BIG NEWS: ‘ಡಿಸೆಂಬರ್’ನಲ್ಲಿ ಯುವನಿಧಿ, ಆಗಸ್ಟ್.24ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ – CM ಸಿದ್ಧರಾಮಯ್ಯ ಘೋಷಣೆ

Congress guarantee updates Yuvanidhi in December and Gruhalakshmi Yojana launched on August 24 says CM Siddaramaiah

Gruha Jyothi Scheme: ಕಾಂಗ್ರೆಸ್ ನ (Congress)ಈ ಐದು ಗ್ಯಾರೆಂಟಿಗಳ ಮೂಲಕ ಐತಿಹಾಸಿಕ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಚುನಾವಣಾ ಪೂರ್ವ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹರಸಾಹಸ ಪಡುತ್ತಿದೆ. ಬಹು ನಿರೀಕ್ಷಿತ ‘ಗೃಹ ಜ್ಯೋತಿ’(Gruha Jyothi Scheme) ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಸ್ಟ್ 5ರಂದು (ಇಂದು)ಶನಿವಾರ ಅಧಿಕೃತವಾಗಿ ಚಾಲನೆ ನೀಡಿದರು.

ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯಡಿ ಪ್ರತೀ ಫಲಾನುಭವಿ ಕುಟುಂಬಗಳಿಗೆ ತಲಾ 200 ಯೂನಿಟ್ (200 Units)ವಿದ್ಯುತ್ ಉಚಿತವಾಗಿ ಪಡೆಯುವ ಯೋಜನೆ ಯಾವಾಗ ಜಾರಿಯಾಗಲಿದೆ ಎಂದು ಎದುರು ನೋಡುತ್ತಿದ್ದ ಜನತೆಗೆ ಗುಡ್ ನ್ಯೂಸ್ ಲಭ್ಯವಾಗಿದೆ. ಇಂದು ಗೃಹ ಜ್ಯೋತಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ(Siddaramaiah)ಅವರು ಚಾಲನೆ ನೀಡಲಾಗಿದೆ.

ಗೃಹ ಜ್ಯೋತಿ ಯೋಜನೆಯ ನೋಂದಣಿ ಜುಲೈ 1 ರಂದು ಪ್ರಾರಂಭವಾಗಿದೆ. 2.5 ಕೋಟಿ ಅರ್ಹ ಫಲಾನುಭವಿಗಳಲ್ಲಿ ಶೇಕಡಾ 60 ಕ್ಕಿಂತ ಹೆಚ್ಚು ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದ ಬಳಿಕ, ಆಗಸ್ಟ್ 24ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆಯನ್ನು ನೀಡಲಾಗಲಿದ್ದು, ಡಿಸೆಂಬರ್ ನಲ್ಲಿ ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವ ಕುರಿತು ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಇಂಧನ ಸಚಿವ ಕೆ.ಜೆ. ಜಾರ್ಜ್,‌ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ರಹೀಂ ಖಾನ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: ISRO:ಚಂದ್ರನ ಸನಿಹಕ್ಕೆ ಧಾವಿಸುತ್ತಿದೆ ಇಸ್ರೋ, ಬರೋಬ್ಬರಿ 2.6 ಲಕ್ಷ ಕಿ.ಮೀ ನಾಗಾಲೋಟ, ಇವತ್ತೇ ನಿರ್ಣಾಯಕ !

Leave A Reply

Your email address will not be published.