ಮಂಗಳೂರು; ಕೇವಲ ಒಂದೂವರೆ ತಿಂಗಳ ಹಿಂದೆ ವಿವಾಹವಾಗಿದ್ದ ಕಾನ್ಸ್ಟೇಬಲ್ ನೇಣಿಗೆ ಶರಣು

ಮಂಗಳೂರು: ಕೇವಲ ಒಂದೂವರೆ ತಿಂಗಳ ಹಿಂದೆ ವಿವಾಹವಾಗಿದ್ದ ಕಾನ್ಸ್ಟೇಬಲ್ ನೇಣಿಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿಯ ಮಹೇಶ್ (31) ಮೃತ ದುರ್ದೈವಿ. ನಗರದ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಕೌಟುಂಬಿಕ ಕಲಹದಿಂದ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಮಹೇಶ್ ಅವರಿಗೆ ಇತ್ತೀಚಿಗೆ ಮದುವೆಯಾಗಿತ್ತು. ಆತ ಗುರುವಾರ ಮಂಗಳೂರಿನ ಕಪಿತಾನಿಯೊ ಬಳಿಯ ಸೈಮನ್ ಲೈನ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ಗುರುವಾರ ಅವರ ಮನೆಯಲ್ಲಿ ಅವರ ದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅವರು 2018 ರಲ್ಲಿ ಪೊಲೀಸ್ ಇಲಾಖೆಗೆ ನೇಮಕ ಆಗಿದ್ದರು. ಅವರು ಹಾಸನದಲ್ಲಿ ತರಬೇತಿ ಪಡೆದು 2019 ರಲ್ಲಿ ಮಂಗಳೂರು ಸಂಚಾರಿ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಇದೀಗ ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.