Free bus service: ಫ್ರೀ ಬಸ್ ಎಫೆಕ್ಟ್: ಈಗ ಹೈ ಕೋರ್ಟ್ ಮೆಟ್ಟಿಲಲ್ಲಿ! ಕೇಸು ಹಾಕಿದವರು ಯಾರು ಗೊತ್ತೇ?

Free bus effect students and senior citizens complained about Shakthi yojana

Free Bus service : ಕರ್ನಾಟಕದ ಜನತೆಗೆ ಐದು ಗ್ಯಾರಂಟಿಯನ್ನು ಘೋಷಣೆ ಮಾಡುವ ಮೂಲಕ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಹಿಡಿದ್ದ ಕಾಂಗ್ರೆಸ್ ಈಗ ಚುನಾವಣಾ ಪೂರ್ವ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳ ಜಾರಿಗೆ ಹರ ಸಾಹಸ ಪಡುತ್ತಿದೆ.

ಕಾಂಗ್ರೆಸ್‌ ಸರ್ಕಾರದ (Congress Government) ಮಹತ್ವಾಕಾಂಕ್ಷಿ, ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ (Free Bus service) ಅವಕಾಶ ನೀಡುವ ಶಕ್ತಿ ಯೋಜನೆ (Shakti scheme) ಬಗ್ಗೆ ಜನರಿಗೆ ಒಳ್ಳೆಯ ಅಭಿಪ್ರಾಯ ಇರುವುದಕ್ಕಿಂತ ಹೆಚ್ಚಾಗಿ ನೆಗೆಟಿವ್ ಅಭಿಪ್ರಾಯ ಕೂಡ ಹೆಚ್ಚಿದೆ.

ಜೂನ್ 11ರಂದು ರಾಜ್ಯ ಸರ್ಕಾರ ಮಹತ್ವದ ಯೋಜನೆಯಾದ ಶಕ್ತಿ ಯೋಜನೆ(Shakthi Free Bus Effect) ಜಾರಿಯಾದ ಬಳಿಕ ಮಹಿಳಾಮಣಿಗಳಿಗೆ ಉಚಿತ ಪ್ರಯಾಣ ಎಂದ ಮೇಲೆ ರಾಜ್ಯದೆಲ್ಲೆಡೆಯು ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರ ದಂಡು ಸಾಗರೋಪಾದಿಯಲ್ಲಿ ತುಂಬಿ ಪುರುಷರಿಗೆ ಜೊತೆಗೆ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಬಸ್ ಹತ್ತಲು ಕೂಡ ಪರದಾಡುವ ಸ್ಥಿತಿ ಎದುರಾಗಿದೆ. ಶಕ್ತಿ ಯೋಜನೆಯು ಪ್ರಯೋಜನಕ್ಕಿಂತ ಹೆಚ್ಚಾಗಿ ಅವ್ಯವಸ್ಥೆಯಿಂದ ಕೂಡಿದೆ. ಮಕ್ಕಳು-ಹಿರಿಯ ನಾಗರಿಕರ ಮೇಲೆ ಗಂಭೀರ ಸ್ವರೂಪದ ಪರಿಣಾಮ ಬೀರುತ್ತಿದೆ. ರಾಜ್ಯದ ಆರ್ಥಿಕತೆಗೆ ಹೆಚ್ಚಿನ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದೆ ಎನ್ನಲಾಗಿದೆ.

ಶಕ್ತಿ ಯೋಜನೆಯಿಂದ ಮಹಿಳೆಯರು ಆಟೋ ಹತ್ತುವುದಿಲ್ಲ ಎಂಬ ದೂರು ಒಂದೆಡೆಯಾದರೆ ಮತ್ತೊಂದೆಡೆ ಮಹಿಳೆಯರ ದಟ್ಟಣೆಯಿಂದ ಮಕ್ಕಳು ಮತ್ತು ಪುರುಷರು ಬಸ್ ಹತ್ತಲು ಆಗದೇ ಕುಪಿತರಾಗಿದ್ದಾರೆ. ಸಾರ್ವಜನಿಕ ವಲಯದಲ್ಲಿ ಚರ್ಚೆಯಲ್ಲಿದ್ದ ಈ ವಿಚಾರ ಇದೀಗ ಹೈಕೋರ್ಟ್‌ (Karnataka Highcourt) ಮೆಟ್ಟಿಲೇರಿದೆ.

ವಿದ್ಯಾರ್ಥಿಗಳು ಸಲ್ಲಿಸಿರುವ ಪಟ್ಟಿಯಲ್ಲಿ ಇರುವ ಸಮಸ್ಯೆಗಳೇನು?
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆಯಿಂದ ಬಸ್ ಹಾಗೂ ಬಸ್ ನಿಲ್ದಾಣಗಳಲ್ಲಿ ಜನಸಂದಣಿ ಉಂಟಾಗಿ ಗದ್ದಲ ಹೆಚ್ಚಾಗಿದೆ.ಅಷ್ಟೇ ಅಲ್ಲದೆ, ಹಿರಿಯ ನಾಗರಿಕರು, ಮಕ್ಕಳು ಬಸ್‌ಗಳಲ್ಲಿ ಹತ್ತಲಾಗದೆ ನಿಗದಿತ ಸಮಯಕ್ಕೆ ವಿದ್ಯಾರ್ಥಿಗಳು ಶಾಲಾ-ಕಾಲೇಜು ತಲುಪುವುದು ಕಷ್ಟವಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರ ಅಶಿಸ್ತಿನ ನಡೆಗಳು ಹೆಚ್ಚಾಗಿದ್ದು, ಬಸ್‌ಗಳಲ್ಲಿ ಸೀಟಿಗಾಗಿ ಗಲಾಟೆ, ಹೊಡೆದಾಟದಂತಹ ಘಟನೆಗಳು ನಡೆಯುತ್ತಿವೆ.ಉಚಿತ ಪ್ರಯಾಣವು ಮಹಿಳೆಯರಿಗೆ ಪ್ರಯೋಜನಕ್ಕಿಂತ ಹೆಚ್ಚಿನ ಹಾನಿ ಉಂಟು ಮಾಡುತ್ತಿದೆ.

ರಾಜ್ಯದ ವಿವಿಧ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಶ್ವಿನಿ ಶಂಕರ್ ಭಟ್, ನೇಹಾ ವೆಂಕಟೇಶ್ ಮತ್ತು ಯಶಿಕಾ ಸರವಣನ್ ಹಾಗೂ ಇನ್ನೂ ಕೆಲವರುಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಅರ್ಜಿಯಲ್ಲಿ ರಾಜ್ಯ ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC )ಬೆಂಗಳೂರು ಮಹಾನಗರ ಸಾರಿಗೆ ನಿಗಮ (BMTC), ವಾಯುವ್ಯ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯುಕೆಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವನ್ನು (KKRTC) ಪ್ರತಿವಾದಿ ಮಾಡಲಾಗಿದ್ದು, ಹೈಕೋರ್ಟ್‌ನಲ್ಲಿ ಈ ಅರ್ಜಿ ವಿಚಾರಣೆ ಇನ್ನಷ್ಟೇ ನಡೆಯಬೇಕಾಗಿದೆ.

ಈ ನಡುವೆ ವಿದ್ಯಾರ್ಥಿಗಳು ಶಕ್ತಿ ಯೋಜನೆಯಲ್ಲಿ ಕೆಲ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
# ಟಿಕೆಟ್ ಖರೀದಿಸಿ ಪ್ರಯಾಣ ಮಾಡುವವರಿಗೆ ಶೇ.50ರಷ್ಟು ಸೀಟುಗಳಿಗೆ ಮೀಸಲಿಡಬೇಕು.
# ಶಾಲಾ ಮಕ್ಕಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಬೇಕು
# ಕಿಟಕಿ ಮತ್ತು ಚಾಲಕ ಸೀಟುಗಳ ಮೂಲಕ ಬಸ್‌ಗಳನ್ನು ಹತ್ತುವುದನ್ನು ತಡೆಯಬೇಕು.
# ಶಾಲಾ ಮಕ್ಕಳು ಹಿರಿಯ ನಾಗರಿಕರಿಗೆ ಬಸ್ ಹತ್ತಿ-ಇಳಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.
# ದೂರದ ಊರಿಗಳಿಗೆ ತೆರಳುವ ಬಸ್‌ಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಬಸ್‌ಗಳಲ್ಲಿ ಹತ್ತಲು ಮೊದಲು ಆದ್ಯತೆ ನೀಡಬೇಕು.

Leave A Reply

Your email address will not be published.