Liquor Sale Ban:ಜಿಲ್ಲೆಯಲ್ಲಿ ಅಲ್ಲಲ್ಲಿ ಇನ್ನು ಮೂರು ದಿನ ಮದ್ಯ ಮಾರಾಟ ನಿಷೇಧ: ಇಂದಿನಿಂದಲೇ ಜಾರಿ!

Kodagu news sale of liquor will be banned in these areas for 3 days

Liquor Sale: ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ. ಈ ಜಿಲ್ಲೆಯಲ್ಲಿ ಇಂದು ಸೇರಿದಂತೆ ಇನ್ನೂ ನಾಲ್ಕು ದಿನಗಳವರೆಗೆ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಇಂದು, ಆಗಸ್ಟ್, 12ರಂದು, 13 ಮತ್ತು 14ರಂದು ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ ಕೊಡಗು(Coorg )ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

ಆಗಸ್ಟ್, 11 ರ ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್, 13 ರ ಬೆಳಗ್ಗೆ 6 ಗಂಟೆಯವರೆಗೆ ಮಾದಾಪುರ ಮತ್ತು ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ( Liquor Sale)ನಿಷೇಧ ಹೇರಲಾಗಿದೆ. ಇದರ ಜೊತೆಗೆ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಪಟ್ಟಣ ವ್ಯಾಪ್ತಿಯ ಸುತ್ತಮುತ್ತಲಿನ 10 ಕಿ,ಮೀ.ವರೆಗೆ ಆಗಸ್ಟ್, 12 ರಂದು ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್, 13 ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿದೆ.

ಕುಶಾಲನಗರ ಪಟ್ಟಣ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್, ರೆಸ್ಟೋರೆಂಟ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಆಗಸ್ಟ್, 14 ರ ಮುಂಜಾನೆ 6 ಗಂಟೆಯಿಂದ ಆಗಸ್ಟ್, 14 ರ ಮಧ್ಯರಾತ್ರಿ 12 ಗಂಟೆಯವರೆಗೆ ಸಂಪೂರ್ಣವಾಗಿ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Golden Star Ganesh: ಬಂಡೀಪುರ ವ್ಯಾಪ್ತಿಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ರೆಸಾರ್ಟ್ಸ್? ಕಾಮಗಾರಿಗೆ ಬ್ರೇಕ್​ ಕೊಡ್ತಾ ಆಡಳಿತ ?!

Leave A Reply

Your email address will not be published.