ಸೌಜನ್ಯ ಪ್ರಕರಣದ ಮರು ತನಿಖೆ: ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ ಆರಂಭ !

ಮಂಗಳೂರು: ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಾಂಸ್ಥಿಕ ರೂಪ ಪಡೆದುಕೊಂಡಿದೆ. ಇವತ್ತಿನಿಂದ ಮಹಾತ್ಮಾ ಗಾಂಧೀಜಿಯ ಸತ್ಯಾಗ್ರಹದ ಮಾದರಿಯಲ್ಲಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಎರಡು ದಿನಗಳ ಕಾಲ ಧರಣಿ ಪ್ರಾರಂಭವಾಗಿದೆ. ಧರಣಿ ಸತ್ಯಾಗ್ರಹವು ಮಂಗಳೂರಿನ ಮಿನಿ ವಿಧಾನ ಸೌಧದ ಎದುರು, ಕ್ಲಾಕ್ ಟವರ್ ಪಕ್ಕ ಇಂದು ಮಂಗಳವಾರ ಆರಂಭಗೊಂಡಿದೆ.

ಸೌಜನ್ಯಾ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರ ಮೂಲಕ ಮರು ತನಿಖೆ ನಡೆಸಬೇಕು, ಪ್ರಕರಣದ ತನಿಖಾಧಿಕಾರಿಯನ್ನು, ವೈದ್ಯರನ್ನು ತನಿಖೆಗೆ ಒಳಪಡಿಸಬೇಕು, ಮರು ತನಿಖೆಗೆ ಸರ್ಕಾರವು ಆದೇಶ ಮಾಡುವವರೆಗೂ ನಮ್ಮ ಪ್ರತಿಭಟನೆ ಹೀಗೆ ಮುಂದುವರಿಯುತ್ತದೆ ಎಂದು ಧರಣಿ ನಿರತರು ಎಚ್ಚರಿಸಿದ್ದಾರೆ.

Leave A Reply

Your email address will not be published.