Lokayukta Raid: ಲೋಕಾಯುಕ್ತ ದಾಳಿ : ಐದು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ

Bengaluru news Lokayukta Raid Simultaneous operation in five districts

Lokayukta raid: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವೆಡೆ ಇಂದು ದಾಳಿ ನಡೆಸಿ ಮುಂಜಾನೆಯ ಸುಖ ನಿದ್ರೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಹಿನ್ನೆಲೆ ಬೆಂಗಳೂರು , ಕೊಡಗು, ಚಿತ್ರದುರ್ಗ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ(lokayukta raid) ಅಧಿಕಾರಿಗಳಿಗಳು ದಾಳಿ ನಡೆಸಿದ್ದಾರೆ.

ಮಹದೇವಪುರ ವಲಯದ ಬಿಬಿಎಂಪಿ ಆರ್‌ಐ ನಟರಾಜ್, ಚಿತ್ರದುರ್ಗದ ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್, ಪತ್ನಿ ಬಿಬಿಎಂಪಿ ಎಇ ಹೆಚ್.ಭಾರತಿ ಮನೆ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ನಾಗರಾಜು ಅವರ ಮನೆ ಹಾಗೂ ಕಚೇರಿ, ಕೊಡುಗು ಎಡಿಸಿ ನಂಜುಂಡೇಗೌಡ ಮನೆ, ಕೊಪ್ಪಳ ನಿರ್ಮಿತಿ ಕೇಂದ್ರದ ಕಚೇರಿ ವ್ಯವಸ್ಥಾಪಕ ಮಂಜುನಾಥ ಬನ್ನಿಕೊಪ್ಪ ಅವರ ಮನೆ, ಹುಲಗಿಯಲ್ಲಿನ ಲಾಡ್ಜ್, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿ ಆರ್.ಎಫ್.ಒ ಸತೀಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿರುವ ಕೆ.‌ಮಹೇಶ್, ಕೆ.ಭಾರತಿ ದಂಪತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಅಟ್ಯಾಕ್ ಮಾಡಿದ್ದು, ದಾಳಿಯ ವೇಳೆ 15 ಲಕ್ಷ ರೂ.ಗಿಂತಲೂ ಅಧಿಕ ನಗದು, 1 ಕೆಜಿಗೂ ಅಧಿಕ ಚಿನ್ನಾಭರಣ ಪತ್ತೆಯಾಗಿದೆ. ಈ ಹಿಂದೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಹಾಗೂ ಪಿಆರ್‌ಇಡಿ ಇಲಾಖೆಯಲ್ಲಿ ಕೆಲಸ‌ಮಾಡಿದ್ದ ಕೆ.‌ಭಾರತಿ ಮಹೇಶ್ ಮನೆ ಮೇಲೆ ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾವ್ ನೇತೃತ್ವದಲ್ಲಿ ದಾಳಿ ನಡೆದಿದೆ

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ 11 ವರ್ಷದ ಬಾಲಕನ ಕೊಲೆ; ʼಅಮೂಲ್ಯ ವಸ್ತುವನ್ನು ನಾನು ಕಿತ್ಕೊಂಡಿದ್ದೇನೆʼ ಎಂದ ಪ್ರೇಯಸಿ!!

Leave A Reply

Your email address will not be published.