Gruhalakshmi Yojana: ಗೃಹಲಕ್ಷ್ಮಿ ಯೋಜನೆ ನೋಂದಣಿದಾರರಿಗೆ ಮತ್ತೊಂದು ಗುಡ್‌ ನ್ಯೂಸ್‌! ಇನ್ನು ಇಲ್ಲಿಗೆ ತೆರಳಿ ಅರ್ಜಿ ಸಲ್ಲಿಸಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

latest news Gruha Lakshmi Scheme Registration procedure Simplified

Gruha Lakshmi Scheme: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ (Gruha Lakshmi Scheme)ಅನುಸಾರ ಕರ್ನಾಟಕ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2,000ಗಳನ್ನು ನೀಡಲಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಮನೆಯ ಯಜಮಾನಿಯರು ಎದುರು ನೋಡುತ್ತಿದ್ದಾರೆ. ಈ ನಡುವೆ ಇವರಿಗೆ ಮಹತ್ವದ ಮಾಹಿತಿ ಹೊರ ಬಿದ್ದಿದೆ.

ಗೃಹಲಕ್ಷ್ಮಿ ಯೋಜನೆಯಡಿ(Gruha Lakshmi Scheme) ಸರ್ಕಾರದಿಂದ ಮಾಸಿಕ 2 ಸಾವಿರ ರೂ. ಹಣವನ್ನು ಪಡೆಯಲು ನೋಂದಣಿ ಮಾಡಿಸಿಕೊಂಡವರ ಖಾತೆಗೆ ಹಣ ಜಮೆಯಾಗಲಿದೆ. ಇದಲ್ಲದೆ ನೋಂದಣಿ ಮಾಡಿಸುವವರಿಗೆ 12 ರೂ.ಕೂಡ ನೀಡಲಾಗುತ್ತದೆ. ಅಂದರೆ ನೋಂದಣಿಗೆ ಮಾಡುವ ಪ್ರಕ್ರಿಯೆಗೆ 10 ರೂ. ಮತ್ತು ನೋಂದಣಿ ನಂತರ ನೀಡುವ ಪ್ರಿಂಟ್ ಔಟ್ಗೆ 2 ರೂ. ಅನ್ನು ಕೂಡ ಸರ್ಕಾರ ನೀಡುತ್ತಿದೆ.

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಇದೀಗ ಮತ್ತಷ್ಟು ಸರಳ ಹಾಗೂ ಸುಲಭ. ಅದು ಹೇಗೆ ಅಂತೀರಾ?ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಈ ಕುರಿತು ಮಾಹಿತಿ ನೀಡಿದ್ದು, ಅರ್ಹ ಫಲಾನುಭವಿಗಳು ನೇರವಾಗಿ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಸಚಿವೆ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅರ್ಹ ಮಹಿಳೆಯರಿಗೆ ಮಾಸಿಕ 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಇದೀಗ ಮತ್ತಷ್ಟು ಸರಳೀಕರಣಗೊಂಡಿದೆ. ಎಲ್ಲರಿಗೂ ಗೊತ್ತಿರುವ ಹಾಗೆ,ಈ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ ಬಂದ ಬಳಿಕವಷ್ಟೇ ಅದರಲ್ಲಿ ನೀಡಿದ ದಿನಾಂಕದಂದು ನೋಂದಣಿ ಕೇಂದ್ರಗಳಿಗೆ ಭೇಟಿ ನೀಡಬೇಕು ಎಂದು ಸೂಚಿಸಲಾಗಿತ್ತು. ಸದ್ಯ, ಈ ಕುರಿತು ಕೊಂಚ ಬದಲಾವಣೆ ಮಾಡಲಾಗಿದೆ.

ನೀವೀಗ, ಗೃಹಲಕ್ಷ್ಮಿ ಯೋಜನೆ ನೋಂದಣಿ ಮಾಡಿಸಿಕೊಳ್ಳಲು ಎಸ್ಎಂಎಸ್ ಬಂದಿಲ್ಲ ಎಂದು ಫಲಾನುಭವಿ ಮಹಿಳೆಯರು ಯೋಚಿಸುತ್ತಾ ಕೂರಬೇಕಾಗಿಲ್ಲ! ಮಹಿಳೆಯರು ಸುಲಭವಾಗಿ ನೋಂದಣಿ ಮಾಡಿಸಲು ಸಹಕರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದೆ. ಈಗ ಎಸ್ಎಂಎಸ್ಗೆ ಕಾಯುವ ಅಗತ್ಯವಿಲ್ಲ. ಎಸ್ಎಂಎಸ್ ಇಲ್ಲದೇ ನೋಂದಣಿ ಮಾಡಿಸಬಹುದು ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ( Gruha Lakshmi) ನೋಂದಣಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದ್ದು, ನೋಂದಣಿ ಮಾಡಿಸಿ ಪ್ರಿಂಟ್ ಔಟ್ ನೀಡುವುದಕ್ಕೂ ಸರ್ಕಾರವೇ ಹಣ ನೀಡಲಿದೆ.ಈ ನಿಟ್ಟಿನಲ್ಲಿ 12 ರೂ.ಗಳನ್ನು ಕರ್ನಾಟಕ ಸರ್ಕಾರ ನಿಗದಿಪಡಿಸಿದೆ.ಹೀಗಾಗಿ, ಈ ಯೋಜನೆಯ ಫಲಾನುಭವಿಗಳಿಂದ ನೋಂದಣಿಗೆ ಹಣ ಕೇಳಿದರೆ ಕ್ರಮವನ್ನೂ ಕೈಗೊಳ್ಳಲಾಗುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಎಚ್ಚರಿಕೆ ನೀಡಿದೆ.

Leave A Reply

Your email address will not be published.