Mumbai: ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶ ನಕಾರ, ಭುಗಿಲೆದ್ದ ಪ್ರತಿಭಟನೆ

Mumbai College denied entry for the students who wearing burqa

Mumbai: ಮುಂಬೈ(Mumbai )ನಗರದ ಕಾಲೇಜೊಂದರಲ್ಲಿ (College) ವಿದ್ಯಾರ್ಥಿನಿಯರು ಬುರ್ಖಾ (Burqa) ಧರಿಸಿ ಬಂದ ವಿದ್ಯಾರ್ಥಿಯರನ್ನು ಕಾಲೇಜಿಗೆ ಕ್ಯಾಂಪಸ್‌ಗೆ ಪ್ರವೇಶಿಸಲು ನಿರ್ಬಂಧ ಹೇರಿದ ಘಟನೆ ವರದಿಯಾಗಿದೆ.

ಮುಂಬೈ ನಗರದ ಚೆಂಬೂರಿನ ಕಾಲೇಜಿನಲ್ಲಿ ಈ ಘಟನೆ ನಡೆದಿರುವುದು ವರದಿಯಾಗಿದೆ. ಕಾಲೇಜೊಂದರಲ್ಲಿ(College ) ಮುಸ್ಲಿಂ ವಿದ್ಯಾರ್ಥಿನಿಯರು( Muslim Students)ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಭದ್ರತಾ ಸಿಬ್ಬಂದಿ ತಡೆದಿದ್ದು,ಬುರ್ಖಾಗಳನ್ನು ತೆಗೆದರೆ ಮಾತ್ರ ಒಳಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ. ಇದರಿಂದ ಕೋಪಗೊಂಡ ಪೋಷಕರು(Parents )ವಿದ್ಯಾರ್ಥಿಗಳೊಂದಿಗೆ ಸೇರಿ ಕಾಲೇಜಿನ ಬಳಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.ಈ ಸಂದರ್ಭ ಪೊಲೀಸರು(Police)ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ

ಚೆಂಬೂರಿನ ಎನ್‌ಜಿ ಆಚಾರ್ಯ ಹಾಗೂ ಡಿಕೆ ಮರಾಠಿ ಕಾಲೇಜಿನ ಹೊಸ ಸಮವಸ್ತ್ರ ನಿಯಮ ಜಾರಿಗೆ ತರಲಾಗಿದೆ. ಇದರ ಅನುಸಾರ ವಿದ್ಯಾರ್ಥಿಗಳು ಬುರ್ಖಾ, ಹಿಜಬ್, ಸ್ಟಿಕ್ಕರ್‌ಗಳನ್ನು ಧರಿಸಲು ಅವಕಾಶವಿಲ್ಲ. ಈ ವೇಳೆ ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದ ಹಿನ್ನೆಲೆ ವಿದ್ಯಾರ್ಥಿಯರನ್ನು ಕಾಲೇಜಿನ ಭದ್ರತಾ ಸಿಬ್ಬಂದಿ ಗೇಟ್‌ನಲ್ಲೇ ತಡೆದು ನಿಲ್ಲಿಸಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ಆವರಣ ಪ್ರವೇಶಿಸಿದ ಕೂಡಲೇ ತರಗತಿಗೆ ಹಾಜರಾಗುವ ಮೊದಲು ವಿಶ್ರಾಂತಿ ಕೊಠಡಿಯಲ್ಲಿ ಬುರ್ಖಾ ತೆಗೆಯುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ.ಈ ನಡುವೆ,ಕಾಲೇಜಿನ ತರಗತಿಯಲ್ಲಿ ಸ್ಕಾರ್ಫ್ ಧರಿಸಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಒಪ್ಪಿಗೆ ನೀಡಿದ ಪರಿಣಾಮ ಉದ್ವಿಗ್ನ ವಾತಾವರಣ ತಿಳಿಯಾದ ಘಟನೆ ನಡೆದಿದೆ.

Leave A Reply

Your email address will not be published.