ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ; ಆರೋಪಿಗಳಿಗೆ ಕಿರುಕುಳ ಪ್ರಕರಣ, ಸಿಸಿಟಿವಿ ದೃಶ್ಯಾವಳಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

praveen-nettaru-murder-case-accused-complaint-about-harrassement-case

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ದೇಶದಾದ್ಯಂತ ಸುದ್ದಿ ಮಾಡಿದ ವಿಷಯ. ಈಗ ಈ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಕಿರುಕುಳ ನೀಡಲಾಗಿದೆ ಎಂಬ ಮಾತು ಬಂದಿತ್ತು. ಈಗ ಈ ಬಗ್ಗೆ ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ಎನ್‌ಐಎ ಕಚೇರಿಯಲ್ಲಿನ ಸಿಸಿಟಿವಿಯ ದೃಶ್ಯಾವಳಿ ಇದ್ದರೆ ಅದನ್ನು ವಿಶೇಷ ಕೋರ್ಟ್‌ಗೆ ನೀಡಲು ಹೈಕೋರ್ಟ್‌ ನಿರ್ದೇಶನ ನೀಡಿದೆ.

ನ್ಯಾ.ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ನ್ಯಾ.ಜಿ.ಬಸವರಾಜ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತು ವಿಚಾರಣೆ ನಡೆಸಿ ನಿರ್ದೇಶನ ನೀಡಿದೆ.

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಮೊಹಮ್ಮದ್‌ ಸೈಯದ್‌ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ಈ ನಿರ್ದೇಶನವನ್ನು ನ್ಯಾಯಪೀಠ ನೀಡಿದೆ.

2022ರ ನವೆಂಬರ್‌ ತಿಂಗಳ ಸಿಸಿಟಿವಿ ದೃಶ್ಯಾವಳಿ ಲಭ್ಯವಿದ್ದರೆ ಅದನ್ನು ವಿಶೇಷ ಕೋರ್ಟ್‌ಗೆ ಸಲ್ಲಿಸಬೇಕು. ಈ ಕುರಿತು ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ಎನ್‌ಐಎ ಇದರ ಕಂಪ್ಯೂಟರ್‌ ವಿಭಾಗಕ್ಕೆ ನಿರ್ದೇಶನ ನೀಡಲಾಗಿದೆ.

ಪ್ರಕರಣದ ಹಿನ್ನೆಲೆ: ಎನ್‌ಐಎ ಅಧಿಕಾರಿಗಳು ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ಹಲವು ಮಂದಿಯನ್ನು ಬಂಧನ ಮಾಡಿದ್ದು. ಇವರಲ್ಲಿ ಹದಿನೆಂಟನೇ ಆರೋಪಿಯಾದ ಮೊಹಮ್ಮದ ಜಬೀರ್‌ ತಪ್ಪೊಪ್ಪಿಗೆ ಹೇಳಿಕೆ ನೀಡುವುದಾಗಿ ಹೇಳಿದ್ದ. ಈ ಕುರಿತು ವಿಶೇಷ ನ್ಯಾಯಾಲಯಕ್ಕೆ ಎನ್‌ಐಎ ಅಧಿಕಾರಿಗಳು ಮನವಿ ಮಾಡಿದ್ದು, ನ್ಯಾಯಾಲಯದ ಮುಂದೆ ತಪ್ಪೊಪ್ಪಿಗೆ ಹೇಳಿಕೆ ದಾಖಲು ಮಾಡಿದ್ದರು.

ಇದನ್ನು ಪ್ರಶ್ನೆ ಮಾಡಿದ್ದ ಮೊದಲ ಆರೋಪಿ ಮೊಹಮ್ಮದ್‌ ಸೈಯೀಬ್‌, ಮೊಹಮ್ಮದ್‌ ಜಬೀರ್‌ ಅವರನ್ನು ವಿಚಾರಣೆ ಮಾಡುತ್ತಿದ್ದ ಸಂದರ್ಭದಲ್ಲಿನ ಸಿಸಿಟಿವಿ ದೃಶ್ಯಗಳನ್ನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯ ಇದನ್ನು ರದ್ದು ಪಡಿಸಿತ್ತು. ಜಬೀರ್‌ಗೆ ಎನ್‌ಐಎ ಅಧಿಕಾರಿಗಳು ಕಿರುಕುಳ ನೀಡಿದ್ದರು ಎಂಬುವುದು ಆಧಾರರಹಿತ ಆರೋಪ ಮತ್ತು ಸುಳ್ಳು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತ್ತು. ಈ ವಿಷಯದ ಕುರಿತು ಹೈಕೋರ್ಟ್‌ ಮೆಟ್ಟಿಲೇರಿದ್ದು, ಈ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ.
.

Leave A Reply

Your email address will not be published.