ದ.ಕ.ಇಂದ್ರ ಧನುಷ್ 5.0 ಅಭಿಯಾನ : ರೋಗ ನಿರೋಧಕ ಲಸಿಕೆ, ಶೇ.100 ಗುರಿ ಸಾಧಿಸಲು ಜಿಲ್ಲಾಧಿಕಾರಿ ಸೂಚನೆ

DK Indra Dhanush 5.0 campaign District Collector instructs to achieve 100 percent target in Disease resistant vaccine

DK Indra Dhanush 5.0 campaign: ಮಂಗಳೂರು : 23 ತಿಂಗಳೊಳಗಿನ ಮಕ್ಕಳಿಗೆ ನಿಯಮಿತ ಅವಧಿಯಲ್ಲಿ ನೀಡಬೇಕಾದ ರೋಗ ನಿರೋಧಕ ಲಸಿಕೆಗಳು, 2-5 ವಷರ್ದೊಳಗಿನ ಮಕ್ಕಳಿಗೆ ಎಂಆರ್-1, ಎಂಆರ್-2, ಫೆಂಟಾ ಮತ್ತು ಓಪಿ ಲಸಿಕಾ ಡೋಸ್‌ಗಳು ಹಾಗೂ ರೋಗ ನಿರೋಧಕ ಹಾಗೂ ಸುರಕ್ಷಿತ ಲಸಿಕೆ ಪಡೆಯದ ಅಥವಾ ಭಾಗಶಃ ಪಡೆದಿರುವ ಗರ್ಭಿಣಿಯರನ್ನು ಆಗಸ್ಟ್ 7ರಿಂದ 12ರವರೆಗೆ ನಡೆಯಲಿರುವ ಇಂದ್ರ ಧನುಷ್ 5.0 ಅಭಿಯಾನದ( DK Indra Dhanush 5.0 campaign) ಮೊದಲ ಹಂತದಲ್ಲೇ ಮಾಡಿ ಲಸಿಕೆ ನೀಡುವ ಮೂಲಕ ಜಿಲ್ಲೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಮುತ್ತೈ ಮುಗಿಲನ್ ಎಂ.ಪಿ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಇಂದ್ರಧನುಷ್ ಮತ್ತು ದಡಾರ ಹಾಗೂ ರುಬೆಲ್ಲಾ ನಿರ್ಮೂಲನಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆಯ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಗೆ ವಲಸೆ ಬಂದಿರುವ ಕಟ್ಟಡ ಹಾಗೂ ಇತರೆ ಕಾರ್ಮಿಕರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಆರೋಗ್ಯ ಹಾಗೂ ಕಾರ್ಮಿಕ ಇಲಾಖೆ ಈ ಬಗ್ಗೆ ಹೆಚ್ಚಿನ ಪ್ರಚಾರ ಮಾಡಿ, ಅರ್ಹ ಫಲಾನುಭಗಳು ನಿಗದಿಪಡಿಸಿರುವ ಅಭಿಯಾನದ ಸಮಯದಲ್ಲಿ ಲಸಿಕೆ ಪಡೆಯದೆ ಬಿಟ್ಟು ಹೋಗದಂತೆ ಎಚ್ಚರ ವಹಿಸಬೇಕು. ಈ ಬಗ್ಗೆ ಕೈಗೊಂಡಿರುವ ಸಮೀಕ್ಷಾ ಕಾರ್ಯ ಪೂರ್ಣಗೊಂಡ ನಂತರ ಆರೋಗ್ಯ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಡಿಸಿ ತಿಳಿಸಿದರು.

ಸಭೆಯಲ್ಲಿ ದ.ಕ.ಜಿಪಂ ಸಿಇಒ ಡಾ.ಆನಂದ್ ಕೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಮತ್ತು ಅಧೀಕ್ಷಕ ಡಾ.ಸದಾಶಿವ ಶಾನುಭೋಗ್, ಆರ್‌ಸಿಎಚ್ ಅಧಿಕಾರಿ ಡಾ.ರಾಜೇಶ್ ಉಪಸ್ಥಿತರಿದ್ದರು.

Leave A Reply

Your email address will not be published.