Jharkhand: ಮೊಹರಂ ಆಚರಣೆ ವೇಳೆ ಭೀಕರ ಅವಘಢ, ವಿದ್ಯುತ್‌ ತಂತಿ ತಾಗಿ 4 ಜನ ಸಾವು!!!

Latest news Jharkhand During Moharram celebration 4 people died in electric wire

Jharkhand: ಜಾರ್ಖಂಡ್ನ(Jharkhand) ಬೊಕಾರೊ ಜಿಲ್ಲೆಯ ಪೀಟರ್‌ವಾರ್ ಬ್ಲಾಕ್‌ನ ಖೆಟ್ಕೊ ಗ್ರಾಮದಲ್ಲಿ ಮೊಹರಂ ಮೆರವಣಿಗೆ (Moharram Procession) ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಮೃತಪಟ್ಟ (4 Dead)ದಾರುಣ ಘಟನೆ ವರದಿಯಾಗಿದೆ.

ಇಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಮೊರಹಂ ಮೆರವಣಿಗೆ ಪ್ರಾರಂಭವಾಗಿದ್ದು, ಮುಸ್ಲಿಂ ಸಮುದಾಯದ ಧ್ವಜ 11,000 ವೋಲ್ಟ್ ಹೈ-ಟೆನ್ಶನ್ ವಿದ್ಯುತ್ ತಂತಿಗೆ ತಗುಲಿದ ಹಿನ್ನೆಲೆ ಘಟನೆ ಸಂಭವಿಸಿದೆ. ಈ ನಡುವೆ, ಜುಲೈ 29ರಂದು ಅಂದರೆ ಇಂದು ಬೆಳಿಗ್ಗೆ ಜಾರ್ಖಂಡ್ನ (Jharkhand) ಬೊಕಾರೊ ಜಿಲ್ಲೆಯ ಪೀಟರ್‌ವಾರ್ ಬ್ಲಾಕ್‌ನ ಖೆಟ್ಕೊ ಗ್ರಾಮದಲ್ಲಿ ಮೊಹರಂ ಮೆರವಣಿಗೆಯಲ್ಲಿ ಹೊತ್ತೊಯ್ಯುತ್ತಿದ್ದ ತಾಜಿಯಾ ಹೈಟೆನ್ಷನ್ ವಿದ್ಯುತ್ ತಂತಿಗೆ( Electrocuted)ತಗುಲಿದ ಹಿನ್ನೆಲೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಮೃತಪಟ್ಟಿದ್ದು ,10 ಮಂದಿಗೆ ಸುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.ಇನ್ನೂ ಘಟನಾ ಸ್ಥಳಕ್ಕೆ ಬೊಕಾರೊನ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ಅವರು ಭೇಟಿ ನೀಡಿ ಈ ಬಗ್ಗೆ ತನಿಖೆ ನಡೆಸಿದ್ದಾರೆ ಎಂದು ವರದಿಯಾಗಿದೆ.

Leave A Reply

Your email address will not be published.