Ration Card Holders:ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್!!! BPL ಹೆಲ್ತ್ ಕಾರ್ಡ್ ಶೀಘ್ರ ವಿತರಣೆ!

Ration Card Holders important information announcement for Ration Card Holder

Ration card holders: ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಏಳಿಗೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಜನರಿಗೆ ಬೆಂಬಲವಾಗಿ ನಿಂತಿವೆ. ಇವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ.

ಸರ್ಕಾರದ ಆದೇಶ ಅನ್ವಯ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ.ಗೆ 34 ರೂ.ರಂತೆ ಪಡಿತರ ಚೀಟಿಯಲ್ಲಿನ (Ration Card Holders)ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುತ್ತದೆ. ಹೊಸದಾಗಿ ಆದ್ಯತಾ ಪಡಿತರ ಚೀಟಿ (BPL)ಬಯಸಿ ಅರ್ಜಿ ಸಲ್ಲಿಸಿ, ಯೋಜನೆಯ ಪ್ರಯೋಜನ ಪಡೆಯಲು ಎದುರು ನೋಡುತ್ತಿದ್ದ ಮಂದಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಕೇವಲ ಆರೋಗ್ಯ ಸೇವೆ ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಬಯಸುವ ಅರ್ಹ ಅರ್ಜಿದಾರರಿಗೆ ಬಿಪಿಎಲ್ ‘ಹೆಲ್ತ್’ ಕಾರ್ಡ್ ಅತೀ ಶೀಘ್ರದಲ್ಲಿ ನಿಮಗೆ ದೊರೆಯುವಂತೆ ಮಾಡಲು ಸರಕಾರ ಚಿಂತನೆ ನಡೆಸಿದೆ.

ಚಿಕ್ಕಬಳ್ಳಾಪುರ, ಶಿವಮೊಗ್ಗ, ಉಡುಪಿ ಮತ್ತು ವಿಜಯನಗರ ಜಿಲ್ಲೆಗಳ ಉಳಿದವರು ಜುಲೈ ಅಂತ್ಯದೊಳಗೆ ಹಣ ಪಡೆಯಲಿರುವ ಕುರಿತು ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಬಿಪಿಎಲ್ ಪಡಿತರ ಚೀಟಿ ವಿತರಣೆಗೆ ಜನಸಂಖ್ಯೆ ಹೆಚ್ಚಳಕ್ಕೆ ಅನುಗುಣವಾಗಿ ಪ್ರಮಾಣವನ್ನೂ ಹೆಚ್ಚಳ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ನಿರ್ಬಂಧವನ್ನು ಸಡಿಲಿಸಿ ಹೆಚ್ಚುವರಿ ಬಿಪಿಎಲ್ ಪಡಿತರ ಚೀಟಿಗಳಿಗೆ ಮಾನ್ಯತೆ ನೀಡುವ ಸಲುವಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡುವ ಕುರಿತು ಮುನಿಯಪ್ಪ ತಿಳಿಸಿದ್ದಾರೆ. ಕಾರ್ಡ್ ಆರೋಗ್ಯ ಸೌಲಭ್ಯಕ್ಕೆ ಮಾತ್ರ ಸೀಮಿತವಾಗಿರಲಿದ್ದು, ಪಡಿತರ ಪಡೆಯಲು ಅನುವು ಮಾಡಿಕೊಡಲಾಗಿದೆ.

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ನಾಲ್ಕು ಜಾರಿಗೆ ಬಂದಿವೆ. ಈ ಯೋಜನೆಗಳ ಲಾಭ ಪಡೆಯಲು ಬಿಪಿಎಲ್ ಪಡಿತರ ಚೀಟಿ ಹೊಂದಿರುವುದು ಕಡ್ಡಾಯವಾಗಿದೆ. ಬಿಪಿಎಲ್ ಕಾರ್ಡ್ ಕೋರಿ ಅರ್ಜಿ ಸಲ್ಲಿಸಲು ಜನರು ಮುಗಿ ಬೀಳುತ್ತಿದ್ದಾರೆ. ಕೇವಲ ಆರೋಗ್ಯ ಸೇವೆಯ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಿದವರು ಇದರಿಂದ ಚಿಂತಿತರಾಗಿದ್ದಾರೆ. ಇದೀಗ, ಸರ್ಕಾರ ಇವರಿಗೆ ಕೊಂಚ ಮಟ್ಟಿಗೆ ರಿಲೀಫ್ ನೀಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ರವರು ಆರೋಗ್ಯ ಸೇವೆಗೆ ಅಡಚಣೆಯಾಗಬಾರದು ಎಂಬ ದೆಸೆಯಲ್ಲಿ ಅರ್ಹ ಮೂರು ಲಕ್ಷ ಅರ್ಜಿಗಳನ್ನು ಪರಿಶೀಲಿಸಿ, ಈ ಪೈಕಿ ಆರೋಗ್ಯ ಸೇವೆ ಬಯಸಿದವರಿಗೆ ಬಿಪಿಎಲ್ ‘ಹೆಲ್ತ್’ ಕಾರ್ಡ್ ವಿತರಿಸಲಿರುವ ಕುರಿತು ಮಾಹಿತಿ ನೀಡಿದ್ದಾರೆ.

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.64ರಷ್ಟು ಜನರು ಪಡಿತರ ವ್ಯವಸ್ಥೆ ವ್ಯಾಪ್ತಿಗೆ ಒಳಪಟ್ಟಿದ್ದಾರೆ ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರ 84 ಲಕ್ಷ ಬಿಪಿಎಲ್ ಕಾರ್ಡ್ಗಳಿಗೆ ಪಡಿತರ ಸೀಮಿತ ಮಾಡಿದ್ದು, ಉಳಿದ 14 ಲಕ್ಷ ಬಿಪಿಎಲ್ ಪಡಿತರ ಚೀಟಿದಾರರಿಗೆ ವಿತರಿಸುವ ಅಕ್ಕಿಯ ಮೊತ್ತ ರಾಜ್ಯ ಸರ್ಕಾರ ನೀಡುತ್ತಿದೆ.ಹೀಗಾಗಿ, ಹೊಸ ಅರ್ಜಿದಾರರ ಬಿಪಿಎಲ್ ಪಡಿತರ ಚೀಟಿ ವಿತರಣೆ ಮಾಡುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ತಲಾ ಐದು ಕೆಜಿ ಅಕ್ಕಿ ಬದಲು 170 ರೂ.ಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಇಲ್ಲಿಯವರೆಗೆಗೆ 27 ಜಿಲ್ಲೆಗಳ 3.45 ಕೋಟಿ ಫಲಾನುಭವಿಗಳಿಗೆ ಒಟ್ಟು ನಗದು 566 ಕೋಟಿ ರೂ. ಪಾವತಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪರವರು ಸಿಎಂ ಸಿದ್ದರಾಮಯ್ಯರವರೊಂದಿಗೆ ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ

Leave A Reply

Your email address will not be published.