Gruha Lakshmi Yojana latest Updates: ಗೃಹಲಕ್ಷ್ಮಿ ಯೋಜನೆಯನ್ನು ಯಶಸ್ವಿ ಮಾಡುವ ನಿಟ್ಟಿನಲ್ಲಿ ಸರಕಾರದಿಂದ ಮಹತ್ವದ ಮತ್ತೊಂದು ಹೆಜ್ಜೆ!

Latest news congress guarantees Gruha Lakshmi Yojana latest Updates

Gruha Lakshmi Yojana latest Updates: Gruha Lakshmi Scheme: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ (Gruha Lakshmi Scheme)ಅನುಸಾರ ಕರ್ನಾಟಕ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2,000ಗಳನ್ನು ನೀಡಲಿದೆ. ಕರ್ನಾಟಕದಲ್ಲಿ ಸುಮಾರು 1.70 ಕೋಟಿ ಫಲಾನುಭವಿಗಳನ್ನು ಈ ಯೋಜನೆಯಡಿ ಅರ್ಹರು ಎಂದು ಪರಿಗಣಿಸಲಾಗಿದೆ.

ಈ ನಡುವೆ, ಕಾಂಗ್ರೆಸ್ ಸರ್ಕಾರದ(Congress Party)ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ(Gruha Lakshmi Yojana latest Updates)ಗ್ರಾಮೀಣ ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ ಲಭ್ಯವಾಗುತ್ತಿದೆ. ಹೀಗಿದ್ದರೂ ಕೂಡ ಬೆಂಗಳೂರಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೀಗಾಗಿ ಬೆಂಗಳೂರಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗೆ ನಿರೀಕ್ಷಿತ ಮಟ್ಟದಲ್ಲಿ ರೆಸ್ಪಾನ್ಸ್ ಸಿಕ್ಕದ ಹಿನ್ನೆಲೆಯಲ್ಲಿ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಯಶಸ್ಸಿಗೆ ಟೊಂಕ ಕಟ್ಟಿ ನಿಂತಿರುವ ಸರ್ಕಾರ ಬಿಬಿಎಂಪಿಗೆ ಬೆಂಗಳೂರು ನೋಂದಣಿಯ ಜವಾಬ್ದಾರಿ ವಹಿಸಿದೆ. ಬೆಂಗಳೂರು(Bengaluru) ನಗರದಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ನೋಂದಾಯಿಸುವಲ್ಲಿ ಬೆಂಗಳೂರು ಒನ್ ಸೇರಿದಂತೆ ಅನೇಕ ಕೇಂದ್ರಗಳಲ್ಲಿ ಸರ್ವರ್ ಸಮಸ್ಯೆ ತಲೆದೋರಿದ ಹಿನ್ನೆಲೆ ಪಾಲಿಕೆಯ ಎಲ್ಲಾ ವಾರ್ಡ್ ಕಚೇರಿಗಳಲ್ಲಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲು ಬಿಬಿಎಂಪಿ(BBMP )ಯೋಜನೆ ರೂಪಿಸಿದೆ.

ಪ್ರತಿ ವಾರ್ಡ್ ಕಛೇರಿ ಮುಂಭಾಗದಲ್ಲಿ ಗೃಹ ಲಕ್ಷ್ಮೀ ನೋಂದಣಿ ಕೇಂದ್ರ ಎಂಬ ಬ್ಯಾನರ್ (Banner)ಅನ್ನು ಅಳವಡಿಸಲು ಸೂಚಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಡಿಯೋ, ವೀಡಿಯೋ ಕ್ಲಿಪ್ಸ್ ಪಡೆದು ನಗರದ ಜನನಿಬಿಡ ಪ್ರದೇಶ, ಕೊಳಗೇರಿ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರ ನೀಡಿ ಎಲ್ಲಾ ಫಲಾನುಭವಿಗಳು ನೋಂದಣಿ (Gruhalakshmi Yojana Registration)ಮಾಡಿಕೊಳ್ಳುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪಾಲಿಕೆಯ ವಾರ್ಡ್ ಕಛೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದಿರುವ ಕುರಿತಂತೆ ವಾರ್ಡ್ ಕಚೇರಿಗಳ ವಿಳಾಸ ಸೇರಿದಂತೆ ಇನ್ನಿತರ ಅಗತ್ಯ ಮಾಹಿತಿಯನ್ನು ಬಿಬಿಎಂಪಿಯ ವೆಬ್‌ಸೈಟ್( BBMP Website)ನಲ್ಲಿ ನೀಡಲು ಸೂಚಿಸಲಾಗಿದೆ.

ಬಿಬಿಎಂಪಿ ವಾರ್ಡ್ ಕಚೇರಿಗಳಲ್ಲಿ ನೋಂದಣಿ ಕೇಂದ್ರ ಓಪನ್ ಮಾಡಲು ಸಿದ್ಧತೆ ನಡೆಸಿದ್ದು, ಈ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳ ಸಭೆ ನಡೆಸಿ ಚರ್ಚೆಯ ಬಳಿಕ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ಕೊಟ್ಟಿದ್ದಾರೆ. ಪಾಲಿಕೆಯ 198 ವಾರ್ಡ್ ಗಳಲ್ಲಿ ಸ್ಥಾಪಿಸುವ ಸಹಾಯ ಕೇಂದ್ರಗಳಲ್ಲಿ ಅರ್ಹ ಫಲಾನುಭವಿಗಳು ತೆರಳಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಲು ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿದೆ. ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜನೆ ಮಾಡುವ ಜೊತೆಗೆ ಗೃಹಲಕ್ಷ್ಮಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ನೋಂದಾಯಿಸಬೇಕು. ಫಲಾನುಭವಿಗಳಿಗೆ ಮಂಜುರಾತಿ ಪತ್ರವನ್ನು ನೀಡುವ ಸಲುವಾಗಿ ಸಿಬ್ಬಂದಿಗೆ ಸರಿಯಾದ ತರಬೇತಿಯನ್ನು ನೀಡುವ ಅದಕ್ಕೆ ಪೂರಕ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ

Leave A Reply

Your email address will not be published.