ಬೆಂಗಳೂರಿನ ಮಸಾಲಾ ಚಹಾಕ್ಕೆ ಫಿದಾ ಆದ ನೆದರ್‌ಲ್ಯಾಂಡ್ ಪ್ರಧಾನಿ; ಅಂತಹ ಅದ್ಭುತ ಟೀ ಎಲ್ಲಿ ಸಿಗುತ್ತೆ ಗೊತ್ತಾ?

National news Netherlands PM enjoys masala chai on Bengaluru Church Street pays through UPI

Bengaluru: ಎರಡು ದಿನಗಳ ಬೆಂಗಳೂರು(Bengaluru) ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ದೇಶದ ಪ್ರಧಾನಿ ಮಾರ್ಕ್ ರುಟ್ಟೆ ಭಾರತ ಹಾಗೂ ನೆದರ್‌ಲ್ಯಾಂಡ್ಸ್ ರಾಷ್ಟ್ರಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ತೆರೆದುಕೊಂಡು 75 ವರ್ಷಗಳಾಗಿರುವ ಸಂದರ್ಭದ ಸವಿನೆನಪಿಗಾಗಿ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಸಂಚರಿಸಿ ಚಹಾ ಸವಿದರು.

ಬ್ರಿಗೇಡ್ ರಸ್ತೆಯಿಂದ ಕಾಲ್ನಡಿಗೆ ಮೂಲಕ ಚರ್ಚ್ ಸ್ಟ್ರೀಟಿನ ಚಾಯ್‌ ಪಾಯಿಂಟ್‌ಗೆ ಆಗಮಿಸಿ ಮಸಾಲಾ ಚಹ ಖರೀದಿಸಿ ಸವಿದು ಯುಪಿಐ ಮೂಲಕ ಹಣ ಪಾವತಿ ಮಾಡಿದರು.

ಬಳಿಕ ತಮ್ಮ ಸಂಗಡಿಗರೊಂದಿಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಚರ್ಚ್‌ ಸ್ಟ್ರೀಟಿನ ಬೇರಿ ಸರ್ಕಲ್‌‌ವರೆಗೆ ಕಾಲ್ನಡಿಗೆಯಲ್ಲಿಯೇ ಬಂದರು. ತಕ್ಷಶಿಲಾ ಇನ್‌ಸ್ಟಿಟ್ಯೂಷನ್ ಗೋಡೆಯ ಮೇಲೆ ಭಾರತ ಹಾಗೂ ನೆದರ್‌ಲ್ಯಾಂಡ್ಸ್ ದ್ಯೋತಕವಾಗಿ ಬರೆಯಲಾಗಿರುವ ಸಿಂಹದ ವರ್ಣಚಿತ್ರ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.

ಸರಳ ಭದ್ರತೆಯ ನಡುವೆ ಯಾವುದೇ ಹೆಚ್ಚು ಅಂತರಗಳನ್ನಿಟ್ಟುಕೊಳ್ಳದೇ ಸಾರ್ವಜನಿಕರು ಹಾಗೂ ಮಾಧ್ಯಮದವರೊಂದಿಗೆ ಬೆರೆತ ನೆದರ್‌ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಜನರ ಬಳಿ ತೆರಳಿ ಕೈ ಕುಲುಕಿದರು.

ಚಿಕ್ಕ ಮಗುವೊಂದನ್ನು ಕಂಡು ಖುಷಿಯಾದ ನೆದರ್ಲ್ಯಾಂಡ್ಸ್ ಪ್ರಧಾನಿ ಮಗುವಿನತ್ತ ವಿಶೇಷ ಪ್ರೀತಿ ಸೂಚಿಸಿದರು. ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಬಂದ ಸಾರ್ವಜನಿಕರೊಂದಿಗೆ ಬೆರೆತು ತಾವೇ ಖುದ್ದಾಗಿ ಜನರ ಮೊಬೈಲ್ ಫೋನ್ ಗಳಲ್ಲಿ ಸೆಲ್ಫಿ ತೆಗೆದುಕೊಟ್ಟರು

ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಲ್ಲಿ ಒಮ್ಮೆಲ್ಲೇ ಪ್ರಜ್ಞೆ ತಪ್ಪಿ ಬಿದ್ದ 8 ಪ್ರಯಾಣಿಕರು; ಅಯ್ಯೋ ಟ್ರೈನ್ ನಲ್ಲಿ ಇದ್ದಕ್ಕಿದ್ದಂತೆ ಅಂತಹದ್ದೇನಾಯ್ತು?

Leave A Reply

Your email address will not be published.