Hariprasad: ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗ ಟೀಕೆ ಹಿನ್ನೆಲೆ; ಬಿ.ಕೆ. ಹರಿಪ್ರಸಾದ್ ಗೆ ಎಐಸಿಸಿ‌ ಶೋಕಾಸ್ ನೋಟೀಸ್

AICC serves show couse notice to Hariprasad

Hariprasad: ನವದೆಹಲಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ‌ ಕಾಂಗ್ರೆಸ್ ಹಿರಿಯ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್(Hariprasad) ಗೆ ನೋಟಿಸ್‌ ನೀಡಲಾಗಿದೆ.

ಎಐಸಿಸಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ನೀಡಲಾಗಿದ್ದು, ಹತ್ತು ದಿನಗಳೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ.ಕಳೆದ ಶನಿವಾರ ಬೆಂಗಳೂರಿನಲ್ಲಿ ಅತಿ‌ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್ ಬಹಿರಂಗವಾಗಿ ಟೀಕಿಸಿದ್ದರು.

ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿಯವರನ್ನು ಸಿದ್ಧರಾಮಯ್ಯ ಭೇಟಿ ಮಾಡಿದ್ದರು ಎಂದು ಹೇಳಿದ್ದ ಹರಿಪ್ರಸಾದ್ ವಿರುದ್ ಹೈಕಮಾಂಡ್ ಬಳಿ ಸಿದ್ಧರಾಮಯಯ್ಯ ತೀವ್ರ ಅಸಮಾಧಾನ ಹೊರ ಹಾಕಿದ್ದರು.

ಅಲ್ಲದೇ, ಬಿಜೆಪಿ ಹಾಗೂ ವೈಎಸ್ಆರ್ ಕಾಂಗ್ರೆಸ್ ನಾಯಕರೊಂದಿಗೆ ಹರಿಪ್ರಸಾದ್ ವೇದಿಕೆ ಹಂಚಿಕೊಂಡ ಬಗ್ಗೆಯೂ ಕೂಡ ನೊಟೀಸ್ ನಲ್ಲಿ ಉಲ್ಲೇಖ ಮಾಡಲಾಗಿದೆ.

Leave A Reply

Your email address will not be published.