ತಂದೆಯೋರ್ವನಿಂದ ಮಗಳ ಮೇಲೆ ಒಂದು ವರ್ಷದಿಂದ ನಿರಂತರ ಅತ್ಯಾಚಾರ! ಅಜ್ಜಿ ಕೈಗೆ ಸಿಕ್ಕಿಬಿದ್ದ ಕಿರಾತಕ, ಪೋಕ್ಸೋ ದಾಖಲು

man-allegedly-raped-his-own-daughter-and-pocso-case-filed

ತಂದೆಯೋರ್ವ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿದ ಘಟನೆಯೊಂದು ಬೀದರ್‌(Bidar) ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ. ಈ ತಂದೆ ಮನೆಯಲ್ಲಿ ಎಲ್ಲರೂ ನಿದ್ದೆಗೆ ಜಾರಿದಾಗ ಮಗಳ ಬಳಿ ಬಂದು ಅತ್ಯಾಚಾರ ಮಾಡುತ್ತಿದ್ದ ಎನ್ನಲಾಗಿದೆ. ಈತ ಈಗ ಅಜ್ಜಿಯ ಕೈಗೆ ಸಿಕ್ಕಿಬಿದ್ದಿದ್ದು, ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಈತ ಕಳೆದ ಒಂದು ವರ್ಷದಿಂದ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡುತ್ತಿದ್ದ ಎಂದು ವರದಿಯಾಗಿದೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave A Reply

Your email address will not be published.