‌ ಕಾರೊಂದು ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ, ವಿದ್ಯಾರ್ಥಿನಿಯರಿಗೆ ಗುದ್ದಿದ ಘಟನೆಯೊಂದು ನಡೆದಿದೆ. ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ. ಇನ್ನೋರ್ವ ವಿದ್ಯಾರ್ಥಿನಿ 15 ಅಡಿ ದೂರಕ್ಕೆ ಹಾರಿ ಬಿದ್ದಿರುವ ಘಟನೆ ರಾಯಚೂರು ನಗರದ ರೈಲ್ವೆ ಸ್ಟೇಷನ್‌ ರಸ್ತೆಯಲ್ಲಿ ನಡೆದಿದೆ.

ಈ ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಯಚೂರು ನಗರದ ಅಂಬೇಡ್ಕರ್‌ ವೃತ್ತದಿಮದ ರೈಲ್ವೆ ನಿಲ್ದಾಣದ ಕಡೆಗೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ದ್ವಿಚಕ್ರವಾಹನ ಕ್ರಾಸ್‌ ಮಾಡುವ ಸಂದರ್ಭದಲ್ಲಿ ವೇಗವಾಗಿ ಬಂದ ಜಾಗ್ವಾರ್‌ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಅಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಕೂಡಾ ಗುದ್ದಿದೆ. ವಿದ್ಯಾರ್ಥಿನಿಯರು ಬದುಕುಳಿದಿದ್ದು, ಬೈಕ್‌ ಸವಾರ ಕಾಲಿಗೆ ಪೆಟ್ಟಾಗಿದೆ.

ಬೈಕ್‌ ಸವಾರ ಯೂಟರ್ನ್‌ ಮಾಡುತ್ತಿದ್ದಾಗ, ಎದುರಿನಿಂದ ವೇಗವಾಗಿ ಬಂದ ಕಾರು ನಿಯಂತ್ರಣಕ್ಕೆ ಬಾರದೇ ಬೈಕ್‌ಗೆ ಡಿಕ್ಕಿ ಹೊಡೆದು, ಕಾರು ಡಿಕ್ಕಿ ಹೊಡೆದ ರಭಸಕ್ಕೆ, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿ ಸುಮಾರು 15 ಅಡಿ ಮೇಲಕ್ಕೆ ಹಾರಿ ಬಿದ್ದಿದ್ದಾಳೆ. ವಿದ್ಯಾರ್ಥಿನಿ ಶಿವಮಂಗಳ, ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ. ಬೈಕ್‌ ಸವಾರ ಶಿವರಾಜ್‌ ಪಾಟೀಲ್‌ ಗಂಭೀರ ಗಾಯಗೊಂಡಿದ್ದಾರೆ. ರಾಯಚೂರು ನಗರ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

 

Leave A Reply

Your email address will not be published.