KPCL: ಕೆಪಿಸಿಎಲ್‌ನಿಂದ ಉದ್ಯೋಗಾವಕಾಶ! ಅರ್ಜಿ ಸಲ್ಲಿಸಲು ಸೆ.7 ಕೊನೆಯ ದಿನಾಂಕ!

Government jobs Karnataka power corporation limited recruitment 2023 apply for legal service head post

KPCL legal services head vacancy 2023:ಇಂದಿನ ಕಾಲದಲ್ಲಿ ಉದ್ಯೋಗ ಅತ್ಯವಶ್ಯಕವಾಗಿದೆ. ಆದರೆ, ಬಯಸಿದ ಉದ್ಯೋಗ(Job) ಪಡೆಯುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆ ನೆಚ್ಚಿನ ಕೆಲಸ ಗಿಟ್ಟಿಸಿಕೊಳ್ಳೋದು ಯುವಜನತೆಯ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ, ಉದ್ಯೋಗ ಅರಸುತ್ತಿರುವ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ.

ಕರ್ನಾಟಕ ಪವರ್ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿ (KPCL legal services head vacancy 2023)ಖಾಲಿ ಇರುವ ಕಾನೂನು ವಿಭಾಗದ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.

ಹುದ್ದೆಯ ವಿವರ ಹೀಗಿದೆ:
ನೇಮಕಾತಿ ಪ್ರಾಧಿಕಾರ : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ
ಹುದ್ದೆ ಹೆಸರು : ಮುಖ್ಯಸ್ಥರು (ಕಾನೂನು ಸೇವೆಗಳು)
ಹುದ್ದೆಗಳ ಸಂಖ್ಯೆ : 01
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಅಧಿಕೃತ ವೆಬ್‌ಸೈಟ್‌ ವಿಳಾಸ : https://kpcl.karnataka.gov.in/

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ (KPCL Recruitment)ಕಾನೂನು ಮುಖ್ಯಸ್ಥರ ಹುದ್ದೆ ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಈ ಹುದ್ದೆಯನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 07-09-2023 ಕೊನೆಯ (Last Date)ದಿನವಾಗಿದ್ದು, ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರ ಅರ್ಹತೆ ಪಡೆದಿರಬೇಕು.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ: 60 ರಿಂದ 70 ವರ್ಷಗಳು ಆಗಿದ್ದು, ಸಂದರ್ಶನ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗೆ ಮಾಸಿಕ ಸಂಭಾವನೆ : Rs.60,500. ಆಗಿರಲಿದೆ.ಇದರ ಜೊತೆಗೆ1000 ಆತಿಥ್ಯ ಭತ್ಯೆ, ವಾಹನ ಸೌಕರ್ಯ ಹಾಗೂ ಸ್ಥಿರ ದೂರವಾಣಿ ಸೇವೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ನಿಗಮದ ವೆಬ್‌ಸೈಟ್‌ಗೆ ಭೇಟಿ ನೀಡಿ  https://kpcl.karnataka.gov.in ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಆ ಬಳಿಕ ವಿದ್ಯಾರ್ಹತೆ / ಅನುಭವಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸಿ ಇ-ಮೇಲ್ ವಿಳಾಸ – [email protected] ಗೆ ಕಳುಹಿಸಬೇಕು. ಇಲ್ಲಿ ಅರ್ಜಿದಾರರು ಗಮನಿಸಬೇಕಾದ ಸಂಗತಿ ಏನೆಂದರೆ, ನಿಗದಿತ ಸಮಯ / ದಿನಾಂಕದ ನಂತರ ಸ್ವೀಕೃತಗೊಂಡ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
https://kpcl.karnataka.gov.in/storage/pdf-files/HLS-CONTRACT-2023.pdf

ಇದನ್ನೂ ಓದಿ:Education News: ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈ ಕೋರ್ಟ್: ಒಂದನೇ ತರಗತಿ ಪ್ರವೇಶ ಪಡೆಯಲು 6 ವರ್ಷ ತುಂಬಿರುವುದು ಕಡ್ಡಾಯ!

Leave A Reply

Your email address will not be published.